ಕರ ಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ನೇಹಾ ಪಾಟೀಲ್
ಬೆಂಗಳೂರು, ಆಗಸ್ಟ್ 20: ಕೊರೊನಾ ಲಾಕ್‌ಡೌನ್‌ನಿಂದಾಗಿ ತೊಂದರೆಗೀಡಾಗಿರುವ ಕರ ಕುಶಲಕರ್ಮಿಗಳಿಗೆ ಪ್ರೋತ್ಸಾಹದ ಅಗತ್ಯವಿದೆ ಎಂದು ನಟಿ ನೇಹಾ ಪಾಟೀಲ್ ಹೇಳಿದರು.
ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಕನ್ನಡ ಚಲನಚಿತ್ರ ನಟಿ ನೇಹಾ ಪಾಟೀಲ್ ಭೇಟಿ ನೀಡಿದರು.
ಶುಕ್ರವಾರದಂದು ಬೆಂಗಳೂರು ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಇಂದಿನಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಆರ್ಟಿಸನ್ಸ್ ಬಜಾರ್‌ನ್ನು ಉದ್ಘಾಟಿಸಿ ಮಾತನಾಡಿದರು.

"ಕೊರೊನಾ ಸಾಂಕ್ರಾಮಿಕ ರೋಗ ಎಲ್ಲಾ ಕ್ಷೇತ್ರದ ಜನರನ್ನೂ ತೊಂದರೆಗೀಡು ಮಾಡಿದೆ. ಅದರಲ್ಲೂ ಮಾರುಕಟ್ಟೆಯ ಕೊರತೆಯನ್ನು ಅನುಭವಿಸುತ್ತಿರುವ ಕರ ಕುಶಲಕರ್ಮಿಗಳಿಗಂತೂ ಇದರ ಹೊಡೆತ ಹೆಚ್ಚಾಗಿಯೇ ಇದೆ. ಈ ನಿಟ್ಟಿನಲ್ಲಿ ಅವರಿಗೆ ಪ್ರೋತ್ಸಾಹ ಹಾಗೂ ಅವರ ವಸ್ತುಗಳಿಗೆ ಅಗತ್ಯವಿರುವ ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ಆರ್ಟಿಸನ್ಸ್ ಬಜಾರ್‌ಗೆ ಭೇಟಿ ನೀಡಿ," ಎಂದು ನಟಿ ನೇಹಾ ಪಾಟೀಲ್ ಜನರಿಗೆ ಕರೆ ನೀಡಿದರು.
ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಆಗಸ್ಟ್ 20 ರಿಂದ ಆಗಸ್ಟ್ 29ರವರೆಗೆ ಬೆಳಿಗ್ಗೆ 11 ರಿಂದ ಸಂಜೆ ೭ ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ. ಕೋವಿಡ್ ಸೋಂಕು ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ.
ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80ಕ್ಕೂ ಹೆಚ್ಚು ಅಂಗಡಿಗಳಿದ್ದು, ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ.

ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

Recommended Video
ಗ್ರಾಂಡ್ ಫ್ಲಿಯಾ ಆಯೋಜಿಸಿರುವ ಈ ಮೇಳದ ಪ್ರಮುಖ ಉದ್ದೇಶ ಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರಿದೆ.












Click it and Unblock the Notifications