ಡಿಸೆಂಬರ್ 6ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು, ನವೆಂಬರ್ 24: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 6 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ನಿರ್ಮಿಸಿರುವ ಲಾ ಕಾಲೇಜ್​​ ಕಟ್ಟಡ ಹಾಗೂ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟಿಸಲಿದ್ದಾರೆ. ಇದೇ ಹಿನ್ನಲೆ ಸಚಿವರಾದ ಅಶ್ವಥ್​​ ನಾರಾಯಣ್​​, ವಿ.ಸೋಮಣ್ಣ ಪ್ರಧಾನಿ ಮೋದಿ ಸ್ವಾಗತಕ್ಕೆ ಸರ್ಕಾರದ ಪೂರ್ವ ತಯಾರಿ ಆರಂಭವಾಗಿದೆ.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡ ಉದ್ಘಾಟನೆ ಹಿನ್ನೆಲೆಯಲ್ಲಿ ಡಿಸೆಂಬರ್​ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರಾದ ಅಶ್ವಥ್ ನಾರಾಯಣ್ ಹಾಗೂ ವಿ.ಸೋಮಣ್ಣ ಅವ್ರು, ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಾರ್ಯಕ್ರಮದ ಪೂರ್ವಬಾವಿ ತಯಾರಿ ವೀಕ್ಷಿಸಿದ್ದಾರೆ.

Narendra Modi To Inaugurate BASE University Building In Bengaluru On December 06

ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಧಾನಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ.

ವಸತಿ ಇಲಾಖೆಯ ಯೋಜನೆ ಪ್ರಕಾರ ನಡೆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಿನ ತಿಂಗಳು ಬೆಂಗಳೂರಿನ ಬಡವರಿಗೆ ವಸತಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.

2016ರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿದ್ದ ಈ ವಸತಿ ಯೋಜನೆ ನಗರದ ಬಡವರಿಗೆ 1 ಲಕ್ಷ ಮನೆ ನಿರ್ಮಿಸಿಕೊಡುವ ಉದ್ದೇಶವನ್ನು ಹೊಂದಲಾಗಿತ್ತು. 2018ರಲ್ಲಿ ಮನೆಗಳ ನಿರ್ಮಾಣಕ್ಕೆ ಸರ್ಕಾರ ಟೆಂಡರ್ ಕರೆದಿತ್ತು, ಆದರೆ ಭೂ ಅಭಾವದಿಂದಾಗಿ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಅಧಿಕಾರಿಗಳಿಗೆ ಕಷ್ಟಕರವಾದ ಕೆಲಸವಾಗಿತ್ತು.

2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕರ್ನಾಟಕದ ಬೇರೆ ನಗರಗಳಿಗೆ ಸಹ ಯೋಜನೆಯನ್ನು ವಿಸ್ತರಿಸಿದ್ದರು. ಆದರೆ ಅದು ಪ್ರಗತಿ ಹೊಂದಿರಲಿಲ್ಲ.

ನಂತರ ಬಿಜೆಪಿ ಸರ್ಕಾರದಲ್ಲಿ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದಾಗ ಯೋಜನೆಗೆ ಮತ್ತೆ ಚಾಲನೆ ನೀಡಿದರು. ಕಳೆದ ಮೇ ತಿಂಗಳಲ್ಲಿ ವಸತಿ ಸಚಿವ ವಿ ಸೋಮಣ್ಣ ಅವರು ಕಳೆದ ಆಗಸ್ಟ್ 15ಕ್ಕೆ 6 ಸಾವಿರ ಮನೆಗಳನ್ನು ಮೊದಲ ಕಂತಿನಲ್ಲಿ ಬಡವರಿಗೆ ಮನೆಯಿಲ್ಲದವರಿಗೆ ಹಸ್ತಾಂತರಿಸುತ್ತಾರೆ ಎಂದು ಹೇಳಿದ್ದರು.

ಆದರೆ ಯಡಿಯೂರಪ್ಪನವರು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿದು ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದರು. ಯೋಜನೆ ಮತ್ತೆ ಹಿನ್ನೆಡೆ ಕಂಡಿತು.

ಈ ಯೋಜನೆಯಡಿ ಪ್ರತಿ ಮನೆಗೆ ಸಾಮಾನ್ಯ ವರ್ಗದವರಿಗೆ 5 ಲಕ್ಷ ಮತ್ತು ಎಸ್‌ಸಿ ಮತ್ತು ಎಸ್‌ಟಿ ಫಲಾನುಭವಿಗಳಿಗೆ 4.2 ಲಕ್ಷ ರೂಪಾಯಿಗಳಾಗುತ್ತದೆ. ಇತ್ತೀಚೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹುಕಾಲದಿಂದ ಬಾಕಿ ಉಳಿದಿರುವ ಉಪನಗರ ರೈಲು ಯೋಜನೆ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಲು ಡಿಸೆಂಬರ್‌ನಲ್ಲಿ ಬೆಂಗಳೂರಿಗೆ ಆಹ್ವಾನಿಸಿದ್ದರು.

ಮುಂದಿನ ಹದಿನೈದು ದಿನಗಳಲ್ಲಿ ಸುಮಾರು 4,000 ಮನೆಗಳು ಪೂರ್ಣಗೊಳ್ಳಲಿವೆ ಎಂದು ವಸತಿ ಇಲಾಖೆಯ ಮೂಲಗಳು ತಿಳಿಸಿವೆ.

"ನಗರದಾದ್ಯಂತ 65,000 ಮನೆಗಳನ್ನು ನಿರ್ಮಿಸಲು ನಮಗೆ ಜಾಗ ಸಿಗಬೇಕಿತ್ತು ಅನುಮತಿ ಇದೆ, ಅದರಲ್ಲಿ 42 ಸಾವಿರ ನಿರ್ಮಾಣದ ವಿವಿಧ ಹಂತಗಳಲ್ಲಿವೆ. 316 ಎಕರೆಯಲ್ಲಿ 46 ಸ್ಥಳಗಳಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಬಿಜೆಪಿಗೆ, 2022 ರಲ್ಲಿ ನಡೆಯಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಈ ವಸತಿ ಯೋಜನೆ ವರವಾಗಬಹುದು. ಇದು 2023 ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕೂಡ ಬಿಜೆಪಿಗೆ ಸಹಾಯ ಮಾಡಬಹುದು.

Recommended Video

      ISRO ಮತ್ತೊಮ್ಮೆ ಪ್ರಪಂಚಕ್ಕೆ ಶಾಕ್ ನೀಡಲು ಸಿದ್ದವಾಗುತ್ತಿರುವುದು ಹೀಗೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+