ಆಡ್ವಾಣಿ 'ಗುರು'ಗಳ ಬಳಿಗೆ ನರೇಂದ್ರ ಮೋದಿ
ಬೆಂಗಳೂರು, ನ.13: ನಗರದ ತುಂಬಾ 'ಭಾರತ ಗೆಲ್ಲಿಸಿ' ಬ್ಯಾನರ್, ಪೋಸ್ಟರ್ ತುಂಬಿಸುವಲ್ಲಿ ಬಿಜೆಪಿ ಕಾರ್ಯಕರ್ತರು, ಶಾಸಕರು ನಿರತರಾಗಿದ್ದಾರೆ. ಪೊಲೀಸರಿಗೆ ಭದ್ರತಾ ವ್ಯವಸ್ಥೆ ಚಿಂತೆಯಾಗಿದೆ. ಈ ನಡುವೆ ಮೋದಿ ಅವರು ಅಡ್ವಾಣಿ ಅವರ 'ಗುರು' ಗಳ ಆಶೀರ್ವಾದ ಬೇಡಿ ಬರುತ್ತಾರೆ ಎಂಬ ಸುದ್ದಿ ಹೊರ ಬಿದ್ದಿದೆ.
ನಗರದ ಅರಮನೆ ಮೈದಾನದಲ್ಲಿ ನಡೆಯುವ 'ಭಾರತ ಗೆಲ್ಲಿಸಿ' ಸಮಾವೇಶಕ್ಕೆ ಬಿಜೆಪಿ ಪ್ರಧಾನಿ ಅಭ್ಯರ್ಥಿ, ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ನ.17 ರಂದು ಬೆಳಗ್ಗೆ ಖಾಸಗಿ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬೆಳಗ್ಗೆ ಸುಮಾರು 10 ಗಂಟೆ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಮೋದಿ ಅವರು ಬಿಗಿ ಭದ್ರತೆ ನಡುವೆ ಮೊದಲಿಗೆ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ಕೊಟ್ಟು ರವಿಶಂಕರ್ ಗುರೂಜಿ ಅವರ ಆಶೀರ್ವಾದ ಪಡೆಯಲಿದ್ದಾರೆ.

ಅಲ್ಲಿಂದ ನೇರವಾಗಿ ಶ್ರೀನಿವಾಸನಗರ ಬಳಿ ಇರುವ ವಿದ್ಯಾಪೀಠಕ್ಕೆ ಆಗಮಿಸಿ ಉಡುಪಿಯ ಪೇಜಾವರ ಮಠ ಶ್ರೀಗಳಾದ ವಿಶ್ವೇಶತೀರ್ಥ ಶ್ರೀಪಾದಂಗಳವರಲ್ಲಿ ಆಶೀರ್ವಾದ ಬೇಡಲಿದ್ದಾರೆ. ಕನಿಷ್ಠ ಒಂದು ಗಂಟೆಗಳ ಕಾಲ ಪೇಜಾವರ ಶ್ರೀಗಳ ಜತೆ ಮಾತುಕತೆಗೆ ಮೋದಿ ಅವರು ಸಮಯವನ್ನು ಮೀಸಲಿಟ್ಟಿದ್ದಾರೆ.
ಮಧ್ಯಾಹ್ನ 12ಕ್ಕೆ ಅರಮನೆ ಮೈದಾನಕ್ಕೆ ಆಗಮಿಸಿ, 1 ಗಂಟೆ ನಂತರ 'ಭಾರತ ಗೆಲ್ಲಿಸಿ' ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶದ ನಂತರ ಎಚ್ ಎಎಲ್ ವಿಮಾನ ನಿಲ್ದಾಣದ ಮೂಲಕವೇ ನವದೆಹಲಿಗೆ ತೆರಳಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.
'ಶಾದಿ ಭಾಗ್ಯ ಯೋಜನೆ ವಿಸ್ತರಣೆ ಮತ್ತು ಎಪಿಎಲ್' ಕಾರ್ಡ್ ದಾರರಿಗೂ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಅಹೋರಾತ್ರಿ ಧರಣಿ ಕೂತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪೋಸ್ಟರ್ ಗಳು ಮೋದಿ ಸಮಾವೇಶದ ಪ್ರವೇಶ ದ್ವಾರದ ಬಳಿ ಕಾಣಿಸಿಕೊಂಡು ಕುತೂಹಲ ಕೆರಳಿಸಿದೆ. ವಿವರ ಇಲ್ಲಿ ಓದಿ
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಬೆಂಗಳೂರಿನ ಭಾರತ ಗೆಲ್ಲಿಸಿ ಸಮಾವೇಶಕ್ಕಾಗಿ ಆನ್ ಲೈನ್ ಮೂಲಕ ಇದುವರೆಗೂ 41,000 ಜನರು ನೋಂದಣಿ ಮಾಡಿಕೊಂಡಿದ್ದಾರೆ. ಸಮಾವೇಶಕ್ಕೆ ಆಗಮಿಸುವ ಜನರಿಗಾಗಿ ಬಿಜೆಪಿ 5000 ಬಸ್ ಮತ್ತು 10 ರೈಲುಗಳನ್ನು ಬಿಜೆಪಿ ಬುಕ್ ಮಾಡಿದೆ. ವಿವರ ಇಲ್ಲಿ ಓದಿ
-
PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications