ಅನಂತಕುಮಾರ್ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ
Recommended Video

Ananth Kumar Demise : ಕೇಂದ್ರ ಸಚಿವ ಅನಂತ್ ಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿಗೆ ಬರಲಿದ್ದಾರೆ ಮೋದಿ
ನವದೆಹಲಿ, ನವೆಂಬರ್ 12: ಅನಾರೋಗ್ಯದಿಂದ ಸೋಮವಾರ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್(59) ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮೂಲಗಳ ಮಾಹಿತಿಯಂತೆ, ಇಂದು ಬೆಳಗ್ಗೆ 10.30ಕ್ಕೆ ವಿಶೇಷ ವಿಮಾನದ ಮೂಲಕ ಪ್ರಧಾನಿಯವರು ಬೆಂಗಳೂರಿಗೆ ಆಗಮಿಸಲಿದ್ದು, ಅಂತಿಮ ದರ್ಶನ ಪಡೆಯಲಿದ್ದಾರೆ. ಈ ಕುರಿತಂತೆ ಪ್ರಧಾನಿ ಕಾರ್ಯಾಲಯ ಅಧಿಕೃತವಾಗಿ ಇನ್ನೂ ಘೋಷಣೆ ಮಾಡಿಲ್ಲ.
ಇಂದು 8 ಗಂಟೆಯ ನಂತರ ಬಸವನಗುಡಿಯ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಿದ್ದು, ಇದಕ್ಕಾಗಿ ಸಿದ್ದತೆ ಹಾಗೂ ಸಕಲ ಭದ್ರತೆ ಕೈಗೊಳ್ಳಲಾಗುತ್ತಿದೆ.

ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ರಾಜ್ಯದ ಹಲವೆಡೆಗಳಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಕೆಲ ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೇಂದ್ರ ಸಚಿವ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತ್ ಕುಮಾರ್ ಸೋಮವಾರ ವಿಧಿವಶರಾದರು.












Click it and Unblock the Notifications