ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ, ಐವರ ದುರ್ಮರಣ

ಬೆಂಗಳೂರು, ಮಾರ್ಚ್ 5: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲದ ಬಳಿ ನಡೆದಿದೆ.

ವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಐರಾವತ ಬಸ್‌ಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರಿನ ನಾಯಂಡಹಳ್ಳಿ ಪಂತರಪಾಳ್ಯದವರಾದ ಸ್ಕಾರ್ಪಿಯೋ ಚಾಲಕ ಏಳುಮಲೈ(36), ಗೀತಾ(10), ಕಮಲಾ(35), ಕಿರಣ್(13), ಗಿರಿಧರ್(14) ಮೃತರು. ಬಸ್​ನಲ್ಲಿದ್ದ ಕೆಲವರಿಗೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Nelamangala road accident 5 dies

ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲದ ಯಂಟಗಾನಹಳ್ಳಿ ಬಸ್​ ನಿಲ್ದಾಣದ ಸಮೀಪ ಅಪಘಾತ ಸಂಭವಿಸಿದೆ. ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+