ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾಗೆ ಹೋಮಿಯೋಪತಿ ಪದ್ಧತಿಯಲ್ಲೂ ಔಷಧಿ ಆವಿಷ್ಕಾರ

|
Google Oneindia Kannada News

ಬೆಂಗಳೂರು, ಡಿ 30: ಕೊರೊನಾ ನಿವಾರಣೆಗೆ ಹೋಮಿಯೋಪತಿ ಪದ್ಧತಿಯಲ್ಲೂ ಔಷಧಿ ಆವಿಷ್ಕಾರ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಹೋಮಿಯೋಪತಿ ದಿನಾಚರಣೆಯಲ್ಲಿ ಮಾತನಾಡಿದರು.

''ನಮ್ಮಲ್ಲಿ ಸಂಶೋಧನೆಗಳು ಕಡಿಮೆಯಾಗಿವೆ. ಎಲ್ಲವನ್ನೂ ಬೇರೆ ದೇಶಗಳಿಂದ ತರಿಸಿಕೊಳ್ಳುವಂತಾಗಿದೆ. ಕೊರೊನಾ ನಿಯಂತ್ರಣಕ್ಕೆ ತರಲು ಆರ್ಸೆನಿಕ್ ಆಲ್ಬಂ ಎಂಬ ಹೋಮಿಯೋಪತಿ ಔಷಧಿ ಬಳಕೆಯಲ್ಲಿದೆ. ಆದರೆ ಕೊರೊನಾ ನಿವಾರಣೆಗೆ ಬೇರೆ ಸಂಸ್ಥೆಗಳು ಔಷಧಿ ತಯಾರಿಸುತ್ತಿರುವಂತೆ ಹೋಮಿಯೋಪತಿಯಲ್ಲೂ ಔಷಧಿ ಕಂಡುಹಿಡಿಯಬೇಕು'' ಎಂದು ಹೇಳಿದರು.

ಹೋಮಿಯೋಪತಿ ಪದ್ಧತಿ ಮುಳ್ಳನ್ನು ಮುಳ್ಳಿಂದಲೇ ತೆಗೆಯಬೇಕು ಎಂಬ ತತ್ವವನ್ನು ಆಧರಿಸಿದೆ. ಟೈಫಾಯಿಡ್ ಬಂದಾಗಲೂ ಹೋಮಿಯೋಪತಿ ಬಳಕೆಯಾಗಿತ್ತು. ಇಂತಹ ಪದ್ಧತಿಗೆ ಉತ್ತೇಜನ ನೀಡಬೇಕು. ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ ಗೆ ವಿಶೇಷ ಒತ್ತು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಬ್ಬ ಆಯುಷ್ ವೈದ್ಯರನ್ನು ನಿಯೋಜಿಸಲು ತೀರ್ಮಾನಿಸಿದೆ ಎಂದು ತಿಳಿಸಿದರು.

Need to develop medicine for Covid-19 in Homeopathy also: Dr.K.Sudhakar

ಕರ್ನಾಟಕದಲ್ಲಿ ಏಳು ಮಂದಿಗೆ ರೂಪಾಂತರಿ ಕೊರೊನಾ

ಯು.ಕೆ.ಯಿಂದ ದೇಶಕ್ಕೆ ಬಂದವರಲ್ಲಿ 107 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಎಲ್ಲರ ಮಾದರಿಗಳನ್ನು ಲ್ಯಾಬ್ ಗಳಲ್ಲಿ ಪರೀಕ್ಷಿಸಲಾಗಿದೆ. ಈ ಪೈಕಿ 20 ಮಂದಿಗೆ ರೂಪಾಂತರಗೊಂಡ ವೈರಾಣು ಸೋಂಕು ತಗುಲಿದೆ ಎಂದು ದೃಢಪಟ್ಟಿದೆ. ದೆಹಲಿಯಲ್ಲಿ 8, ಕರ್ನಾಟಕದಲ್ಲಿ 7 ಜನರಿಗೆ ಈ ಹೊಸ ಬಗೆಯ ವೈರಾಣುವಿನ ಕೊರೊನಾ ಇದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂವರಿಗೆ ಹಾಗೂ ಶಿವಮೊಗ್ಗದಲ್ಲಿ ನಾಲ್ಕು ಜನರಿಗೆ ರೂಪಾಂತರಗೊಂಡ ವೈರಾಣು ಸೋಂಕು ಬಂದಿದೆ ಎಂದು ತಿಳಿಸಿದರು.

Need to develop medicine for Covid-19 in Homeopathy also: Dr.K.Sudhakar

ರೂಪಾಂತರಗೊಂಡ ಕೊರೊನಾ ಸೋಂಕಿತರ 39 ಸಂಪರ್ಕಿತ ವ್ಯಕ್ತಿಗಳನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದು, ಅವರಿಗೂ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಆದರೆ ಯಾರಿಗೂ ಸೋಂಕು ತಗುಲಿಲ್ಲ. ಶಿವಮೊಗ್ಗದಲ್ಲಿ 7 ಸಂಪರ್ಕಿತ ವ್ಯಕ್ತಿಗಳ ಪರೀಕ್ಷೆ ಮಾಡಿದ್ದು, ಆ ಪೈಕಿ ಮೂವರಿಗೆ ಕೊರೊನಾ ಪಾಸಿಟಿವ್ ಇದೆ. ಈ ಮೂವರ ಮಾದರಿಗಳ ಸೀಕ್ವಿನ್ಸಿಂಗ್ ಮಾಡಲಾಗುತ್ತಿದೆ ಎಂದು ವಿವರಿಸಿದರು.

Need to develop medicine for Covid-19 in Homeopathy also: Dr.K.Sudhakar

ರೂಪಾಂತರಿ ವೈರಾಣುಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಮಾರ್ಗಸೂಚಿಯನ್ನು ಎಲ್ಲರೂ ಪಾಲಿಸಬೇಕು. ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದು ತಿಳಿಸಿದರು.

Recommended Video

ಬೆಂಗಳೂರು: ರೂಪಾಂತರ ಕೊರೊನಾ ವೈರಸ್‌ ಕಂಟಕದ ಭೀತಿಯಲ್ಲಿ ಸಿಲಿಕಾನ್ ಸಿಟಿ! | Oneindia Kannada

English summary
There is a need to develop medicine for Covid-19 in Homeopathy also, said Health & Medical Education Minister Dr.K.Sudhakar. He was speaking at Homeopathy day function at RGUHS in Bengaluru on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X