ಚುನಾವಣೆಗೂ ಮುನ್ನ ಮಹಿಷಿ ವರದಿ ಜಾರಿಗೆ ನಾರಾಯಣ ಗೌಡ ಆಗ್ರಹ
ಬೆಂಗಳೂರು, ಡಿಸೆಂಬರ್ 23 : ಡಾ.ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಕೂಡಲೇ ಜಾರಿ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಆಗ್ರಹಿಸಿದ್ದಾರೆ.
1 ರಿಂದ 10 ನೇ ತರಗತಿಯನ್ನು ಕನ್ನಡದಲ್ಲಿ ಓದಿರುವ ವವರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕೆಂದು ಸರೋಜಿನಿ ಮಹಿಶಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಲ್ಲಾ ಪಕ್ಷಗಳು ಭಾಷಾ
ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿ ಕನ್ನಡಿಗರನ್ನು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕನ್ನಡಿಗರ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ಮಾಡಿರುವ ವರದಿಯನ್ನು ಚುನಾವಣೆ ಮೊದಲೇ ಬಿಡುಗಡೆ ಮಾಡುತ್ತದೆ ಎನ್ನುವ ವಿಶ್ವಾಸವಿದೆ. ಚುನಾವಣೆ ಬರುವ
ಮುನ್ನ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಹೋರಾಟ ಮುಂದುವರೆಸುವುದಾಗಿ ತಿಳಿಸಿದರು.
ರಾಜ್ಯಸ ಸರ್ಕಾರದ ಎಲ್ಲ ಇಲಾಖೆಗಳು ಮತ್ತು ರಾಜ್ಯ ಸರ್ಕಾರ ಸ್ವಾಮ್ಯದ ಎಲ್ಲ ಉದ್ದಿಮೆಗಳಲ್ಲಿ ಕರ್ನಾಟಕದ ಅಭ್ಯರ್ಥಿಗಳನ್ನೇ ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಬೇಕು. ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ
ಬಗೆಯ ಖಾಸಗಿ ಉದ್ಯಮಗಳಲ್ಲಿ ಕನಿಷ್ಟ 10 ನೇ ತರಗತಿಯವರೆಗೆ ಒಂದು ಭಾಷೆಯಾಗಿ ಕನ್ನಡವನ್ನು ಓದಿ, ಉತ್ತೀರ್ಣರಾಗಿರುವ ಕರ್ನಾಟಕದ ಅಭ್ಯರ್ಥಿಗಳನ್ನೇ ಉದ್ಯೋಗಕ್ಕಾಗಿ ನೇಮಕ ಮಾಡಿಕೊಳ್ಳಬೇಕು ಎಂದರು.












Click it and Unblock the Notifications