ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಕೇಂದ್ರ ಮಾಜಿ ಸಚಿವ ಶರದ್ ಪವಾರ್

ಬೆಂಗಳೂರು, ಆಗಸ್ಟ್ 06: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೇಂದ್ರದ ಮಾಜಿಸ ಚಿವ ಶರದ್ ಪವಾರ್ ಇಂದು ಭೇಟಿಯಾದರು.

ಭೇಟಿ ವೇಳೆ ನೂತನ ಮುಖ್ಯಮಂತ್ರಿಗಳಿಗೆ ಪವಾರ್ ಅಭಿನಂದನೆ ಸಲ್ಲಿಸಿದ್ದು, ಕೆಲಕಾಲ ರಾಜಕೀಯ ವಿಚಾರಗಳ ಕುರಿತಂತೆಯೂ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಪವಾರ್ ಅವರು ಇನ್ನೂ 4-5 ದಿನಗಳ ಕಾಲ ಬೆಂಗಳೂರಿನಲ್ಲೇ ಉಳಿಯಲಿದ್ದಾರೆಂದು ತಿಳಿದುಬಂದಿದೆ.

ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಪವಾರ್ ಅವರು, ಕುಟುಂಬ ಸದಸ್ಯರೊಬ್ಬರ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

NCP Chief Sharad Pawar Calls On CM Bommai In Bengaluru

ಕೆಲವೇ ಕೆಲವು ದಿನಗಳ ಹಿಂದಷ್ಟೇ ಶರದ್ ಪವಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಸಕ್ಕರೆ ಬೆಲೆ ಮತ್ತು ಪೆಟ್ರೋಲ್ ನಲ್ಲಿ ಎಥೆನಾಲ್ ಮಿಶ್ರಣ ಸಂಬಂಧ ಸಮಾಲೋಚನೆ ನಡೆಸಿದ್ದರು.

ರಾಷ್ಟ್ರೀಯ ರಾದ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಫೆಡರೇಶನ್ ಮುಖ್ಯಸ್ಥ ಹಾಗೂ ರಾಯಘಡದ ಎನ್ ಸಿಪಿ ಸಂಸದ ಜಯಪ್ರಕಾಶ್ ದಾಂಡೆಗಾಂಕರ್ ಅಮಿತ್ ಶಾ ಜೊತೆಗೆ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ್ದ ಪವಾರ್, ಪ್ರಸ್ತುತದಲ್ಲಿನ ಸಕ್ಕರೆ ಮಾರಾಟದ ಬಗ್ಗೆ ಚರ್ಚೆ ನಡೆಸಲಾಗಿದೆ. ಇದು ಉತ್ಪಾದನೆಯ ಬೆಲೆಗಿಂತ ಕಡಿಮೆಯಿದೆ. ಇದರ ಬಗ್ಗೆ ಸರ್ಕಾರ ಪರಿಶೀಲಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಪೆಟ್ರೋಲಿಯಂ ಉತ್ಪನ್ನಗಳೊಂದಿಗೆ ಎಥೆನಾಲ್ ಮಿಶ್ರಣವನ್ನು ಹೆಚ್ಚಿಸುವ ಅಗತ್ಯವಿದೆ ಎಂಬುದರ ಬಗ್ಗೆಯೂ ಮಾತನಾಡಿ ರುವುದಾಗಿ ಮಾಜಿ ಕೃಷಿ ಸಚಿವರೂ ಆಗಿರುವ ಪವಾರ್ ತಿಳಿಸಿದರು. ಸಕ್ಕರೆ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳ ಬಗ್ಗೆ ಪರಿಶೀಲಿಸುವುದಾಗಿ ಅಮಿತ್ ಶಾ ಭರವಸೆ ನೀಡಿರುವುದಾಗಿ ಎನ್ ಸಿಪಿ ಮುಖ್ಯಸ್ಥ ಹೇಳಿದ್ದರು.

ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿ: ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ ನಿರ್ಧರಿಸಲಾಗಿದೆ. ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ.

ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಾಳೆ ಅಥವಾ ನಾಡಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡುವುದಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವರಿಗೆ ಇಂದೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಹ ಅವರು ತಿಳಿಸಿದರು. ಸದ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ಕೊವಿಡ್ ಪರಿಣಿತರ ಸಭೆಯಲ್ಲಿ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.

ಶಾಲಾ ಕಾಲೇಜುಗಳು ಆಗಸ್ಟ್ 23 ರಿಂದ ಆರಂಭ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೊವಿಡ್ ನಿರ್ವಹಣೆ ಕುಇರತು ಪರಿಣಿತರ ಜತೆ ಸಭೆ ನಡೆಸಿದ ನಂತತ ತಿಳಿಸಿದರು. ಶಾಲಾ-ಕಾಲೇಜುಗಳು ಆಗಸ್ಟ್‌ 23ರಿಂದ ಆರಂಭ ಆಗಲಿದೆ. 9, 10, 12ನೇ ತರಗತಿಗಳು ಆರಂಭವಾಗಲಿವೆ. ನಂತರ 1ರಿಂದ 8ರವರೆಗಿನ ಶಾಲೆಗಳ ಆರಂಭದ ಬಗ್ಗೆ ಚರ್ಚೆ ಮಾಡಲಾಗುವುದು. ಆಗಸ್ಟ್‌ ಬಳಿಕ ಕೋವಿಡ್‌ ತೀವ್ರತೆ ನೋಡಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದಾರೆ.

ಜತೆಗೆ ಇಂದೇ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಮಾಡುವುದಾಗಿ ತಿಳಿಸಿದರು. ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೋಳಿ ‌ಮನೆಯಲ್ಲಿ ನಡೆದ ಸಭೆಯ ಕುರಿತು ಪ್ರತಿಕ್ರಿಯಿಸಲು ಅವರು ಈ ಸಂದರ್ಭದಲ್ಲಿ ನಿರಾಕರಿಸಿದರು.

ಇಂದೇ ಖಾತೆ ಹಂಚಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊವಿಡ್ ನಿರ್ವಹಣೆ ಕುರಿತು ಪರಿಣಿತರ ಜತೆ ಸಭೆ ನಡೆಸಿದ ಅವರು ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಜಾರಿಯ ಬಗ್ಗೆಯೂ ಮಾಹಿತಿ ನೀಡಿದರು.

Recommended Video

      H D Kumarswamy : ಏನ್ ಮಾಡಿದ್ರು ನಾವು ಸುಮ್ನಿರ್ತೀವಿ ಅಂದ್ಕೊಂಡಿದಾರೆ | Oneindia Kannada

      ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ ನಿರ್ಧರಿಸಲಾಗಿದೆ. ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+