ಮತ ಯಾಚಿಸಲು ಬಂದ ರಾಮನಾಥ್ ಕೋವಿಂದ್ ಗೆ ಆತ್ಮೀಯ ಸ್ವಾಗತ
ಬೆಂಗಳೂರು, ಜುಲೈ 05 : ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ರಾಮನಾಥ ಕೋವಿಂದ್ ಅವರು ಬೆಂಗಳೂರಿಗೆ ಬುಧವಾರ ಬೆಳಗ್ಗೆ ಆಗಮಿಸಿದರು.
ವಿಶೇಷ ವಿಮಾನದ ಮೂಲಕ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೋವಿಂದ್ ರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ನಂತರ ಖಾಸಗಿ ಹೋಟೆಲ್‍ನಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಕೋವಿಂದ್ ಭಾಗವಹಿಸಿ, ಔಪಚಾರಿಕವಾಗಿ ಮತಯಾಚಿಸಿದರು. ಈ ಸಭೆಯಲ್ಲಿ ಬಿಜೆಪಿಯ ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಪಾಲ್ಗೊಂಡಿದ್ದರು.

ಮಾಜಿ ಸ್ಪೀಕರ್ ಮೀರಾಕುಮಾರ್ ಅವರಿಗೆ ಕರ್ನಾಟಕ ಕಾಂಗ್ರೆಸ್ ತನ್ನ ಬೆಂಬಲ ವ್ಯಕ್ತಪಡಿಸಿದೆ. ಜೆಡಿಎಸ್ ಕೂಡ ಮೀರಾಕುಮಾರ್ ಅವರ ಬೆಂಬಲಕ್ಕೆ ನಿಂತಿದೆ. ಆದರೂ, ಈ ಎರಡು ಪಕ್ಷಗಳ ಜನಪ್ರತಿನಿಧಿಗಳ ಜತೆ ಅನೌಪಚಾರಿಕ ಭೇಟಿ, ಮಾತುಕತೆ ನಡೆಸಲಿದ್ದಾರೆ.












Click it and Unblock the Notifications