ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯಪಾಲರೊಂದಿಗೆ ಡಾ. ಅಶ್ವಥ್ ನಾರಾಯಣ್ ಮಹತ್ವದ ಚರ್ಚೆ

|
Google Oneindia Kannada News

ಬೆಂಗಳೂರು, ಆ. 28: ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ರಾಜ್ಯಪಾಲ ವಜೂಭಾಯಿ ವಾಲ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

Recommended Video

ಬೆಂಗಳೂರಿನಲ್ಲಿ ನಡೆಯಲಿದೆ Aero India 2021| Oneindia Kannada

ಶುಕ್ರವಾರ ಬೆಂಗಳೂರಿನಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಡಿಸಿಎಂ, ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಈ ವರೆಗೆ ಸರಕಾರ ಕೈಗೊಂಡಿರುವ ಕ್ರಮಗಳು, ಕಾರ್ಯಪಡೆ ರಚನೆ, ಆ ಕಾರ್ಯಪಡೆ ಜತೆ ನಡೆಸಿರುವ ಸಭೆಗಳು, ವಿಚಾರ ವಿನಿಮಯ ಇತ್ಯಾದಿ ಸಂಗತಿಗಳ ಬಗ್ಗೆ ರಾಜ್ಯಪಾಲರ ಜತೆ ವಿಚಾರ ವಿನಿಮಯ ಮಾಡಿಕೊಂಡರು. ಇಡೀ ದೇಶದಲ್ಲಿಯೇ ಇತರೆ ರಾಜ್ಯಗಳಿಗಿಂತ ಮೊದಲು ಶಿಕ್ಷಣ ನೀತಿಯನ್ನು ಜಾರಿ ಮಾಡುವುದು ಸರಕಾರದ ಉದ್ದೇಶವಾಗಿದೆ. ಅದಕ್ಕಾಗಿ ಬೇಕಾಗಿರುವ ಎಲ್ಲ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಇದುವರೆಗೂ ಕಾರ್ಯಪಡೆ ಹಾಗು ಕಾರ್ಯಪಡೆಯ ಉಪ ಸಮಿತಿಗಳು ನೀಡಿರುವ ಸಲಹೆಗಳು ಮತ್ತು ವರದಿಗಳು ಸೇರಿದಂತೆ ಹತ್ತು ಹಲವು ಸಂಗತಿಗಳ ಬಗ್ಗೆ ಚರ್ಚಿಸಿರುವ ಅಂಶಗಳ ಬಗ್ಗೆ ಡಾ. ಅಶ್ವಥ್ ನಾರಾಯಣ ಅವರು ರಾಜ್ಯಪಾಲರಿಗೆ ವಿವರಿಸಿದರು.

ನೀತಿಯಲ್ಲಿ ಅಡಕವಾಗಿರುವ ಪ್ರಮುಖ ವಿಷಯಗಳು, ಅವುಗಳ ಜಾರಿಯಿಂದ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಆಗಲಿರುವ ಮಹತ್ವದ ಬದಲಾವಣೆಗಳ ಬಗ್ಗೆಯೂ ಅವರು ರಾಜ್ಯಪಾಲರಿಗೆ ವಿವರಣೆ ನೀಡಿದರಲ್ಲದೆ, ಈ ಸಂಬಂಧ ರಾಜ್ಯ ಸರಕಾರ ತರಲಿಚ್ಛಿಸಿರುವ ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಬದಲಾವಣೆಗಳ ಬಗ್ಗೆಯೂ ಮಾಹಿತಿ ನೀಡಿದರು.

Nep: Dcm Dr Cn Ashwath Narayana Held Important Meeting With Governor Vajubhai Wala

ಸಲಹೆ ನೀಡಿದ ರಾಜ್ಯಪಾಲರು: ಇದೇ ವೇಳೆ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಸರ್ಕಾರದ ಕೈಗೊಂಡಿರುವ ಕ್ರಮಗಳ ಬಗ್ಗೆ ರಾಜ್ಯಪಾಲ ವಜೂಬಾಯಿ ವಾಲಾ ಅವರು ಮೆಚ್ಚುಗೆ ವ್ಯಕ್ತಪಡಿಸಿ, ಕೆಲವು ಮಹತ್ವದ ಸಲಹೆಗಳನ್ನು ನೀಡಿದರು. ಜತೆಗೆ, ಡಿಸಿಎಂ ಜತೆಯಲ್ಲೇ ತಮ್ಮನ್ನು ಭೇಟಿಯಾಗಿದ್ದ ಶಿಕ್ಷಣನೀತಿ ನಿರೂಪಣಾ ಸಮಿತಿ ಸದಸ್ಯ ಹಾಗೂ ಅಜೀಂ ಪ್ರೇಮ್‌ಜೀ ವಿವಿಯ ಕುಲಪತಿ ಪ್ರೊ. ಅನುರಾಗ್ ಬೇಹರ್ ಅವರಿಂದ ನೀತಿಯಲ್ಲಿರುವ ಮತ್ತಷ್ಟು ಅಂಶಗಳ ಬಗ್ಗೆ ವಿವರಣೆ ಪಡೆದರು. ಜತೆಗೆ, ಡಿಸಿಎಂ ಅವರಿಗೆ ಕೆಲ ಮುಖ್ಯ ಸಲಹೆಗಳನ್ನೂ ನೀಡಿದರು.

Nep: Dcm Dr Cn Ashwath Narayana Held Important Meeting With Governor Vajubhai Wala

ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಆದಷ್ಟು ಬೇಗ ಹಂತ ಹಂತವಾಗಿ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ಯಪಡೆಯು ನೀತಿಯ ಜಾರಿಯ ಬಗ್ಗೆ ಅಂತಿಮ ನೀಲನಕ್ಷೆಯನ್ನು ನೀಡುವುದು ಬಾಕಿ ಇದ್ದು, ಅದು ಕೈಸೇರಿದ ಕೂಡಲೇ ಅನುಷ್ಟಾನದ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಡಾ. ಅಶ್ವಥ್ ನಾರಾಯಣ ಅವರು ಇದೇ ಸಂದರ್ಭದಲ್ಲಿ ರಾಜ್ಯಪಾಲರಿಗೆ ತಿಳಿಸಿದರು.

English summary
DCM Dr. C.N. Ashwath Narayana held important meeting with Governor Vajubhai Wala to implement the new National Education Policy in the state. Know more about,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X