ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅತ್ತ 'ಇಡಿ' ವಿಚಾರಣೆಗೆ ರಾಹುಲ್ ಗಾಂಧಿ; ಇತ್ತ ಸಿದ್ದು, ಡಿಕೆಶಿ ಬಂದಿ

|
Google Oneindia Kannada News

ಬೆಂಗಳೂರು, ಜೂ. 13: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಗೆ ನೋಟಿಸ್ ನೀಡಿರುವುದನ್ನು ಖಂಡಿಸಿ ಶಾಂತಿನಗರದ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಪ್ರಿಯಾಂಕ ಖರ್ಗೆ, ಶಾಸಕ ಜಮೀರ್ ಅಹಮದ್ ಖಾನ್, ಆರ್.ವಿ. ದೇಶಪಾಂಡೆ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಕಾಂಗ್ರೆಸ್ ಯುವ ಮುಖಂಡ ಮಹಮದ್ ನಲಪಾಡ್ ಮತ್ತಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಆ ಬಳಿಕ ಬಿಎಂಟಿಸಿ ಬಸ್ ನಲ್ಲಿ ತುಂಬಿಸಿಕೊಂಡು ಹೊರಗೆ ಕರೆದುಕೊಂಡು ಹೋದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದುರುದ್ದೇಶಪೂರ್ವಕವಾಗಿ ಇಡಿ ನೋಟಿಸ್ ಜಾರಿ ಮಾಡಿದೆ. ರಾಹುಲ್ ಗಾಂಧಿ ಮತ್ತು ಸೋನಿಯಾಗಾಂಧಿ ಅವರನ್ನು ವಿಚಾರಣೆ ನೆಪದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಕೇಂದ್ರ ತನಿಖಾ ಸಂಸ್ಥೆಗಳನ್ನು ಬಿಜೆಪಿ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾರಿಕೇಡ್ ಹತ್ತಲು ಹೋಗಿ ಬಿದ್ದವರು:

ಬ್ಯಾರಿಕೇಡ್ ಹತ್ತಲು ಹೋಗಿ ಬಿದ್ದವರು:

ಇನ್ನು ಶಾಂತಿನಗರದ ಇಡಿ ಕಚೇರಿಗೆ ಪ್ರವೇಶ ಮಾಡದಂತೆ ಬ್ಯಾರಿ ಕೇಡ್‌ಗಳನ್ನು ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬ್ಯಾರಿ ಕೇಡ್ ಹತ್ತಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು ಬ್ಯಾರಿಕೇಡ್‌ನಿಂದ ಇಳಿಯಲಾಗದೇ ನೂಕಾಟ ಉಂಟಾಗಿ ಕೆಳಗೆ ಬಿದ್ದರು. ಬ್ಯಾರಿಕೇಡ್ ಹತ್ತಿದವರೆಲ್ಲರನ್ನೂ ವಶಕ್ಕೆ ಪಡೆದ ಪೊಲೀಸರು ಬಸ್‌ನಲ್ಲಿ ತುಂಬಿಸಿಕೊಂಡು ಹೊರಟರು. ಇಡಿ ಕಚೇರಿಯ ಪ್ರವೇಶಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ.

ಪ್ರತಿಭಟನೆ ಮಾಡುವುದು ನಮ್ಮ ಹಕ್ಕು

ಪ್ರತಿಭಟನೆ ಮಾಡುವುದು ನಮ್ಮ ಹಕ್ಕು

ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ನಮ್ಮನ್ನು ಬಂಧಿಸಿ ಜೈಲಿಗೆ ಕಳುಹಿಸಿದರೂ ಹೋರಾಟವನ್ನು ಕೈ ಬಿಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ದು ನಕಲಿ ಗಾಂಧಿ ಮನೆತನ:

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಗಾಂಧಿ‌ ಕುಟುಂಬ ಈಗ 'ಅನುಕಂಪ' ಗಿಟ್ಟಿಸುವ ನಾಟಕವಾಡುತ್ತಿದೆ. ತಾನು ಕಳ್ಳ ಪರರ ನಂಬೆ ಎಂಬ ಧೋರಣೆಯೇ ಕಾಂಗ್ರೆಸ್ ಅಸ್ಮಿತೆ. ನಕಲಿ ಗಾಂಧಿ ಮನೆತನದಿಂದ, ನಕಲಿ ಗಾಂಧಿ ಮನೆತನಕ್ಕಾಗಿ, ನಕಲಿ ಗಾಂಧಿ ಮನೆತನಕ್ಕೋಸ್ಕರ, ಇದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ಎಂದು ಬಿಜೆಪಿ ಕರ್ನಾಟಕ ಆಕ್ರೋಶ ವ್ಯಕ್ತಪಡಿಸಿದೆ.

ಇಡಿ ಕೇಸಿನ ಬಗ್ಗೆ ಬಿಜೆಪಿ ಸ್ಪಷ್ಟನೆ:

ಉಪ್ಪು ತಿಂದ ಮೇಲೆ ನೀರು ಕುಡಿಯ ಬೇಕು. ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಬೇಕು. ರಾಹುಲ್ ಗಾಂಧಿ ನೇತೃತ್ವದ ಯಂಗ್ ಇಂಡಿಯಾ ಸಂಸ್ಥೆ ಅಕ್ರಮ ಹಣ ವರ್ಗಾವಣೆ ಮಾಡಿರುವುದಕ್ಕೆ ಜಾರಿ ನಿರ್ದೇಶನಾಲಯದ ಬಳಿ ಸಾಕಷ್ಟು ಸಾಕ್ಷಿಗಳಿವೆ. ಸತ್ಯ ಅನಾವರಣಗೊಳಿಸುವುದು ಕಾಂಗ್ರೆಸ್ ದೃಷ್ಟಿಯಲ್ಲಿ ಮಾತ್ರ ದ್ವೇಷದ ರಾಜಕಾರಣ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬ ನಡೆಸಿದ್ದು ಅಕ್ಷರಶಃ ಮನೆಗಳ್ಳತನ! ಕಾಂಗ್ರೆಸ್ ಪಕ್ಷದ 5000 ಸದಸ್ಯರ ಇಡಗಂಟಿನೊಂದಿಗೆ ಆರಂಭವಾದ ಅಸೋಸಿಯೇಟ್ ಜರ್ನಲ್ ಶೇರುಗಳನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಬಳಿಸಲಾಗಿದೆ.

ಸ್ವಂತ ಮನೆಗೆ ಕನ್ನ ಹಾಕುವುದೆಂದರೆ ಇದೇ ಅಲ್ಲವೇ?

Recommended Video

ED ತೆಕ್ಕೆಯಲ್ಲಿ ರಾಹುಲ್ ಗಾಂಧಿ! | *Politics | OneIndia Kannada

English summary
National Herald case: Congress leader Siddaramaiah and others taken to police custody in Bengaluru know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X