Breaking; ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ, 12 ಗಂಟೆಗೆ ಆಗಮನ
ಬೆಂಗಳೂರು, ಜೂನ್ 20; ಭಾರತದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ಸೋಮವಾರ ಆರಂಭವಾಗಲಿದೆ. ಎರಡು ದಿನಗಳ ರಾಜ್ಯ ಪ್ರವಾಸದಲ್ಲಿ ಮೋದಿ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೋಮವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದಾರೆ. ಈ ಮೂಲಕ ಎರಡು ದಿನಗಳ ಪ್ರಧಾನಿಗಳ ಪ್ರವಾಸ ಆರಂಭವಾಗಲಿದೆ.
ಪ್ರಧಾನಿ ಮೋದಿ ಸೋಮವಾರ ಸಂಜೆಯ ತನಕ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸಂಜೆ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಮಂಗಳವಾರ ಮೈಸೂರು ಅರಮನೆ ಮುಂಭಾಗ ನಡೆಯುವ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ.

ಮೋದಿ ಭೇಟಿ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರಧಾನಿ ಸಂಚಾರ ನಡೆಸುವ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಹಲವು ನಿರ್ಬಂಧ ವಿಧಿಸಲಾಗಿದೆ. ಮೋದಿ ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೋದಿ ಬೆಂಗಳೂರು ಕಾರ್ಯಕ್ರಮಗಳು
* 12 ಗಂಟೆಗೆ ಯಲಹಂಕ ವಾಯುನೆಲೆಗೆ ಆಗಮನ
* ಹೆಲಿಕಾಪ್ಟರ್ ಮೂಲಕ ಐಐಎಸ್ಸಿಗೆ ಭೇಟಿ
* ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆ, ಬಾಗಚಿ ಪಾರ್ಥಸಾರಥಿ ಆಸ್ಪತ್ರೆಗೆ ಶಂಕು ಸ್ಥಾಪನೆ
* 1.15ಕ್ಕೆ ಹೆಲಿಕಾಪ್ಟರ್ ಮೂಲಕ ಕೊಮ್ಮಘಟ್ಟಕ್ಕೆ ಪ್ರಯಾಣ
* 3 ಗಂಟೆಯ ತನಕ ಸಬ್ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ ಕಾರ್ಯಕ್ರಮ
* 3.45 ರಿಂದ 4.30ರ ತನಕ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ
* ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ, ಉನ್ನತೀಕರಿಸಿದ ಐಟಿಐಗಳ ಉದ್ಘಾಟನೆ

* 5 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ
* ಸಂಜೆ 6 ರಿಂದ 7.15ರ ತನಕ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶದಲ್ಲಿ ಭಾಗಿ
* 7.30 ರಿಂದ 8 ಗಂಟೆ ತನಕ ಸುತ್ತೂರು ಮಠಕ್ಕೆ ಭೇಟಿ
(1/2)ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ. ಸಂಚಾರ ಮಾರ್ಗದಲ್ಲಿ ಬದಲಾವಣೆ#Bengaluru #PMModi #Narendramodi @blrcitytraffic #Modiinbengaluru #ಒನ್ಇಂಡಿಯಾಕನ್ನಡಸುದ್ದಿ pic.twitter.com/hxinGQbKhN
— oneindiakannada (@OneindiaKannada) June 20, 2022
* 8.15 ರಿಂದ 8.30 ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ
* 8.55 ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ











Click it and Unblock the Notifications