ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

1 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಇಂದಿರಾ ಕ್ಯಾಂಟೀನ್ ಅಡುಗೆ ಮನೆ ಸ್ಥಳಾಂತರ

|
Google Oneindia Kannada News

ಬೆಂಗಳೂರು, ಫೆಬ್ರವರಿ 19: ಇಂದಿರಾ ಕ್ಯಾಂಟೀನ್ ಅಡುಗೆ ಮನೆಯನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ ಜಾಗದಲ್ಲಿರುವ ನಾಯಂಡಹಳ್ಳಿಯಲ್ಲಿ ಇರುವ ಇಂದಿರಾ ಕ್ಯಾಂಟೀನ್ ಅಡುಗೆ ಮನೆಯನ್ನು ಸ್ಥಳಾಂತರಿಸಲು ಬಿಬಿಎಂಪಿ ನಿರ್ಧರಿಸಿದೆ.

ಬಿಬಿಎಂಪಿ ಸದಸ್ಯರಿಗೆ ಇಂದಿರಾ ಕ್ಯಾಂಟೀನ್‌ ಊಟವಿಲ್ಲ! ಬಿಬಿಎಂಪಿ ಸದಸ್ಯರಿಗೆ ಇಂದಿರಾ ಕ್ಯಾಂಟೀನ್‌ ಊಟವಿಲ್ಲ!

ಮೇಯರ್ ಗೌತಮ್ ಕುಮಾರ್ ಈ ಕುರಿತು ಮಾತನಾಡಿದ್ದು, ಇಂದಿರಾ ಕ್ಯಾಂಟೀನ್ ಅಡುಗೆ ಮಾಡುವುದಕ್ಕೆ ಈಗ ನಿಗಿಯಾಗಿರುವ ಪ್ರದೇಶ ಕೊಳಚೆ ನಿರ್ಮೂಲನಾ ಮಂಡಳಿಗೆ ಒಳಪಟ್ಟಿದೆ. ನಾಯಂಡಹಳ್ಳಿ ವ್ಯಾಪ್ತಿಯಲ್ಲಿ ವಸತಿ ಸಮುಚ್ಛಯ ನಿರ್ಮಿಸುವಂತೆ ಸಾವಜನಿಕರು ಕೇಳಿದ್ದು, ಸಚಿವರು ಸ್ಪಂದಿಸಿದ್ದಾರೆ. ನಾಯಂಡಹಳ್ಳಿಯಲ್ಲಿರುವ ಅಡುಗೆ ಮನೆ ಪರ್ಯಾಯವಾಗಿ ಎರಡು ತಿಂಗಳ ಹಿಂದೆ ದೀಪಾಂಜಲಿನಗರದಲ್ಲಿ ಬದಲಿಸಲಾಗಿದೆ.

Nayandahalli Indira Canteen Kitchen Relocated

ಚೆಫ್‌ಟಾಕ್‌ನ ಗುತ್ತಿಗೆದಾರರಾದ ಗೋವಿಂದ ಪೂಜಾರಿ ಈ ಕುರಿತು ಮಾಧ್ಯಮದವರ ಬಳಿ ಮಾತನಾಡಿದ್ದು, ಒಪ್ಪಂದದ ಪ್ರಕಾರ ಹದಿನೈದು ಅಡುಗೆ ಮನೆ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ನಂತರ ಎಂಟು ಅಡುಗೆ ಮನೆ ನಿರ್ಮಾಣವಾದವು. ಈಗ ಅದರಲ್ಲೂ ಒಂದು ತೆರವು ಮಾಡುತ್ತಿರುವುದರಿಂದ ಆಹಾರ ಪೂರೈಕೆಗೆ ಸಮಸ್ಯೆಯಾಗಲಿದೆ ಎಂದು ಹೇಳಿದ್ದರು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್‌ಗೆ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ಕೊಳಚೆ ನಿರ್ಮೂಲನಾ ಮಂಡಳಿಯ ಜಾಗದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಅಡುಗೆ ಮನೆಯನ್ನು ನಿರ್ಮಾಣ ಮಾಡಲಾಗಿತ್ತು.

English summary
Nayandahalli Indira Canteen kitchen is scheduled to be moved.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X