ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿಗೆ ಇನ್ನು 243 ವಾರ್ಡ್; ಸರ್ಕಾರದಿಂದ ಅಧಿಕೃತ ಆದೇಶ

|
Google Oneindia Kannada News

ಬೆಂಗಳೂರು ಜುಲೈ 14: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇತ್ತೀಚೆಗೆ ಪುನರ್ ವಿಂಗಡಿಸಿದ್ದ 243 ನೂತನ ವಾರ್ಡ್ ಗಳಿಗೆ ರಾಜ್ಯ ಸರ್ಕಾರ ಇದೀಗ ಅಧಿಕೃತ ಮುದ್ರೆ ಹಾಕಿದೆ. ವಿಂಗಡಣೆ ಕುರಿತು ಸಾರ್ವಜನಿಕರಿಂದ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಗಣಿಸಿ, ಒಂದಷ್ಟು ಮಾರ್ಪಾಡುಗಳನ್ನು ಮಾಡಿ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ.

ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿದ್ದ 198 ವಾರ್ಡ್‌ಗಳನ್ನು 2011ರ ಜನಗಣತಿ ಆಧಾರದಲ್ಲಿ ಪ್ರತಿ ವಾರ್ಡ್ ಗೆ 35ಸಾವಿರ ಜನರು ಬರುವಂತೆ ವಿಂಗಡಿಸಿ 243ಕ್ಕೆ ಹೆಚ್ಚಿಸಿತ್ತು. ಇದನ್ನು ರಾಜ್ಯ ಸರ್ಕಾರ ಅಂಗೀಕಾರ ಮಾಡಿ ಕರಡು ಅಧಿಸೂಚನೆ ಹೊರಡಿಸಿತ್ತು. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ನೂತನ ವಾರ್ಡ್ ಕುರಿತು ಸಾರ್ವಜನಿಕ ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸುವಂತೆ ಕೋರಿತ್ತು.

ಅದರಂತೆ ಇದೀಗ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿ ನೂತನ 243ವಾರ್ಡ್ ಗಳನ್ನು ಅಧಿಕೃತಗೊಳಿಸಲಾಗಿದೆ. ಇದಕ್ಕೂ ಮುನ್ನ ಸಲ್ಲಿಕೆಯಾಗುವ ಆಕ್ಷೇಪಣೆಗಳಲ್ಲಿನ ಅಂಶಗಳ ಪರಿಶೀಲನೆಗಾಗಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಲಾಗಿತ್ತು.

New 243 Ward of BBMP authorized by Karnataka Govt

ಈ ಸಮಿತಿ ಸಲ್ಲಿಕೆಯಾದ ಆಕ್ಷೇಪಣೆ ಕುರಿತಂತೆ ಇದೇ ಜುಲೈ 11 ಮತ್ತು 12 ಸಭೆ ನಡೆಸಲಾಯಿತು. ಅಲ್ಲಿ ಸಾರ್ವಜನಿಕ ಆಕ್ಷೇಪಣೆ, ಸಲಹೆಗಳನ್ನು ಕೂಲಂಕುಷಾಗಿ ಪರಿಶೀಲಿಸಿದ ಅಧಿಕಾರಿಗಳು ಒಂದಷ್ಟು ಶಿಫಾರಸುಗಳನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದರು. ಆ ಶಿಫಾರಸುಗಳನ್ನು ಸರ್ಕಾರ ಒಪ್ಪಿದ್ದು, ಅದರಂತೆ ಕರಡು ಅಧಿಸೂಚನೆಗೆ ಕೆಲವು ಮಾರ್ಪಾಡು ಮಾಡಿ ಇದೀಗ ಅಧಿಕೃತಗೊಳಿಸಿ ಅಧಿಸೂಚನೆ ಹೊರಡಿಸಿದೆ ಎಂದು ತಿಳಿದು ಬಂದಿದೆ.

3000ಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ ; ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಕುರಿತು 3000ಕ್ಕೂ ಹೆಚ್ಚು ಸಾರ್ವಜನಿಕ ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ವಾರ್ಡ್ ಗಳ ಹೆಸರು ಬದಲಾಯಿಸುವಂತೆಯೇ ಅಧಿಕ ಆಕ್ಷೇಪಣೆಗಳು ಬಂದಿದ್ದವು.

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ 1500ಕ್ಕೂ ಅಧಿಕ ಆಕ್ಷೇಪಣೆ ಅರ್ಜಿಗಳು ಸಲ್ಲಿಕೆ ಆದರೆ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ479 ಅರ್ಜಿಗಳು ಹೆಸರು ಬದಲಾಯಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ ಎಂದು ಈ ಹಿಂದೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದರು. ಜತೆಗೆ ಆಕ್ಷೇಪಣೆ ಅರ್ಜಿಗಳಿಗೆ ಸಂಬಂಧಿಸಿದಂತೆ ಸರ್ಕಾರ ಮಟ್ಟದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದರು.

New 243 Ward of BBMP authorized by Karnataka Govt

ಅದರಂತೆ ಇದೀಗ ಆಕ್ಷೇಪಣೆ ಅರ್ಜಿಗಳನ್ನು ಸಮಿತಿ ಸಭೆಯಲ್ಲಿ ಚರ್ಚಿಸಿ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿತ್ತು. ಅದರಂತೆ ಸರ್ಕಾರ ಕೆಲವು ಬದಲಾವಣೆ ಮಾಡಿ ಬಿಬಿಎಂಪಿಯ ನೂತನ 243 ವಾರ್ಡ್ ಗಳಿಗೆ ಅಧಿಕೃತ ಮುದ್ರೆ ಒತ್ತಿದೆ.

Recommended Video

West Indies ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ | *Cricket | OneIndia Kannada

English summary
Karnataka government has put an official stamp on the 243 new wards which were recently re-divided by the Bruhat Bengaluru Mahanagara Palike
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X