ಜನವರಿ 3ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು, ಡಿಸೆಂಬರ್ 24 : ಬೆಂಗಳೂರು ನಗರದಲ್ಲಿ ಐದು ದಿನಗಳ ಅಂತಾರಾಷ್ಟ್ರೀಯ ಯೋಗ ಸಂಶೋಧನಾ ಸಮ್ಮೇಳನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 3ರಂದು ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಕರ್ನಾಟಕ ಸರ್ಕಾರ ಮತ್ತು ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಜಂಟಿಯಾಗಿ ಐದು ದಿನಗಳ ಅಂತಾರಾಷ್ಟ್ರೀಯ ಯೋಗ ಸಂಶೋಧನಾ ಸಮ್ಮೇಳನ ಹಮ್ಮಿಕೊಂಡಿವೆ' ಎಂದು ಸಚಿವರು ಹೇಳಿದ್ದಾರೆ. [ಯೋಗದ ಬಗ್ಗೆ ಖ್ಯಾತ ಮಾನಸಿಕ ತಜ್ಞರು ಹೀಗಂತಾರೆ]

ut khader

ಜನವರಿ 3ರಂದು ಪ್ರಧಾನಿ ನರೇಂದ್ರ ಮೋದಿ ಅವರು, ಜಿಗಣಿ ಸಮೀಪದ ಯೋಗವನ ಪ್ರಶಾಂತಿ ಕುಟೀರಂನಲ್ಲಿ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮುಂತಾದವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. [ಯೋಗ ಹೀಗೂ ಮಾಡಬಹುದು, ವಿಜಯ್ ಕಾಂತ್ ಫನ್ನಿ ವಿಡಿಯೋ]

'ಐದು ದಿನಗಳ ಸಮ್ಮೇಳಮನದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ನಡೆದ ಸಂಶೋಧನೆಗಳ ಪ್ರಸರಣ ಮತ್ತು ಮುಂದೆ ನಡೆಯಬೇಕಾದ ಸಂಶೋಧನೆ ಬಗ್ಗೆ ವಿವರವಾದ ಚರ್ಚೆ ನಡೆಯಲಿದೆ. 25 ದೇಶಗಳ 10 ಸಾವಿರ ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಯು.ಟಿ.ಖಾದರ್ ಮಾಹಿತಿ ನೀಡಿದ್ದಾರೆ. [ಜೂ.21ರಂದೇ ವಿಶ್ವ ಯೋಗ ದಿನಾಚರಣೆ ಏಕೆ?]

'ಅಂತಾರಾಷ್ಟ್ರೀಯ ಯೋಗ ಸಂಶೋಧನಾ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ. ರಾಜ್ಯ ಸರ್ಕಾರ ಸಮ್ಮೇಳನದ ಸಹಭಾಗಿತ್ವ ಪಡೆದಿರುವುದು ಸಂತೋಷದ ವಿಷಯ. ಈ ಸಮ್ಮೇಳನ ಆಯುರ್ವೇದ ಮತ್ತು ಯೋಗದ ಬಗ್ಗೆ ವಿಶ್ವದ ಗಮನ ಸೆಳೆಯಲಿದೆ' ಎಂದು ಖಾದರ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+