ಬೆಂಗಳೂರಿನಲ್ಲಿ ಆಫ್ರಿಕಾ ಮೂಲದ 9 ಡ್ರಗ್ಸ್ ಪೆಡ್ಲರ್ಸ್ ಬಂಧನ
ಬೆಂಗಳೂರು, ಮೇ 27: ನೈಜಿರಿಯಾ ಹಾಗೂ ಆಫ್ರಿಕಾ ಮೂಲದ 9 ಜನ ಡ್ರಗ್ ಪೆಡ್ಲರ್ ಗಳನ್ನ ಬೆಂಗಳೂರು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ವಿವಿಧ ಭಾಗಗಳಲ್ಲಿ ಮಾಹಿತಿ ಆಧರಿಸಿ ಮೂರು ಕಡೆ ಎನ್ ಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಬೆಂಗಳೂರಿನಿಂದ ದೆಹಲಿಗೆ ಹೆರೋಯಿನ್ ಸಾಗಿಸುತ್ತಿದ್ದ ಡ್ರಗ್ ಪೆಡ್ಲರ್ ಗಳಿಂದ 52.5 ಕೋಟಿ ಬೆಲೆಬಾಳುವ 34 ಕೆಜಿ ಹೆರೋಯಿನ್ ಜೊತೆಗೆ 5.8 ಲಕ್ಷ ನಗದು ಸೀಜ್ ಮಾಡಲಾಗಿದೆ. ಸೂಟ್ ಕೇಸ್ ತಳಭಾಗದಲ್ಲಿ ಡ್ರಗ್ ಸಂಗ್ರಹಿಸಿ ಜಿಂಬಾಬ್ವೆಯಿಂದ ಬೆಂಗಳೂರಿಗೆ ಬರುತ್ತಿದ್ದ ಮಹಿಳೆಯೊಬ್ಬಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಉಳಿದ ಡ್ರಗ್ ಪೆಡ್ಲರ್ ಗಳು ಎನ್ ಸಿಬಿ ಪೊಲೀಸರ ಅತಿಥಿಯಾಗಿದ್ದಾರೆ.
ಜಿಂಬಾಬ್ವೆಯಿಂದ ಏಳು ಕೆ.ಜಿ ಹೆರಾಯಿನ್ ಬೆಂಗಳೂರು ಕೆಐಎಎಲ್ ತಂದಿದ್ದ ಓರ್ವ ಡ್ರಗ್ ಪೆಡ್ಲರ್ ಬಂಧಿಸಲಾಗಿತ್ತು. ಇನ್ನೂ ಡ್ರಗ್ ಪೆಡ್ಲರ್ ತಂಗಿದ್ದ ಲಾಡ್ಜ್ ಪರಿಶೀಲನೆ ವೇಳೆ 6 ಕೆಜಿ 890 ಗ್ರಾಂ ಹೆರಾಯಿನ್ ಸಿಕ್ಕಿದೆ. ಮೊದಲಿಗೆ ಸಿಕ್ಕಿಬಿದ್ದ ಮಹಿಳೆಯಿಮದ ಹೆಚ್ಚಿನ ವಿಚಾರಣೆ ನಡೆಸಿದಾಗ ಮತ್ತೋರ್ವ ವಿದೇಶಿ ಮಹಿಳೆ ಮನೆಮೇಲೆ ದಾಳಿ ಜೊತೆಗೆ ಬೆಂಗಳೂರಿನಿಂದ ದೆಹಲಿಗೆ ಹೆರಾಯಿನ್ (ಡ್ರಗ್) ಸಾಗಿಸುತ್ತಿದ್ದ ಮೂವರು ಮಹಿಳೆಯರನ್ನ ಬಂಧನ ಮಾಡಲಾಗಿದೆ. ವಿವಿಧ ಭಾಗಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದ ಎನ್ ಸಿಬಿ ಪೊಲೀಸರು ಅಂತರಾಷ್ಟ್ರೀಯ ಮಾದಕ ವಸ್ತು ಕಿಂಗ್ ಫಿನ್ ಸಮೇತ ಎಡೆಮುರಿ ಕಟ್ಟಿದ್ದಾರೆ.
ಎನ್ ಸಿಬಿ ಪೊಲೀಸರಿಗೆ ಡ್ರಗ್ ಪೆಡ್ಲರ್ ಸಿಕ್ಕಿದ್ದು ಹೇಗೆ..?
ಎನ್‌ಸಿಬಿ ಅಧಿಕಾರಿಗಳು ಮೇ 24 ರಂದು ದೊರೆತ ಖಚಿತ ಮಾಹಿತಿ ಮೇರೆಗೆ ಜಿಂಬಾಂಬ್ವೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಮಹಿಳೆಯನ್ನು ವಶಕ್ಕೆ ಪಡೆದು ಆಕೆಯ ಸೂಟ್‌ಕೇಸ್ ಪರಿಶೀಲಿಸಿದಾಗ ಸೂಟ್‌ಕೇಸ್ ಕೆಳ ಭಾಗದಲ್ಲಿ 7 ಕೆ.ಜಿ.ಹೆರಾಯಿನ್ ಪತ್ತೆಯಾಗಿತ್ತು. ಬಳಿಕ ಈಕೆಗಾಗಿ ಹೊರಗಡೆ ಕಾಯುತ್ತಿದ್ದ ಮತ್ತೋರ್ವ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆಗೆ ಮಾಡಿದಾಗ ನಗರದ ಲಾಡ್ಜ್ ವೊಂದರಲ್ಲಿ ಮಾದಕವಸ್ತು ಇರಿಸಿರುವುದಾಗಿ ಮಾಹಿತಿ ನೀಡಿದ್ದಾಳೆ.

ಈ ಮಾಹಿತಿ ಆಧರಿಸಿ ಲಾಡ್ಜ್ಗೆ ತೆರಳಿ ಪರಿಶೀಲಿಸಿದಾಗ ಸೂಟ್‌ಕೇಸ್‌ನಲ್ಲಿ 6.80 ಕೆಜಿ ಹೆರಾಯಿನ್ ಪತ್ತೆಯಾಗಿದೆ. ಈ ಇಬ್ಬರು ಮಹಿಳಾ ಪೆಡ್ಲರ್ ಗಳ ಮೊಬೈಲ್ ಕರೆಗಳನ್ನು ಆಧರಿಸಿ ತಾಂತ್ರಿಕ ವಿಶ್ಲೇಷಣೆ ಮಾಡಿದಾಗ, ಇವರ ಗ್ಯಾಂಗ್ ನ ಮೂವರು ಮಹಿಳೆಯರು ಬೆಂಗಳೂರಿನಿಂದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ದೆಹಲಿಗೆ ತೆರಳುತ್ತಿರುವ ವಿಚಾರ ಗೊತ್ತಾಗಿದೆ. ಕೂಡಲೇ ಬೆಂಗಳೂರು ಎನ್‌ಸಿಬಿ ಅಧಿಕಾರಿಗಳು ಮಧ್ಯಪ್ರದೇಶದ ಇಂದೋರ್ ಎನ್‌ಸಿಬಿ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಬಳಿಕ ಇಂದೋರ್ ಎನ್‌ಸಿಬಿ ಅಧಿಕಾರಿಗಳು ಲಾಡ್ಜ್ ವೊಂದರಲ್ಲಿ ತಂಗಿದ್ದ ಮೂವರು ಮಹಿಳೆಯರನ್ನು ವಶಕ್ಕೆ ಪಡೆದು 21 ಕೆಜಿ ಹೆರಾಯಿನ್ ಜಪ್ತಿ ಮಾಡಿದ್ದರು.
ಬಂಧಿತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ದೆಹಲಿಯಲ್ಲಿ ಕುಳಿತ ನೈಜಿರಿಯಾ ಮೂಲದ ಪೆಡ್ಲರ್ ಈ ಡ್ರಗ್ ಜಾಲವನ್ನು ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಬಳಿಕ ದೆಹಲಿ ಎನ್‌ಸಿಬಿ ಅಧಿಕಾರಿಗಳ ಸಹಾಯ ಪಡೆದು ದಂಧೆಯ ಕಿಂಗ್‌ಪಿನ್ ನೈಜಿರಿಯಾ ಪ್ರಜೆ ಹಾಗೂ ಆಫ್ರಿಕಾ ಮೂಲದ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಡ್ರಗ್ಸ್ ದಂಧೆಯ ಸಣ್ಣ ಸುಳಿವು ಆಧರಿಸಿ ಬೆಂಗಳೂರು, ದೆಹಲಿ, ಮಧ್ಯಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಪೆಡ್ಲಿಂಗ್ ದಂಧೆಯಲ್ಲಿ ತೊಡಗಿದ್ದ 9 ಮಂದಿಯನ್ನು ಬಂಧಿಸುವುದರ ಜತೆಗೆ ಭಾರೀ ಪ್ರಮಾಣದ ಡ್ರಗ್ಸ್ ಜಪ್ತಿ ಮಾಡಲಾಗಿದೆ.

ಇನ್ನೂ ನೈಜಿರಿಯಾ ಮೂಲದ ಕಿಂಗ್‌ಪಿನ್ ವಿದೇಶದಿಂದ ಭಾರತಕ್ಕೆ ಡ್ರಗ್ ಸಾಗಣೆ ಮಾಡಲು ಮಹಿಳೆಯರನ್ನು ಬಳಸಿಕೊಂಡಿದ್ದಾನೆ. ಪ್ರಯಾಣಿಕರ ಸೋಗಿನಲ್ಲಿ ಸೂಟ್‌ಕೇಸ್, ಟ್ರಾಲಿ ಬ್ಯಾಗ್ ಕೆಳಗೆ ಡ್ರಗ್ಸ್ ಅಡಗಿಸಿಟ್ಟು ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಡ್ರಗ್ ದಂಧೆಯ ಹಿಂದೆ ವ್ಯವಸ್ಥಿತ ಜಾಲ ಕಾರ್ಯ ನಿರ್ವಹಿಸುತ್ತಿದೆ. ಈ ದಂಧೆಯಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆಗೆ ಎನ್‌ಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಗಾಂಜಾ ಹಾಗೂ ಡ್ರಗ್ ಪೆಡ್ಲರ್ ಗಳ ಹಾವಳಿ ಹೆಚ್ಚಾಗಿದ್ದು, ಬಾಣಸವಾಡಿ, ಹೆಣ್ಣೂರು, ಸಂಪಿಗೆಹಳ್ಳಿ ಭಾಗಗಳಲ್ಲಿ ಹೆಚ್ಚಾಗಿ ಹಲವು ನೈಜೀರಿಯಾ ಪ್ರಜೆಗಳನ್ನ ಬಂಧ ಮಾಡಲಾಗಿತ್ತು.
(ಒನ್ಇಂಡಿಯಾ ಸುದ್ದಿ)
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications