Census 2027: ಬೆಂಗಳೂರಲ್ಲಿ ಏ.1ರಿಂದ ಜನಗಣತಿ ಶುರು, ನಾಗರಿಕರಿಗೆ ಸ್ವಯಂ ಗಣತಿಗೆ ಅವಕಾಶ
National Census 2027: ರಾಷ್ಟ್ರೀಯ ಜನಗಣತಿ-2027ರ ಕಾರ್ಯಕ್ಕೆ ಬೆಂಗಳೂರಿನ ಕೇಂದ್ರ ನಗರ ಪಾಲಿಕೆ ಸಜ್ಜಾಗಿದೆ. ನಾಗರಿಕರಿಂದ ಮನೆಪಟ್ಟಿ ಮತ್ತು ಮನೆ ಗಣತಿ ಸ್ವಯಂ ಗಣತಿ ಕಾರ್ಯಕ್ಕೆ ಅವಕಾಶ ನೀಡಲಾಗಿದೆ. ಇನ್ನು ಗಣತಿ ನಡೆಸು ನಮ್ಮ ಫೀಲ್ಡ್ ಟ್ರೈನರ್ ಗಳಿಗೆ, ಚಾರ್ಜ್ ಆಫೀಸರ್ಸ್ ಗಳಿಗೆ, ಕಂದಾಯ ಅಧಿಕಾರಿಗಳಿಗೆ, ಟೆಕ್ನಿಕಲ್ ಅಸಿಸ್ಟೆಂಟ್ ಗಳಿಗೆ ಮಾಸ್ಟರ್ ಟ್ರೈನರ್ ಗಳಿಂದ ಅಗತ್ಯ ತರಬೇತಿ ನೀಡಲಾಗಿದೆ ಎಂದು ಪಾಲಿಕೆಯ ಪ್ರಧಾನ ಗಣತಿ ಅಧಿಕಾರಿ ಹಾಗೂ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಜನಗಣತಿ-2027ರ ಕಾರ್ಯಕ್ಕೆ ಕೇಂದ್ರ ನಗರ ಪಾಲಿಕೆ ಅಗತ್ಯ ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದೆ. ಗಣತಿ ಕಾರ್ಯದ ಮುಖ್ಯ ಪಾತ್ರವಹಿಸುವ 6 ವಿಧಾನಸಭಾ ಕ್ಷೇತ್ರವಾರು ನೇಮಕಗೊಂಡ ಸಿಬ್ಬಂದಿಗೆ ಅಪರ ಆಯುಕ್ತರು ಅಭಿವೃದ್ಧಿ ಹಾಗೂ ಕಂದಾಯ ರವರ ನೇತೃತ್ವದಲ್ಲಿ ಒಂದು ಸುತ್ತಿನ ಅಗತ್ಯ ತರಬೇತಿ ಕೊಡಿಸಲಾಗಿದೆ.

ಏಪ್ರಿಲ್ 1 ರಿಂದ ಗಣತಿ ಆರಂಭ
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ರ ಪ್ರಯುಕ್ತ ಏಪ್ರಿಲ್ 1 ರಿಂದ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ. ಜನಗಣತಿ ಕಾರ್ಯವನ್ನು ಸಮರ್ಪಕವಾಗಿ ಹಾಗೂ ಸಮಯೋಚಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಪೋರ್ಟಲ್ ಮೂಲಕ ಸ್ವಯಂ ಗಣತಿಗೆ ಅವಕಾಶ
ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜನಗಣತಿ-2027ರ ಪ್ರಥಮ ಹಂತದಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯಾಚರಣೆ ಆರಂಭಿಸಲಾಗುವುದು. ನಾಗರಿಕರು ತಮ್ಮ ಮನೆ ಹಾಗೂ ಕುಟುಂಬದ ಮೂಲಭೂತ ಮಾಹಿತಿಯನ್ನು ನಿಖರವಾಗಿ ದಾಖಲಿಸುವುದು ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರದ ಕೇಂದ್ರ ಗೃಹ ಮಂತ್ರಾಲಯವು 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಮೊದಲ ಹಂತದಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿಯನ್ನು ಏಪ್ರಿಲ್ 01 ರಿಂದ ಏಪ್ರಿಲ್ 15 ವರೆಗೆ 15 ದಿನಗಳ ಕಾಲ ವೆಬ್ ಪೋರ್ಟಲ್ https://se.census.gov.in ಮೂಲಕ ಸ್ವಯಂ-ಗಣತಿಗೆ ಅವಕಾಶ ಕಲ್ಪಿಸಲಾಗಿದೆ.
ಮನೆಯ ಯಾವುದೇ ಒಬ್ಬ ಸದಸ್ಯರು ಸುಮಾರು 15-20 ನಿಮಿಷಗಳ ಅವಧಿಯಲ್ಲಿ ಸ್ವಯಂ-ಗಣತಿ ಮಾಡಿ ಮನೆಯ ವಿವರಗಳನ್ನು ಒದಗಿಸಬಹುದು ಮತ್ತು ಮೊಬೈಲ್/ಇಮೇಲ್ನಲ್ಲಿ ಸ್ವಯಂ-ಗಣತಿ ಐಡಿಯನ್ನು ಪಡೆಯಬಹುದಾಗಿರುತ್ತದೆ. ಜನಗಣತಿ-2027ರ ಎರಡನೇ ಹಂತದಲ್ಲಿ 16ನೇ ಏಪ್ರಿಲ್ 2026 ರಿಂದ 15ನೇ ಮೇ 2026ರ ವರೆಗೆ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮನೆಪಟ್ಟಿ ಮತ್ತು ಮನೆ ಗಣತಿ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ ಎಂದು ಅವರು ವಿವರಿಸಿದರು.
ಗಣತಿದಾರರು ಮನೆಗೆ ಭೇಟಿ ನೀಡಿದಾಗ, ದೃಢೀಕರಿಸಲು ಮತ್ತು ಸ್ವಯಂ-ಗಣತಿ ದತ್ತಾಂಶದ ಅಂತಿಮ ಸಲ್ಲಿಕೆಗಾಗಿ ಸ್ವಯಂ-ಗಣತಿ ಐಡಿಯನ್ನು ಗಣತಿದಾರರೊಂದಿಗೆ ಹಂಚಿಕೊಳ್ಳಬೇಕಾಗಿರುತ್ತದೆ. ಸ್ವಯಂ ಗಣತಿ ಪ್ರಕ್ರಿಯೆಗಾಗಿ ನಿಗದಿಪಡಿಸಿರುವ ಅವಧಿಯಲ್ಲಿ ನಾಗರಿಕರು ತಮ್ಮ ಮಾಹಿತಿಯನ್ನು ದಾಖಲಿಸಲು ಅವಕಾಶವಿದೆ. ಇದರಿಂದ ಜನಗಣತಿ ಕಾರ್ಯದಲ್ಲಿ ಪಾರದರ್ಶಕತೆ, ವೇಗ ಮತ್ತು ನಿಖರತೆ ಹೆಚ್ಚಲಿದೆ ಎಂದು ಆಯುಕ್ತರು ತಿಲಿಸಿದರು.
ಸಮಗ್ರ ಅಭಿವೃದ್ಧಿಗೆ ಪೂರಕ ಹೆಜ್ಜೆ
ಜನಗಣತಿ 2027ರ ಮಾಹಿತಿಯ ಆಧಾರದ ಮೇಲೆ ಭವಿಷ್ಯದ ನಗರ ಯೋಜನೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಆದ್ದರಿಂದ, ಎಲ್ಲಾ ನಾಗರಿಕರು ಸ್ವಯಂ ಗಣತಿಯಲ್ಲಿ ತಮ್ಮ ಸರಿಯಾದ ಮಾಹಿತಿಯನ್ನು ಒದಗಿಸುವ ಮೂಲಕ ಜನಗಣತಿ ಪ್ರಕ್ರಿಯೆಯಲ್ಲಿ ನಾಗರಿಕರ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಸ್ವಯಂ ಗಣತಿ ವ್ಯವಸ್ಥೆಯನ್ನು ಬಳಸಿಕೊಂಡು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ ಮೂಲಕ ಸಲ್ಲಿಸಬೇಕು. ಗಣತಿದಾರ ಸಿಬ್ಬಂದಿಗಳಿಗೆ ಸಹಕರಿಸುವಂತೆ ಈ ಮೂಲಕ ಸಾರ್ವಜನಿಕರಲ್ಲಿ ಅವರು ಕೋರಿದರು.
-
GBA: ಪಾದಚಾರಿ ಮಾರ್ಗ ಒತ್ತುವರಿ ಮಾಡಿದ್ರೆ ಬೀಳುತ್ತೆ ದಂಡ: ನಗರದಲ್ಲಿ ಬಿರುಸಿನ ಕಾರ್ಯಾಚರಣೆ -
GBA: ಬೆಂಗಳೂರಲ್ಲಿ ದೇವಸ್ಥಾನಗಳ ಸ್ವಚ್ಛತೆಗೆ ಮುಂದಾದ ಜಿಬಿಎ, ಕಾರಣವೇನು -
Greater Bengaluru Authority: ಅಪಾಯಕಾರಿ ಮರ-ಕೊಂಬೆಗಳ ತೆರವು ಚುರುಕು – ಸಾರ್ವಜನಿಕ ಸುರಕ್ಷತೆಗೆ ಆದ್ಯತೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?













Click it and Unblock the Notifications