ದೇಶ ಅಭಿವೃದ್ಧಿ ಹೊಂದಿದ್ದೇ ಕುಟುಂಬ ರಾಜಕಾರಣದಿಂದ: ಎಚ್ ಡಿ ಕುಮಾರಸ್ವಾಮಿ

Recommended Video

      ನಾನು ಕೃಷಿ ಮಾಡಲು ಪ್ರಾರಂಭಿಸಿದ್ದು ಇಲ್ಲೆ..? ನನ್ನ ವೋಟ್ ಇರೋದು ಇಲ್ಲೆ..? | Oneindia Kannada

      ಬೆಂಗಳೂರು, ಏಪ್ರಿಲ್ 18: "ಕುಟುಂಬ ರಾಜಕಾರಣದಿಂದಲೇ ಈ ದೇಶ ಅಭಿವೃದ್ಧಿ ಹೊಂದುತ್ತಿರುವುದು" ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಮಿ ಹೇಳಿದ್ದಾರೆ.

      ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಮನಗರ ಜಿಲ್ಲೆಯ ಕಾತಗಾನಹಳ್ಳಿಯಲ್ಲಿ ಮತಚಲಾಯಿಸಿದ ಎಚ್ ಡಿ ಕುಮಾರಸ್ವಾಮಿ, "ಕುಟುಂಬ ರಾಜಕಾರಣ ಈ ಹೊತ್ತಿಲ್ಲಿ ದೊಡ್ಡ ಸಮಸ್ಯೆಯಲ್ಲ. ದೇಶ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಹಾಗೆ ನೋಡುವುದಕ್ಕೆ ಹೋದರೆ ಭಾರತದಲ್ಲಿ ಕುಟುಂಬ ರಾಜಕಾರಣದಿಂದಲೇ ಅಭಿವೃದ್ಧಿಯೂ ಆಗುತ್ತಿದೆ. ಕುಟುಂಬ ರಾಜಕಾರಣ ಮತ್ತು ಪ್ರಾದೇಶಿಕ ರಾಜಕಾರಣ ಭಾರತದಲ್ಲಿ ಮಹತ್ವದ ಪಾತ್ರ ವಹಿಸಿವೆ. ಬಿಜೆಪಿಯ ಟೀಕೆಗಳಿಗೆಲ್ಲ ನಾವು ತಲೆಕೆಡಿಸಿಕೊಳ್ಳೊಲ್ಲ" ಎಂದು ಕುಮಾರಸ್ವಾಮಿ ಹೇಳಿದರು.

      ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಮತಚಲಾಯಿಸಿದರು.

      ಕರ್ನಾಟಕದಲ್ಲಿ ಒಟ್ಟು 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಏ.18 ರಂದು ನಡೆಯುತ್ತಿದ್ದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

      Nation developed because of dynasty politics: HD Kumaraswamy after casting his vote

      ಎಚ್ ಡಿ ಕುಮಾರಸ್ವಾಮಿ ಅವರು ಮತದಾನ ಮಾಡಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಾಲಿ ಸಂಸದ ಡಿಕೆ ಸುರೇಶ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೆ, ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+