Highways, Expressways: ಹೊಸಕೋಟೆ ಮೇಲೆ ಹಾದುಹೋಗುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು, ಎಕ್ಸ್ಪ್ರೆಸ್ ವೇ
National Highways: ರಾಜ್ಯದಲ್ಲಿ ಹೆದ್ದಾರಿ ಜಾಲ ವಿಸ್ತರಣೆಯಾಗುತ್ತಲಿದೆ. ಹಲವು ಕಾಮಗಾರಿ ಹಂತದಲ್ಲಿದ್ದರೆ, ಇನ್ನೂ ಕೆಲವು ಉದ್ಘಾಟನೆ ಹಂತದಲ್ಲಿದೆ. ಈ ನಡುವೆಯೇ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಪ್ರಸ್ತಾಪಿಸಿರುವ ಹೊಸಕೋಟೆ ಮೇಲೆ ಯಾವೆಲ್ಲಾ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಎಕ್ಸ್ಪ್ರೆಸ್ ವೇಗಳು ಹಾದುಹೋಲಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗಷ್ಟೇ ಬೆಂಗಳೂರಿಗೆ 6 ತಲ್ಲೂಕುಗಳನ್ನು ಸೇರ್ಪಡೆ ಮಾಡಲಾಗುತ್ತದೆ ಎಂದು ಹೇಳಿದ್ದರು. ಈ ಪಟ್ಟಿಯಲ್ಲಿ ಹೊಸಕೋಟೆ ಕೂಡ ಇದೆ. ಹಾಗಾದ್ರೆ, ಈ ಭಾಗದಲ್ಲಿ ಹಾದುಹೋಗಿರುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು, ಎಕ್ಸ್ಪ್ರೆಸ್ ವೇಗಳು ಯಾವುವು? ಏನೆಲ್ಲಾ ಪ್ರಯೋಜನಗಳಿವೆ ಎನ್ನುವ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ.

ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು
* ಬೆಂಗಳೂರಿನ ಸಮೀಪದಲ್ಲಿರುವ ಹೊಸಕೋಟೆ ಮೇಲೆ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಎಕ್ಸ್ಪ್ರೆಸ್ವೇಗಳು ಹಾದುಹೋಗಿವೆ. ಹೊಸಕೋಟೆ ಮೂಲಕ ರಾಷ್ಟ್ರೀಯ ಹೆದ್ದಾರಿ - 48 (NH 48) ಹಾದುಹೋಗಿದೆ. ಇದು ಬೆಂಗಳೂರು-ಚೆನ್ನೈಗೆ ಸಂಪರ್ಕ ಕಲ್ಪಿಸುವ ಅತ್ಯಂತ ಪ್ರಮುಖ ಹೆದ್ದಾರಿ ಆಗಿದೆ. ಇದರಿಂದ ಕೈಗಾರಿಕಾ, ಪ್ರವಾಸೋದ್ಯಮ, ಸಾರಿಗೆ ಕ್ಷೇತ್ರದಲ್ಲಿ ದೊಟ್ಟ ಮಟ್ಟದ ಅಭಿವೃದ್ಧಿ ಆಗುತ್ತಿದೆ.
* ಅಲ್ಲದೆ, ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು - ಕೋಲಾರ - ಮುಳಬಾಗಿಲು - ವೆಲ್ಲೂರು ಮಾರ್ಗಗಳಿಗೆ ಸಂಪರ್ಕ ಕಲ್ಪಿಸಲಿದ್ದು, ಇದು ಹೊಸಕೋಟೆ ಮೂಲಕ ಹಾದುಹೋಗಿದೆ. ಹಳೆ ಬೆಂಗಳೂರು-ಕೋಲಾರ ರಸ್ತೆಯೇ ಈ ಹೆದ್ದಾರಿ.
* ರಾಷ್ಟ್ರೀಯ ಹೆದ್ದಾರಿ 648 (ಹಳೆಯ NH 207) ಹೊಸಕೋಟೆ - ದೇವನಹಳ್ಳಿ ಮಾರ್ಗಗಳಿಗೆ ಸಂಪರ್ಕ ಕಲ್ಪಿಸುತ್ತವೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇದು ಪ್ರಮುಖ ಹೆದ್ದಾರಿ ಆಗಿದೆ. ಇದು ಹೊಸಕೋಟೆ - ದೇವನಹಳ್ಳಿ - ದೊಡ್ಡಬಳ್ಳಾಪುರ - ದೊಬಸ್ಪೇಟೆ - ಹೊಸೂರು ಮಾರ್ಗವಾಗಿ ಹಾದುಹೋಗಲಿದೆ. ಈ ಮೂರು ರಾಷ್ಟ್ರೀಯ ಹೆದ್ದಾರಿಗಳಿಂದ ಹೊಸಕೋಟೆ ಒಂದು ಪ್ರಮುಖ ಸಾರಿಗೆ ಜಂಕ್ಷನ್ ಆಗಿ ಅಭಿವೃದ್ಧಿಯಾಗುತ್ತಿದೆ.
ಪ್ರಮುಖ ಎಕ್ಸ್ಪ್ರೆಸ್ ವೇ
* ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ NE-7 ಹೊಸಕೋಟೆ ಮೇಲೆ ಹಾದುಹೋಗಲಿದ್ದು, ಇದು ಶ್ರೀಪೆರಂಬದೂರಿನವರೆಗೆ ಸಂಪರ್ಕ ಕಲ್ಪಿಸಲಿದೆ. 262 ಕಿಲೋ ಮೀಟರ್ ಈ ಎಕ್ಸ್ಪ್ರೆಸ್ವೇ ಅನ್ನು ವಾಹನಗಳು ಗಂಟೆಗೆ 120 ಕಿ.ಮೀ. ವೇಗದಲ್ಲಿ ಚಲಿಸುವಂತೆ ನಿರ್ಮಾಣ ಮಾಡಲಾಗಿದೆ. ಇದನ್ನು 17,930 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.
ಕರ್ನಾಟಕದಲ್ಲಿ ಹೊಸಕೋಟೆ-ಕೆಜಿಎಫ್ ನಡುವಿನ 68 ಕಿಲೋ ಮೀಟರ್ ಭಾಗ ಫೆಬ್ರುವರಿ 2025ರಲ್ಲಿ ಸಂಚಾರಕ್ಕೆ ಮುಕ್ತಗೊಂಡಿದ್ದು, ದೈನಂದಿನ 1,600-2,000 ವಾಹನಗಳು ಸಂಚಾರ ಮಾಡುತ್ತಿವೆ. ಇದು ಕರ್ನಾಟಕದ ಹೊಸಕೋಟೆ, ಮಾಲೂರು, ಬಂಗಾರಪೇಟೆ, ಕೋಲಾರ, ಆಧ್ರ ಪ್ರದೇಶದ ಪಲಮನೇರ್, ಚಿತ್ತೂರು ಹಾಗೂ ತಮಿಳುನಾಡಿದ ರಾಣಿಪೇಟೆ, ಶ್ರೀಪೆರಂಬದೂರಿನ ಮೂಲಕ ಹಾದುಹೋಗಲಿದೆ.
ಈಗಾಗಲೇ ಕರ್ನಾಟಕ ಭಾಗದಲ್ಲಿ 71 ಕಿಲೋ ಮೀಟರ್ ಕಾಮಗಾರಿ ಪೂರ್ಣಗೊಂಡಿದ್ದು, ವಾಹನ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗಿದೆ. ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಕಾಮಗಾರಿ ಬಾಕಿ ಉಳಿದ ಕಾರಣ ಉದ್ಘಾಟನೆ ದಿನಾಂಕ ಮುಂದೂಡಿಕೆಯಾಗುತ್ತಲಿದೆ. ಮುಂದಿನ ವರ್ಷದ ಜೂನ್ ಅಥವಾ ಜುಲೈನಲ್ಲಿ ಈ ಕಾರ್ಯ ನೆರವೇರಲಿದೆ ಎಂದು ಎನ್ಎಚ್ಎಐ ತಿಳಿಸಿದೆ.
ಹೊಸಕೋಟೆ ಕೈಗಾರಿಕಾ ಪ್ರದೇಶ, ಲಾಜಿಸ್ಟಿಕ್ಸ್ ಹಬ್ ಮತ್ತು ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಈ ರಸ್ತೆಗಳು ಪ್ರಮುಖ ಕಾರಣವಾಗಿವೆ. ಮುಂದಿನ ದಿನಗಳಲ್ಲಿ ಎಕ್ಸ್ಪ್ರೆಸ್ವೇ ಯೋಜನೆಯಿಂದ ಸಂಚಾರ ಮತ್ತು ಆರ್ಥಿಕತೆಯಲ್ಲಿ ಮತ್ತಷ್ಟು ಅಭಿವೃದ್ಧಿ ಆಗುವುದರಲ್ಲಿ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ರಾಷ್ಟ್ರೀಯ ಹೆದ್ದಾರಿ ಹಾಗೂ ಎಕ್ಸ್ಪ್ರೆಸ್ವೇಗಳ ಸುತ್ತಮುತ್ತಲಿನ ಪ್ರದೇಶಗಳು ದೊಡ್ಡ ಮಟ್ಟದ ಅಭಿವೃದ್ಧಿ ಕಾಣುತ್ತಲಿರುತ್ತವೆ. ಹಾಗೆಯೇ ಹೊಸಕೋಟೆ ಕೂಡ ಈಗಾಗಲೇ ಅಭಿವೃದ್ಧಿ ಕಾಣುತ್ತಿದ್ದು, ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಉದ್ಘಾಟನೆ ಆದ್ರೆ ಮತ್ತಷ್ಟು ಅಭಿವೃದ್ಧಿ ಆಗುವುದರಲ್ಲಿ ಅನುಮಾನವೇ ಇಲ್ಲ ಎನ್ನಲಾಗುತ್ತಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications