ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಟೆಕ್ ಶೃಂಗಸಭೆಗೆ ಗುರುವಾರ ಮೋದಿ ಚಾಲನೆ

|
Google Oneindia Kannada News

ಬೆಂಗಳೂರು, ನವೆಂಬರ್ 18 : ಮೂರು ದಿನಗಳ 'ಬೆಂಗಳೂರು ಟೆಕ್ ಶೃಂಗಸಭೆ - 2020'ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ನಂತರ ಜಗತ್ತಿನ ಪ್ರಮುಖ ಸವಾಲುಗಳ ಕುರಿತು ಶೃಂಗಸಭೆಯಲ್ಲಿ ಚರ್ಚೆ ನಡೆಯುತ್ತಿದೆ.

ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ 'ಬೆಂಗಳೂರು ಟೆಕ್ ಶೃಂಗಸಭೆ - 2020'ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ಬ್ರಿಕ್ಸ್ ಸಮ್ಮೇಳನ: ಭಯೋತ್ಪಾದನೆ ವಿರುದ್ಧ ಮೋದಿ ಗುಡುಗು ಬ್ರಿಕ್ಸ್ ಸಮ್ಮೇಳನ: ಭಯೋತ್ಪಾದನೆ ವಿರುದ್ಧ ಮೋದಿ ಗುಡುಗು

'ಬೆಂಗಳೂರು ಟೆಕ್ ಶೃಂಗಸಭೆ 2020' ನವೆಂಬರ್ 19 ರಿಂದ 21 ರವರೆಗೆ ನಡೆಯಲಿದೆ. ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮದ ವಿಷನ್ ಗ್ರೂಪ್, ಭಾರತ ಸಾಫ್ಟ್‌ವೇರ್ ತಂತ್ರಜ್ಞಾನ ಪಾರ್ಕ್ (ಎಸ್‌ಟಿಪಿಐ) ಮತ್ತು ಎಂಎಂ ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರ ಶೃಂಗಸಭೆ ಆಯೋಜಿಸಿದೆ.

ಜೋ ಬೈಡನ್ ಜತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾತುಕತೆಜೋ ಬೈಡನ್ ಜತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾತುಕತೆ

Narendra Modi To Inaugurate Bengaluru Tech Summit 2020 On November 19

ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಸ್ವಿಸ್ ಒಕ್ಕೂಟದ ಉಪಾಧ್ಯಕ್ಷ ಗೈ ಪಾರ್ಮೆಲಿನ್ ಸೇರಿದಂತೆ ಅನೇಕ ಅಂತರರಾಷ್ಟ್ರೀಯ ಗಣ್ಯರು ಭಾಗವಹಿಸಲಿದ್ದಾರೆ. ಉದ್ಯಮದ ನಾಯಕರು, ತಂತ್ರಜ್ಞರು, ಸಂಶೋಧಕರು, ಹೂಡಿಕೆದಾರರು, ನೀತಿ ನಿರೂಪಕರು ಮತ್ತು ಭಾರತ ಮತ್ತು ಜಗತ್ತಿನ ಶಿಕ್ಷಣ ತಜ್ಞರು ಪಾಲ್ಗೊಳ್ಳಲಿದ್ದಾರೆ.

ಮೋದಿ 'ಮನ್‌ ಕಿ ಬಾತ್' ಕಾರ್ಯಕ್ರಮದಿಂದ ಸರ್ಕಾರಕ್ಕೆ ಕೋಟಿ ಕೋಟಿ ಹಣ ಮೋದಿ 'ಮನ್‌ ಕಿ ಬಾತ್' ಕಾರ್ಯಕ್ರಮದಿಂದ ಸರ್ಕಾರಕ್ಕೆ ಕೋಟಿ ಕೋಟಿ ಹಣ

ಈ ವರ್ಷದ ಶೃಂಗಸಭೆ ವಿಷಯ 'Next is Now'. 'ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್' ಹಾಗೂ 'ಜೈವಿಕ ತಂತ್ರಜ್ಞಾನ' ಕ್ಷೇತ್ರಗಳಲ್ಲಿ ಪ್ರಮುಖ ತಂತ್ರಜ್ಞಾನಗಳು ಮತ್ತು ಆವಿಷ್ಕಾರಗಳ ಪರಿಣಾಮ ಕುರಿತು ಶೃಂಗಸಭೆಯು ಚರ್ಚೆ ನಡೆಸಲಿದೆ.

English summary
Prime Minister of India Narendra Modi will inaugurate Bengaluru Tech Summit 2020 on 19th November via video conference. Tech Summit is scheduled from 19th to 21st November.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X