ಬಿಜೆಪಿ ನೀವು ಇಂಡಿಯಾಗೆ ಚಾಲೆಂಜ್ ಮಾಡುತ್ತಿರಾ?: ವಿಪಕ್ಷಗಳ ಸಭೆ ಬಳಿಕ ಮಮತಾ ಬ್ಯಾನರ್ಜಿ ಪ್ರಶ್ನೆ
ಬೆಂಗಳೂರು, ಜುಲೈ. 18: ಮುಂದಿನ ವರ್ಷ್ ರಾಷ್ಟ್ರೀಯ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲಿರುವ 26 ವಿರೋಧ ಪಕ್ಷಗಳ ಪ್ರಮುಖ ನಾಯಕರು ಬೆಂಗಳೂರಿನಲ್ಲಿ ಎರಡು ದಿನಗಳ ಸಮಾವೇಶ ಸಭೆ ನಡೆಸಿದ್ದಾರೆ. ವಿರೋಧ ಪಕ್ಷದ ಮೈತ್ರಿ ಯುಪಿಎ ಹೆಸರನ್ನು I-N-D-I-A (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿ) ಎಂದು ಬದಲಿಸಿಕೊಂಡಿದ್ದಾರೆ.
ಸಬೆ ಬಳಿಕ ಸುದ್ದಿಗೋಷ್ಠಿಯಲ್ಲಿ ಎಲ್ಲಾ ರಾಷ್ಟ್ರೀಯ ನಾಯಕರು ಮಾತನಾಡಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎನ್‌ಡಿಎ ಮೈತ್ರಿಕೋಟಕ್ಕೆ ಸವಾಲು ಎಸೆದಿದ್ದಾರೆ. "ಎನ್‌ಡಿಎ, ನೀವು ಐಎನ್‌ಡಿಐಎಗೆ ಸವಾಲು ಹಾಕಬಹುದೇ?, ಬಿಜೆಪಿ ನೀವು ಇಂಡಿಯಾಗೆ ಚಾಲೆಂಜ್ ಮಾಡುತ್ತಿರಾ?" ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಬೆಂಗಳೂರಿನಲ್ಲಿ ಪ್ರಶ್ನಿಸಿದ್ದಾರೆ.

"ಎನ್‌ಡಿಎ, ನೀವು ಇಂಡಿಯಾ (ಐಎನ್‌ಡಿಐಎ)ಗೆ ಸವಾಲು ಹಾಕಬಹುದೇ?" ಬಿಜೆಪಿ ನೀವು ಇಂಡಿಯಾಗೆ ಚಾಲೆಂಜ್ ಮಾಡುತ್ತಿರಾ?. ನಾವು ನಮ್ಮ ತಾಯ್ನಾಡನ್ನು ಪ್ರೀತಿಸುತ್ತೇವೆ. ಇಂದು ನಾವಿದ್ದೇವೆ. ಭವಿಷ್ಯದಲ್ಲಿಯೂ ನಿಮ್ಮ ಜೊತೆಗಿದ್ದೇವೆ. ರೈತರ ಜೊತೆಗಿದ್ದೇವೆ, ಪೊಲೀಸರ ಜೊತೆಗಿದ್ದೇವೆ. ದೇಶದ ಜೊತೆಗಿದ್ದೇವೆ. ಈ ಬಾರಿ ಇಂಡಿಯಾ ಗೆಲ್ಲಲಿದೆ ಮತ್ತು ಬಿಜೆಪಿ ಸೋಲಲಿದೆ ಎಂದು ಟಿಎಂಸಿ ನಾಯಕಿ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬೆಂಗಳೂರಿನಲ್ಲಿ ಹೇಳಿದ್ದಾರೆ.
#WATCH | "NDA, can you challenge I.N.D.I.A?," asks TMC leader and West Bengal CM Mamata Banerjee in Bengaluru.
— ANI (@ANI) July 18, 2023
The Opposition alliance for 2024 polls is called Indian National Developmental Inclusive Alliance - I.N.D.I.A. pic.twitter.com/0buyBVste5
"ಎನ್‌ಡಿಎ, ಬಿಜೆಪಿ, ನೀವು ಐಎನ್‌ಡಿಐಎಗೆ ಸವಾಲು ಹಾಕಬಹುದೇ?. ನಾವು ನಮ್ಮ ಮಾತೃಭೂಮಿಯನ್ನು ಪ್ರೀತಿಸುತ್ತೇವೆ, ನಾವು ದೇಶದ ದೇಶಭಕ್ತ ಜನರು. ನಾವು ದೇಶ, ಜಗತ್ತು, ರೈತರು, ಎಲ್ಲರಿಗಾಗಿ ಇಂದು ನಾವಿದ್ದೇವೆ. ಭವಿಷ್ಯದಲ್ಲಿಯೂ ನಿಮ್ಮ ಜೊತೆಗಿದ್ದೇವೆ" ಎಂದು ಹೇಳಿದ್ದಾರೆ.
"ದೇಶದ ಹಿಂದೂಗಳು, ದಲಿತರು, ಅಲ್ಪಸಂಖ್ಯಾತರು, ರೈತರು, ಪಶ್ಚಿಮ ಬಂಗಾಳ ಮತ್ತು ಮಣಿಪುರದ ಜನರು ಬಿಜೆಪಿಯಿಂದ ಭಯದಲ್ಲಿ ಬದುಕುತ್ತಿದ್ದಾರೆ, ಬಿಜೆಪಿಯವರ ಏಕೈಕ ಕೆಲಸವೆಂದರೆ ಸರ್ಕಾರಗಳನ್ನು ಖರೀದಿಸುವುದು ಮತ್ತು ಮಾರಾಟ ಮಾಡುವುದು" ಎಂದು ಮಮತಾ ಬ್ಯಾನರ್ಜಿ ಬಿಜೆಪಿ ಸರ್ಕಾರದ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ತಮ್ಮ ತಮ್ಮ ರಾಜ್ಯಗಳಿಗೆ ತೆರಬೇಕಾದ ಕಾರಣ ವಿಮಾನ ನಿಲ್ದಾಣಕ್ಕೆ ಹೋಗಲು ಹಲವಾರು ನಾಯಕರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಸಿಎಂ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, "ಪ್ರಧಾನಿ ಮೋದಿಗೆ ಕಳೆದ ಹತ್ತು ವರ್ಷಗಳಿಂದ ದೇಶವನ್ನು ಆಳುವ ಅವಕಾಶ ಸಿಕ್ಕಿತು. ಅವರು ದೇಶದ ಪ್ರತಿಯೊಂದು ಕ್ಷೇತ್ರವನ್ನು ಸಂಪೂರ್ಣ ಅವ್ಯವಸ್ಥೆಗೊಳಿಸಿದ್ದಾರೆ. ಅವರು ಜನರ ನಡುವೆ ದ್ವೇಷವನ್ನು ಹುಟ್ಟುಹಾಕಿದ್ದಾರೆ. ಆರ್ಥಿಕತೆಯು ಹದಗೆಟ್ಟಿದೆ, ಎಲ್ಲಾ ಕ್ಷೇತ್ರಗಳಲ್ಲಿ ಹಣದುಬ್ಬರವಿದೆ, ತುಂಬಾ ನಿರುದ್ಯೋಗವಿದೆ, ಈಗ ನಾನು ಭಾವಿಸುತ್ತೇನೆ, ಈ ದೇಶದ ಜನರು ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಎಲ್ಲರೂ ಒಗ್ಗೂಡಬೇಕಾಗಿದೆ" ಎಂದಿದ್ದಾರೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications