Nelamangala-Hassan National: ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ದುಬಾರಿ
Nelamangala-Hassan National: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆ ಆಗುತ್ತಲಿದೆ. ಜೊತೆಗೆ ಟೋಲ್ ದರಗಳು ಕೂಡ ಅಷ್ಟೇ ಹೆಚ್ಚಳ ಆಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಹೊರವಲಯದ ನೆಲಮಂಗಲ-ಹಾಸನ ರಾಷ್ಟ್ರೀಯ ಟೋಲ್ ಶುಲ್ಕ ಎರಿಕೆಯಾಗಿದೆ. ಇದು ಸೆಪ್ಟೆಂಬರ್ 1ರಿಂದಲೇ ಜಾರಿ ಆಗಿದ್ದು, ಇದರಿಂದ ವಾಹನ ಸವಾರರಿಗೆ ಬಿಗ್ ಶಾಕ್ ಎದುರಾದಂತಾಗಿದೆ. ಹಾಗಾದ್ರೆ, ಯಾವ್ಯಾವ ವಾಹನಗಳಿಗೆ ಎಷ್ಟು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ರಾಜ್ಯದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರ ಹಲವು ಬಾರಿ ಏರಿಕೆಯಾಗಿದೆ. ಇದರ ವಿರುದ್ಧ ಪ್ರಯಾಣಿಕರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಲಿದ್ದಾರೆ. ಅದರಲ್ಲೂ ಕಾಮಗಾರಿ ಪ್ರಗತಿಯಲ್ಲಿ ಇರುವಂತಹ ಹೆದ್ದಾರಿಗಳಲ್ಲೂ ಸಹ ಟೋಲ್ ಶುಲ್ಕ ಕಟ್ಟಿಸಿಕೊಳ್ಳಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಈ ನಡುವೆಯೇ ಇದೀಗ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ 75 ಟೋಲ್ ಶುಲ್ಕವನ್ನು ಏರಿಕೆ ಮಾಡಲಾಗಿದೆ.

ಪ್ರತಿ ತಿಂಗಳು ಕೂಡ ಒಂದಲ್ಲ ಒಂದು ನಿಯಮಗಳಲ್ಲಿ ಬದಲಾವಣೆಗಳು ಆಗುತ್ತಲಿರುತ್ತವೆ. ಅದರಲ್ಲೂ ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ನಿಯಮಗಳನ್ನೇ ಜಾರಿಗೊಳಿಸಲಾಗುತ್ತಿದೆ. ಹಾಗೆಯೇ ಇದೀಗ ಆಗಸ್ಟ್ ತಿಂಗಳ ಅಂತ್ಯವಾಗಲಿದ್ದು, ಕೆಲವೇ ಕ್ಷಣಗಳಲ್ಲಿ ಸೆಪ್ಟೆಂಬರ್ ಎಂಟ್ರಿ ಕೊಡಲಿದೆ. ಈ ಸೆಪ್ಟೆಂಬರ್ 1ರಿಂದಲೇ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ಏರಿಕೆ ನಿಯಮವನ್ನು ಎನ್‌ಎಚ್‌ಎಐ ಜಾರಿಗೊಳಿಸಲಿದೆ ಎನ್ನುವ ಶಾಕಿಂಗ್ ಸುದ್ದಿ ಲಭ್ಯವಾಗಿದೆ.
ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೆಪ್ಟೆಂಬರ್ 1ರಿಂದ ದರ ಏರಿಕೆ ಮಾಡಿ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದೆ. ಇಂದು ಮಧ್ಯರಾತ್ರಿಯಿಂದ 5 ರೂಪಾಯಿ ದರ ಏರಿಕೆ ಆಗಲಿದೆ. ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್ ಪ್ರೈವೇಟ್ ಲಿಮಿಟೆಡ್ ಟೋಲ್‌ಗಳಲ್ಲಿ ಏರಿಕೆ ಆಗಿದ್ದು, ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ಮೂಲಕ ಸಂಚಾರ ಮಾಡುವ ವಾಹನ ಸವಾರರಿಗೆ ಇದರ ಬಿಸಿ ತಟ್ಟಲಿದೆ
ದೊಡ್ಡಕರೇನಹಳ್ಳಿ ಟೋಲ್ ಹಾಗೂ ಕಾರಬೈಲು ಟೋಲ್ ಪ್ಲಾಜಾಗಳಲ್ಲಿ ದರ ಏರಿಕೆ ಆಗಿದ್ದು, ಏಕಮುಖ ಸಂಚಾರಕ್ಕೆ 5 ರೂಪಾಯಿ, ದ್ವಿಮುಖ ಸಂಚಾರಕ್ಕೆ 10 ರೂಪಾಯಿ ದರ ಏರಿಕೆ ಮಾಡಲಾಗಿದೆ. ಕಾರು, ಜೀಪು, ವ್ಯಾನ್ ಹಾಗೂ ಲಘು ಮೋಟಾರ್ ವಾಹನಗಳಿಗೆ ಮೊದಲಿದ್ದ ದರವೇ ಇರಲಿದೆ. ಫಾಸ್ಟ್ಯಾಗ್ ಇದ್ದರೆ ಏಕಮುಖ ಸಂಚಾರಕ್ಕೆ ಈಗಿನ ದರ 55 ರೂಪಾಯಿ, ಫಾಸ್ಟ್ಯಾಗ್ ರಹಿತ ಸಂಚಾರಕ್ಲೆ 110 ರೂಪಾಯಿ ಇತ್ತು. ಈಗಿನ ದರ 120 ರೂಪಾಯಿ ಆಗಿದೆ.
ಲಘು ವಾಣಿಜ್ಯ ಮತ್ತು ಸರಕು ವಾಹನಗಳ ಏಕಮುಖ ಸಂಚಾರಕ್ಕೆ 100 ರೂಪಾಯಿ ಹಾಗೂ ದಿನದ ಸಂಚಾರಕ್ಕೆ 155 ರೂಪಾಯಿ ದರ ಏರಿಕೆ ಮಾಡಲಾಗಿದೆ. ಈ ದರ ಏರಿಕೆ ಬಿಸಿಯಿಂದ ವಾಹನ ಮಾಲೀಕರು ಕಂಗಾಲಾಗಿದ್ದಾರೆ. ಅಲ್ಲದೆ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಕೆಂಡಕಾರುತ್ತಿದ್ದಾರೆ. ಈಗಾಗಲೇ ಈ ಹಿಂದೆಯೂ ಹಲವು ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಇದರಿಂದ ಟೋಲ್ ಸಿಬ್ಬಂದಿ ಹಾಗೂ ವಾಹನ ಸವಾರರ ನಡುವೆ ಮಾರಾಮಾರಿಗಳು ನಡೆದಿರುವ ಉದಾಹರಣೆಗಳಿವೆ. ಇದೇ ವಿಚಾರವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಕಿರಿಕ್ ಆಗುತ್ತಲಿರುತ್ತದೆ. ವಾಹನ ಅವಾರರು ಹಾಗೂ ಟೋಲ್ ಸಿಬ್ಬಂದಿ ನಡುವೆ ಗಲಾಟೆಗಳು ನಡೆಯುತ್ತಲಿವೆ. ಹಾಗೆಯೇ ಇದೀಗ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ ವಿರುದ್ಧ ವಾಹನ ಸವಾರರು ಆಕ್ರೋಶ ಹಿರಹಾಕುತ್ತಿದ್ದಾರೆ.












Click it and Unblock the Notifications