NEET: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಸಂಭ್ರಮಾಚರಣೆ: ಡಿಯರ್ ಬೆಂಗಳೂರು ಪೊಲೀಸ್ ಥ್ಯಾಂಕ್ಸ್‌ ಎಂದ ಹೋರಾಟಗಾರರು

NEET: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಜೆನ್‌ಜೀಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದರು. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರಾರಂಭವಾಗಿದ್ದ ಈ ಹೋರಾಟವು ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಜುಲೈ 25ರ ಶನಿವಾರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಯುವಕರು ಹಾಗೂ ಕಾಕ್ರೋಚ್ ಜನತಾ ಪಾರ್ಟಿಯ ಬೆಂಬಲಿತರು ಸಂಭ್ರಮಾಚರಣೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರು ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಸಂಭ್ರಮಾಚರಣೆಯ ಸಂದರ್ಭದಲ್ಲಿ ಡಿಯರ್ ಬೆಂಗಳೂರು ಪೊಲೀಸ್ ಥ್ಯಾಂಕ್ಸ್‌ ಎನ್ನುವ ಘೋಷಣೆಗಳು ಕೇಳಿ ಬಂದಿವೆ.

ದೇಶದಾದ್ಯಂತ ನಡೆಯುತ್ತಿರುವ ಜೆನ್‌ಜೀ ಪ್ರತಿಭಟನೆಗೆ ಬೆಂಗಳೂರು - ಕರ್ನಾಟಕದಲ್ಲೂ ಬೆಂಬಲ ವ್ಯಕ್ತವಾಗಿತ್ತು. ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಗೆ ನಟ ಕಿಶೋರ್ ಕುಮಾರ್ ನೇರವಾಗಿ ಬೆಂಬಲ ಸೂಚಿಸಿದ್ದರೆ, ನಟ ಯುವರಾಜ್ ಕುಮಾರ್ ಹಾಗೂ ನಟಿ ಸಪ್ತಮಿ ಗೌಡ ಅವರು ಸಹ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಇದೀಗ ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್ (ಸ್ವಾತಂತ್ರ್ಯ ಉದ್ಯನವನ) ಸೇರಿದಂತೆ ವಿವಿಧ ಭಾಗದಲ್ಲಿ ಯುವಕರು ಸಂಭ್ರಮಾಚರಣೆ ನಡೆಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ಕೊಟ್ಟಿರುವುದು ಜೆನ್‌ಜೀ ಹೋರಾಟಕ್ಕೆ ಸಂದ ಜಯವಾಗಿದೆ. ಕಳೆದ 12 ವರ್ಷಗಳಲ್ಲಿ ಕೇಂದ್ರ ಬಿಜೆಪಿ ಆಡಳಿತದಲ್ಲಿ ರಾಜೀನಾಮೆ ನೀಡಿದ ಮೊದಲ ಸಚಿವ ಧರ್ಮೇಂದ್ರ ಪ್ರಧಾನ್ ಆಗಿದ್ದಾರೆ. ಇದಕ್ಕೆ ಇಂದಿನ ಯುವಕರ ಹೋರಾಟವೇ ಕಾರಣ ಎಂದು ಯುವಕರು ಹೇಳಿದ್ದಾರೆ.

NEET

ಬೆಂಗಳೂರು ಪೊಲೀಸರಿಗೆ ಥ್ಯಾಂಕ್ಸ್‌ ಎಂದ ಹೋರಾಟಗಾರರು

ಇನ್ನು ದೇಶದಾದ್ಯಂತ ನಡೆಯುತ್ತಿದ್ದ ಹಾಗೂ ನಡೆದಿರುವ ಹೋರಾಟವು ದೆಹಲಿಯ ಜಂತರ್ ಮಂತರ್ ಸೇರಿದಂತೆ ವಿವಿಧ ಕಡೆ ಹಿಂಸಾ ಸ್ವರೂಪ ಪಡೆದುಕೊಂಡಿತ್ತು. ಆದರೆ ಬೆಂಗಳೂರಿನಲ್ಲಿ ಯುವ ಸಮೂಹದ ಪ್ರತಿಭಟನೆಯು ಅತ್ಯಂತ ಶಾಂತಿಯುತವಾಗಿ ನಡೆದಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ವೈರಲ್ ಸಹ ಆಗಿದ್ದವು. ಇದೀಗ ಹೋರಾಟಗಾರರು ಬೆಂಗಳೂರು ಪೊಲೀಸರಿಗೆ, ಡಿಯರ್ ಬೆಂಗಳೂರು ಪೊಲೀಸ್ ಥ್ಯಾಂಕ್ಸ್‌ ಅಂತ ಹೇಳಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿಯ 3 ಬೇಡಿಕೆಗಳು ಬಾಕಿ

ಇನ್ನು ಕಾಕ್ರೋಚ್ ಜನತಾ ಪಾರ್ಟಿಯ ಪ್ರಮುಖ ಬೇಡಿಕೆಯಾಗಿದ್ದ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ಕೊಡಬೇಕು ಎನ್ನುವ ಬೇಡಿಕೆಯು ಈಡೇರಿದೆ. ಇದೀಗ ಇನ್ನೂ ಮೂರು ಬೇಡಿಕೆಗಳು ಬಾಕಿ ಉಳಿದಿವೆ ಎಂದು ಕಾಕ್ರೋಚ್ ಜನತಾ ಪಾರ್ಟಿಯು ಹೇಳಿದೆ. ಅಲ್ಲದೆ ಈ ಬೇಡಿಕೆ ಈಡೇರುವ ವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದೂ ಕಾಕ್ರೋಚ್ ಜನತಾ ಪಾರ್ಟಿಯ ಅಧಿಕೃತ ಖಾತೆಯಿಂದ ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಲಾಗಿದೆ.

NEET

CJPಯ ಬೇಡಿಕೆಗಳ ಸ್ಥಿತಿ (ನವೀಕರಿಸಲಾಗಿದೆ):

1. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು - ✅ ಈಡೇರಿದೆ

2. ಆತ್ಮಹತ್ಯೆಯಿಂದ ಮೃತಪಟ್ಟ ಎಲ್ಲಾ ವಿದ್ಯಾರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ - ಬಾಕಿ ಇದೆ

3. ಪ್ರತಿಭಟನೆಯಲ್ಲಿ ಭಾಗವಹಿಸಿದ ಯಾವುದೇ ವಿದ್ಯಾರ್ಥಿಯ ವಿರುದ್ಧ ಕ್ರಮ ಕೈಗೊಳ್ಳಬಾರದು - ಬಾಕಿ ಇದೆ

4. RAF ಹಾಗೂ ದೆಹಲಿ ಪೊಲೀಸರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು - ಬಾಕಿ ಇದೆ.

ಜಂತರ್ ಮಂತರ್‌ನಲ್ಲಿರುವ ಪ್ರತಿಭಟನಾಕಾರರು ಹಾಗೂ ದೇಶದಾದ್ಯಂತದ ವಿದ್ಯಾರ್ಥಿಗಳು ಉಳಿದ ಬೇಡಿಕೆಗಳು ಈಡೇರುವ ನಿರೀಕ್ಷೆಯಲ್ಲಿದ್ದಾರೆ ಎಂದು ಕಾಕ್ರೋಚ್ ಜನತಾ ಪಾರ್ಟಿಯ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಇದೀಗ ಈ ಟ್ವೀಟ್ ಸಹ ವೈರಲ್ ಆಗುತ್ತಿದೆ.

'ನಮ್ಮ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ'

ಇನ್ನು ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರವು ಹೇಳಿದೆ. ಹೀಗಾಗಿ, ಪ್ರತಿಭಟನೆ ಅಂತ್ಯ ಮಾಡುತ್ತಿರುವುದಾಗಿ ಕಾಕ್ರೋಚ್ ಜನತಾ ಪಾರ್ಟಿ ಹೇಳಿದೆ. ಕೇಂದ್ರದೊಂದಿಗೆ ಮೂರನೇ ಸುತ್ತಿನ ಮಾತುಕತೆಯ ನಂತರ ದೆಹಲಿ ಪ್ರತಿಭಟನೆಯನ್ನು ಸಿಜೆಪಿ ಅಂತ್ಯಗೊಳಿಸಿದೆ.

ಕಾಕ್ರೋಚ್‌ ಜನತಾ ಪಾರ್ಟಿಯು ರಾಷ್ಟ್ರವ್ಯಾಪಿ ಆಂದೋಲನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದೆ

ಕಾಕ್ರೋಚ್ ಜನತಾ ಪಕ್ಷದ ಎಲ್ಲಾ ಬೇಡಿಕೆಗಳನ್ನು ಕೇಂದ್ರ ಸರ್ಕಾರವು ಸರ್ಕಾರ ಅಂಗೀಕರಿಸಿದೆ:

1. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬದವರಿಗೆ ಗರಿಷ್ಠ ಪರಿಹಾರ

2. ಕೇಂದ್ರ ಸರ್ಕಾರ ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲ ಎಫ್‌ಐಆರ್‌ಗಳನ್ನು ಹಿಂಪಡೆಯಲಾಗುತ್ತದೆ. ಭವಿಷ್ಯದಲ್ಲಿ ಈ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ಯಾರ ವಿರುದ್ಧವೂ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ.

3. ಸಿಜೆಪಿಯ 5-ಅಂಶ ಪರೀಕ್ಷಾ ಸುಧಾರಣಾ ಚಾರ್ಟರ್ ಅನ್ನು ಸರ್ಕಾರ ಪರಿಗಣಿಸುತ್ತದೆ ಮತ್ತು ಈ ಸುಧಾರಣೆಗಳನ್ನು ಮತ್ತಷ್ಟು ಚರ್ಚಿಸಲು ಸಿಜೆಪಿ ಸರ್ಕಾರದೊಂದಿಗೆ ಸಭೆ ನಡೆಸಲಿದೆ ಎಂದು ಅಧಿಕೃತ ಕಾಕ್ರೋಚ್ ಜನತಾ ಪಾರ್ಟಿಯಿಂದ ಟ್ವೀಟ್ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+