National Highways: ನೆಲಮಂಗಲದ ಮೇಲೆ ಹಾದುಹೋಗುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು
National Highways: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆ ಆಗುತ್ತಲಿದೆ. ಇದೀಗ ಹಲವು ಕಾಮಗಾರಿ ಹಂತದಲ್ಲಿದ್ದರೆ, ಇನ್ನೂ ಕೆಲವು ಉದ್ಘಾಟನೆ ಹೊಸ್ತಿಲಲ್ಲಿವೆ. ಈ ನಡುವೆಯೇ ಬೆಂಗಳೂರಿಗೆ ಸೇರಿಸಲಾಗುತ್ತದೆ ಎಂದು ಪ್ರಸ್ತಾಪ ಮಾಡಿರುವ ನೆಲಮಂಗಲದ ಮೇಲೆ ಯಾವೆಲ್ಲಾ ಪ್ರಮುಖ NH ಗಳು ಹಾದುಗೋಗಲಿವೆ ಹಾಗೂ ಏನೆಲ್ಲಾ ಪ್ರಯೋಜನೆಗಳಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಆರು ತಾಲ್ಲೂಕುಗಳನ್ನು ಬೆಂಗಳೂರಿಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಹೇಳಿದ್ದರು. ಈ ಪಟ್ಟಿಯಲ್ಲಿ ನೆಲಮಂಗಳ ಕೂಡ ಇದೆ. ಹಾಗಾದ್ರೆ, ಇಲ್ಲಿ ಯಾವೆಲ್ಲಾ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಲಿವೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ನೆಲಮಂಗಲದ ಮೇಲೆ ಹಾದುಹೋಗಿರುವ ಹೆದ್ದಾರಿಗಳು
* ನೆಲಮಂಗಲದ ಮೂಲಕ NH-48 (ಹಳಿಯಾಳ-ಚೆನ್ನೈ ಮಾರ್ಗ, ಹಿಂದಿನ NH-4) ಹಾಗೂ NH-75 (ಬೆಂಗಳೂರು-ಮಂಗಳೂರು ಮಾರ್ಗ) ಹಾದುಹೋಗುತ್ತವೆ. ಇದೀಗ ಇವುಗಳ ವಿಸ್ತರಣೆ ಕಾರ್ಯಗಳು ನಡೆಯುತ್ತಿವೆ. ನೆಲಮಂಗಲ-ತುಮಕೂರು 44 ಕಿಲೋ ಮೀಟರ್ ಭಾಗವನ್ನು 4-ಲೇನ್ನಿಂದ 6-ಲೇನ್ ಮುಖ್ಯ ರಸ್ತೆ ಹಾಗೂ ಎರಡು ಬದಿಗಳಲ್ಲಿ 2-ಲೇನ್ ಸರ್ವೀಸ್ ರೋಡ್ಗಳಾಗಿ ವಿಸ್ತರಣೆ ಮಾಡಲಾಗುತ್ತಿದೆ. ಈ ಕಾಮಗಾರಿಯನ್ನು ₹2,032 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, 2027 ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ ಎನ್ನುವ ಮಾಹಿತಿ ಇದೆ.
ಪ್ರಯೋಜನಗಳೇನು: ಈ ರಾಷ್ಟ್ರೀಯ ಹೆದ್ದಾರಿಯಿಂದ ಉದ್ಯಮ, ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ದೊಟ್ಟ ಮಟ್ಟದ ಅಭಿವೃದ್ಧಿ ಕ್ರಾಂತಿಗಳೇ ಆಗಿವೆ ಮತ್ತು ಉತ್ತರ ಕರ್ನಾಟಕದ ಸಂಪರ್ಕ ಸೇತುವೆಯೂ ಆಗಿವೆ ಅಂದ್ರೆ ತಪ್ಪಾಗಲಾರದು. ಇದು ಬೆಂಗಳೂರಿನಿಂದ ಪುಣೆವರೆಗೆ ಸಂಪರ್ಕ ಕಲ್ಪಿಸುತ್ತದೆ.
ಯಾವೆಲ್ಲಾ ಜಿಲ್ಲೆಗಳ ಮೇಲೆ ಹಾದುಹೋಗಿದೆ?: ಬೆಳಗಾವಿ, ಧಾರವಾಡ, ಹುಬ್ಬಳ್ಳಿ-ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ (ನೆಲಮಂಗಲ), ಬೆಂಗಳೂರು ನಗರ, ಕೋಲಾರ ಜಿಲ್ಲೆಗಳ ಮೇಲೆ ಹಾದುಹೋಗಲಿದೆ. ಇದರಿಂದ ಈ ಭಾಗಗಳ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ.
* ರಾಷ್ಟ್ರೀಯ ಹೆದ್ದಾರಿ 75: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲಮಂಗಳದ ಮೇಲೆ ಹಾದುಹೋಗಿದೆ. ಇದು ಶಿರಾಡಿ, ಧರ್ಮಸ್ಥಳ, ಹಾಸನ, ಮಂಗಳೂರಿಗೆ ಪ್ರಯಾಣ ಬೆಳೆಸುವವರಿಗೆ ಪ್ರಮುಖ ಹೆದ್ದಾರಿಗೆ ಆಗಿದೆ. ಮಂಗಳೂರು - ಹಾಸನ - ಕುಣಿಗಲ್ - ನೆಲಮಂಗಲ - ಕೋಲಾರ - ವೆಲ್ಲೂರು ಮಾರ್ಗದಲ್ಲಿ ಹಾದುಹೋಗುತ್ತದೆ. ಇದೇ ಕಾರಣಗಳಿಂದ ನೆಲಮಂಗಲ ರಾಜ್ಯದ ಅತ್ಯಂತ ಪ್ರಮುಖ ರಸ್ತೆ ಸಾರಿಗೆ ಹಬ್ಗಳಲ್ಲಿ ಒಂದಾಗಿದೆ.
ಯಾವೆಲ್ಲಾ ಜಿಲ್ಲೆಗಳ ಮೇಲೆ ಹಾದುಹೋಗಿದೆ?: ಈ ರಾಷ್ಟ್ರೀಯ ಹೆದ್ದಾರಿಯು ದಕ್ಷಿಣ ಕನ್ನಡ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳ ಮೇಲೆ ಹಾದುಹೋಗಲಿದೆ. ಇದರಿಂದ ಈ ಭಾಗಗಳಲ್ಲಿ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಕ್ರಾಂತಿಯೇ ಆಗುತ್ತಿದೆ.
* ಇನ್ನು ಈ ರಾಷ್ಟ್ರೀಯ ಹೆದ್ದಾರಿ 648 ದೋಡ್ಡಬಳ್ಳಾಪುರ, ನೆಲಮಂಗಲ, ಹೋಸಕೋಟೆ ಮೇಲೆ ಹಾದುಹೋಗಿದೆ. ಬೆಂಗಳೂರು ಗ್ರಾಮಂತರ ಮೇಲೆ ಹಾದುಹೋಗಲಿದೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications