Nandi Hills ropeway: 2025ರ ಮಾರ್ಚ್‌ಗೆ ನಂದಿ ಬೆಟ್ಟದಲ್ಲಿ ರೋಪ್‌ವೇ; ಒಪ್ಪಂದಕ್ಕೆ ಪ್ರವಾಸೋದ್ಯಮ ಇಲಾಖೆ ಸಹಿ
ಪಕ್ಷಿಶಾಸ್ತ್ರಜ್ಞರು, ಸಂರಕ್ಷಣಾ ತಜ್ಞರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರೂ ರಾಜ್ಯ ಸರ್ಕಾರ ನಂದಿ ಬೆಟ್ಟದಲ್ಲಿ ರೋಪ್‌ವೇ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ.
ಬೆಂಗಳೂರು, ಫೆಬ್ರವರಿ. 15: ನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್‌ವೇ ಯೋಜನೆಗೆ ಸಿದ್ಧವಾಗಿದ್ದು, ರಾಜ್ಯ ಪ್ರವಾಸೋದ್ಯಮ ಇಲಾಖೆಯು ರೋಪ್‌ವೇ ಒಪ್ಪಂದಕ್ಕೆ ಸಹಿ ಹಾಕಿದೆ.
ನಂದಿ ಬೆಟ್ಟದಲ್ಲಿ ಮಾರ್ಚ್ 2025 ರೊಳಗೆ ರೋಪ್ ವೇ ಕಾರ್ಯಾಚಾರನೆ ಆರಂಭಿಸಬೇಕು ಎಂದು ಗಡುವು ನಿಗದಿಪಡಿಸಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ.
"ಮಂಗಳವಾರ ಈ ಬಗ್ಗೆ ಘೋಷಣೆ ಮಾಡಲಾಗಿದೆ. ಯೋಜನೆಯು ಕಾರ್ಯಗತಗೊಳಿಸಲು ಎರಡು ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಸುಮಾರು ಎರಡು ವರ್ಷಗಳ ಹಿಂದೆ ನಡೆಸಲಾದ ಕಾರ್ಯಸಾಧ್ಯತೆಯ ಅಧ್ಯಯನವನ್ನು ಕಾರ್ಯಗತಗೊಳಿಸಲಾಗುತ್ತಿದೆ. ಮಾರ್ಚ್ 2025 ರೊಳಗೆ ಯೋಜನೆ ಮುಗಿಯಬೇಕು' ಎಂದು ಪ್ರವಾಸೋದ್ಯಮ ನಿರ್ದೇಶಕ ವಿ ರಾಮ್ ಪ್ರಸಾಥ್ ಮನೋಹರ್ ತಿಳಿಸಿದ್ದಾರೆ.

ಸ್ಥಳೀಯರು ಮತ್ತು ಕಾರ್ಯಕರ್ತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಹಿಂದೆ ಚಾಮುಂಡಿ ಬೆಟ್ಟದಲ್ಲಿ ರೋಪ್‌ವೇ ಯೋಜನೆ ಕೈಗೊಳ್ಳುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಆದರೆ, ನಂದಿಬೆಟ್ಟದ ವಿಚಾರದಲ್ಲಿ ಪಕ್ಷಿಶಾಸ್ತ್ರಜ್ಞರು, ಸಂರಕ್ಷಣಾ ತಜ್ಞರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರೂ ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಕ್ಕೆ ಒಲವು ತೋರಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ರೋಪ್‌ವೇ ಯೋಜನೆಯನ್ನು 12 ಎಕರೆ ಭೂಮಿಯಲ್ಲಿ ಮಾಡಲಾಗುತ್ತಿದ್ದು, ಅದರಲ್ಲಿ 10 ಎಕರೆ ಕಂದಾಯ ಇಲಾಖೆಗೆ ಒಳಪಟ್ಟಿದ್ದು, ಅಲ್ಲಿ ಕೆಲಸ ಪ್ರಾರಂಭವಾಗಲಿದೆ. ಪ್ರವಾಸೋದ್ಯಮ ಇಲಾಖೆಯು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಸಲ್ಲಿಸಲಿದೆ' ಎಂದು ವಿ ರಾಮ್ ಪ್ರಸಾಥ್ ಮನೋಹರ್ ತಿಳಿಸಿದರು.
2.93 ಕಿ.ಮೀ ಉದ್ದದ ಈ ರೋಪ್‌ವೇ ಯೋಜನೆಗೆ 93.40 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುವುದು. ಕಂಪನಿಯು 30 ವರ್ಷಗಳ ಅವಧಿಯಲ್ಲಿ ಯೋಜನೆಯ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ ಮಾದರಿಯನ್ನು ಅಭಿವೃದ್ಧಿಪಡಿಸುತ್ತದೆ.

ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಮಾತನಾಡಿ, ರೋಪ್‌ವೇ ಪ್ರವಾಸಿಗರು ಬೆಟ್ಟವನ್ನು ತಲುಪುವ ಸಮಯವನ್ನು ಕಡಿತಗೊಳಿಸುತ್ತದೆ. ಜೊತೆಗೆ ಮಾಲಿನ್ಯವನ್ನೂ ಕಡಿಮೆ ಮಾಡುತ್ತದೆ. ಸಂಪರ್ಕವನ್ನು ಸುಧಾರಿಸುತ್ತಾ, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ ಎಂದು ಹೇಳಿದ್ದಾರೆ.












Click it and Unblock the Notifications