ಅತ್ತಿಬೆಲೆ ಬಳಿ ಹೆದ್ದಾರಿ ಕುಸಿತ: ಬೆಂಗಳೂರು–ಹೊಸೂರು ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತ
ಬೆಂಗಳೂರು: ಅತ್ತಿಬೆಲೆ ಸಮೀಪ ಬೆಂಗಳೂರು-ಹೊಸೂರು ನಡುವಿನ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ (ಎನ್‌ಎಚ್-44) ಒಂದು ಭಾಗ ಕುಸಿದ ಪರಿಣಾಮ ಭಾನುವಾರ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಸೂರ್ಯನಗರ ಹಾಗೂ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಹೆದ್ದಾರಿ ವಿಸ್ತರಣೆ ಕಾಮಗಾರಿಯೇ ಈ ಕುಸಿತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ರಸ್ತೆಯ ಒಂದು ಭಾಗ ಕುಸಿದ ಕಾರಣ ವಾಹನ ಸಂಚಾರಕ್ಕೆ ಲಭ್ಯವಿರುವ ಮಾರ್ಗದ ಅಗಲ ಕಡಿಮೆಯಾಗಿದ್ದು, ಇದರಿಂದಾಗಿ ಬೆಂಗಳೂರು-ಹೊಸೂರು ಮಾರ್ಗದಲ್ಲಿ ಭಾರೀ ಸಮಸ್ಯೆ ಉಂಟಾಗಿದೆ. ವಿಶೇಷವಾಗಿ ಬೆಳಿಗ್ಗೆಯಿಂದಲೇ ವಾಹನಗಳು ದೀರ್ಘ ಕಾಲ ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ನಿಯಂತ್ರಣ ಕಾರ್ಯ ಕೈಗೊಂಡಿದ್ದಾರೆ. ಪರಿಸ್ಥಿತಿ ಸುಧಾರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಜತೆ ಸಮನ್ವಯ ಸಾಧಿಸಲಾಗುತ್ತಿದ್ದು, ಕುಸಿದ ಭಾಗವನ್ನು ಸ್ಥಿರಗೊಳಿಸುವ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮಗಾರಿಯಿಂದ ರಸ್ತೆ ಕುಸಿತ?
ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದ ಕಾರಣ ಮಣ್ಣು ಸಡಿಲಗೊಂಡು ಈ ಅವಘಡ ಸಂಭವಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಎನ್‌ಎಚ್-44 ದುರಸ್ತಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಸಂಚಾರವನ್ನು ಸಹಜ ಸ್ಥಿತಿಗೆ ತರುವುದಾಗಿ ಎನ್‌ಎಚ್‌ಎಐ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಮಾರ್ಗವನ್ನು ಬಳಸುವ ವಾಹನ ಸವಾರರಿಗೆ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಸ್ಥಳೀಯ ಪೊಲೀಸರು ಸಂಚಾರವನ್ನು ನಿಯಂತ್ರಿಸಲು ಪರ್ಯಾಯ ಮಾರ್ಗಗಳನ್ನು ತೆರೆಯಲಾಗಿದ್ದು, ಅಗತ್ಯವಿದ್ದ ಕಡೆ ವಾಹನಗಳನ್ನು ಒಂದೇ ಲೇನ್‌ನಲ್ಲಿ ಸಂಚರಿಸುವಂತೆ ಮಾಡಲಾಗಿದೆ. ಆದರೆ ಹೆದ್ದಾರಿ ಅಗಲ ಕಡಿಮೆಯಾದ ಕಾರಣ ದೀರ್ಘ ಟ್ರಾಫಿಕ್ ಜಾಮ್ ಅನಿವಾರ್ಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತುರ್ತು ದುರಸ್ತಿ ಕಾರ್ಯ ಆರಂಭಿಸಿದ್ದು, ಕುಸಿದ ಭಾಗವನ್ನು ಸರಿಪಡಿಸುವ ಜೊತೆಗೆ ರಸ್ತೆ ಬಲಪಡಿಸುವ ಕಾಮಗಾರಿ ನಡೆಯುತ್ತಿದೆ. ದುರಸ್ತಿ ಪೂರ್ಣಗೊಂಡ ಬಳಿಕವೇ ಪೂರ್ಣ ಪ್ರಮಾಣದಲ್ಲಿ ಸಂಚಾರ ಪುನರಾರಂಭವಾಗಲಿದೆ ಎಂದು ತಿಳಿಸಿದೆ.
Nitin Gadkari Magic 🪄 ✨
— Dr Ranjan (@Doc_RGM) February 4, 2026
NH-44 Caves In and COLLAPSES near Attibele on Bengaluru-Hosur Route.
Keep paying TAX & TOLL to the Ethanol King of India @nitin_gadkari pic.twitter.com/UToRImc7Hl
ಸುರಕ್ಷತೆಯ ದೃಷ್ಟಿಯಿಂದ, ಬೆಂಗಳೂರು-ಹೊಸೂರು ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ತಾತ್ಕಾಲಿಕವಾಗಿ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ರಸ್ತೆ ಸಂಪೂರ್ಣವಾಗಿ ದುರಸ್ತಿ ಆಗುವವರೆಗೆ ಸಂಚಾರ ವ್ಯತ್ಯಯ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲೇ ಹಳೇ ಚಂದಾಪುರದ ಬಳಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಸುಮಾರು 20 ಅಡಿ ಆಳಕ್ಕೆ ಕುಸಿದಿರುವ ಘಟನೆ ಸಂಭವಿಸಿದೆ. ಪರಿಣಾಮ ಚಂದಾಪುರದಿಂದ ಕರ್ನಾಟಕದ ಗಡಿ ಅತ್ತಿಬೆಲೆವರೆಗೆ ಕಿಲೋಮೀಟರ್‌ಗಟ್ಟಲೆ ವಾಹನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ದೀರ್ಘ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಸಾವಿರಾರು ವಾಹನ ಸವಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಟ್ರಾಫಿಕ್ ದಟ್ಟಣೆಯಿಂದಾಗಿ ಕಚೇರಿಗೆ ತೆರಳುವ ಉದ್ಯೋಗಸ್ಥರು, ರೋಗಿಗಳು, ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ತಮ್ಮ ಗಮ್ಯಸ್ಥಾನವನ್ನು ಸಕಾಲಕ್ಕೆ ತಲುಪಲಾಗದೆ ಪರದಾಡಿದ ದೃಶ್ಯಗಳು ಕಂಡುಬಂದಿವೆ. ವಿಶೇಷವಾಗಿ ಆಂಬ್ಯುಲೆನ್ಸ್ ಹಾಗೂ ಶಾಲಾ ವಾಹನಗಳು ಸಂಚಾರದಲ್ಲಿ ಸಿಲುಕಿದ ಕಾರಣ ಸಾರ್ವಜನಿಕ ಆಕ್ರೋಶವೂ ವ್ಯಕ್ತವಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications