BLR Airport: ಟ್ಯಾಕ್ಸಿ ಪಾರ್ಕಿಂಗ್‌ಗೆ ಹೊಸ ನಿಯಮ: ಯಥಾ ಸ್ಥಿತಿ ಕಾಯ್ದುಕೊಳ್ಳಲು ಸೂಚನೆ
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ನಿಗದಿತ ಸಮಯದ ಬಳಿಕವು ಟ್ಯಾಕ್ಸಿ, ಕ್ಯಾಬ್‌ಗಳಿಗೆ ನಿಲುಗಡೆ ಮಾಡಿದರೆ ಶುಲ್ಕ ವಿಧಿಸಲಾಗಿತ್ತು. ಬಳಿಕ ಅದರಲ್ಲಿ ಒಂದಷ್ಟು ಬದಲಾವಣೆ ಮಾಡಲಾಯಿತು. ಇದೀಗ ಸಂಸದ ಡಾ.ಕೆ.ಸುಧಾಕರ್ ಅವರು, ಏರ್‌ಪೋರ್ಟ್‌ನಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಸಂಸದ ಡಾ.ಕೆ.ಸುಧಾಕರ್ ಅವರು ಅಧಿಕಾರಿಗಳು ಹಾಗೂ ಚಾಲಕರ ಜೊತೆಗೆ ಮಹತ್ವದ ಸಭೆ ಮಾಡಿ, ಸಮಸ್ಯೆ ಬಗೆಹರಿಸುವ ಯತ್ನ ಮಾಡಿದರು.

ದೇವನಹಳ್ಳಿಯಲ್ಲಿನ ಏರ್‌ಪೋರ್ಟ್‌ಗೆ ನಿತ್ಯ ಬೆಂಗಳೂರು ನಗರದಿಂದ ಮಾತ್ರವಲ್ಲದೇ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಸುತ್ತಮುತ್ತಲಿನ ಊರುಗಳಿಂದ 18 ರಿಂದ 20 ಸಾವಿರ ಯುವಕರು ಖಾಸಗಿ ಟ್ಯಾಕ್ಸಿ ಚಾಲನೆ ಮಾಡುತ್ತಾರೆ. ಅವರನ್ನೆ ನಂಬಿಕೊಂಡು ಒಂದು ಲಕ್ಷ ಕುಟುಂಬಸ್ಥರಿದ್ದಾರೆ. ಒಂದೂವರೆ ಎರಡು ದಶಕಗಳಿಂದ ಏರ್‌ಫೋರ್ಟ್ ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿದ್ದಾರೆ.
ಪ್ರಯಾಣಿಕರಿಗೆ ಅನೇಕ ವರ್ಷಗಳ ಪರಿಚಯದೊಂದಿಗೆ ಸೇವೆ ನೀಡುವ ಟ್ಯಾಕ್ಸಿ ಚಾಲಕರು ಇದ್ದಾರೆ. ಡಿಸೆಂಬರ್ 8 ರಿಂದ 500 ಮೀಟರ್ ದೂರದಲ್ಲಿ ಚಾಲಕರಿಗೆ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ. ಇದರಿಂದ ಸಮಸ್ಯೆ ಉಂಟಾಗಿದೆ ಎಂದು ಚಾಲಕರು, ಮತ್ತವರ ಸಂಘಟನೆಗಳು ತಿಳಿಸಿವೆ. ಖಾಸಗಿ ಕಂಪನಿಗಳು 1,200-1,500 ರೂ. ದರ ನಿಗದಿ ಮಾಡಿದರೆ, ಈ ಚಾಲಕರು ಇನ್ನೂ ಕಡಿಮೆ ದರಕ್ಕೆ ಸೇವೆ ನೀಡುತ್ತಾರೆ. ಆದ್ದರಿಂದ ಇಲ್ಲಿ ಎಲ್ಲರಿಗೂ ಅವಕಾಶ ನೀಡಬೇಕಿದೆ.
ಇತ್ತ ಏರ್‌ಪೋರ್ಟ್ ಆವರಣದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಉಂಟಾಗುತ್ತಿದ್ದ ದಟ್ಟಣೆ ಕಡಿಮೆ ಮಾಡಲು ಈ ರೀತಿಯ ನಿರ್ಧಾರ ಕೈಗೊಂಡಿದ್ದೇವೆ ಎಂದಿದ್ದಾರೆ. ಬಳಕೆದಾರರ ಶುಲ್ಕ ಪಡೆದು ಸ್ಥಳ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ. ಅಗ್ರಿಗೇಟರ್‌ಗಳು ಎಲ್ಲ ಕಡೆ ಇದ್ದು, ಯಾರ ಸೇವೆ ಬೇಕೆಂದು ಗ್ರಾಹಕರು ತೀರ್ಮಾನ ಮಾಡುತ್ತಾರೆ ಎಂದು ಸಂಸದರು ಮನದಟ್ಟು ಮಾಡಿದರು.
ಚಾಲಕರೊಂದಿಗೆ ಸಮನ್ವಯದಿಂದ ವರ್ತಿಸಲು ಸೂಚನೆ
ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಂಸದರು. ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಇನ್ನೊಂದು ವಾರದಲ್ಲಿ ಎಲ್ಲ ಸಮಸ್ಯೆ ಬಗೆಹರಿಯಲಿದೆ. ಖಾಸಗಿ ಟ್ಯಾಕ್ಸಿ ಚಾಲಕರಲ್ಲಿ ಎಲ್ಲರೂ ಕನ್ನಡಿಗರು ಹಾಗೂ ಸ್ಥಳೀಯ ನಿವಾಸಿಗಳಾಗಿದ್ದಾರೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಾಲಕರೇ ಇಲ್ಲಿದ್ದಾರೆ. ಇವರಲ್ಲಿ ಬಹಳಷ್ಟು ಜನರು ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ್ದಾರೆ. ಆದ್ದರಿಂದ ಪ್ರಾಧಿಕಾರವು ಚಾಲಕರ ಜೊತೆ ಸಮನ್ವಯದಿಂದ ವರ್ತಿಸಬೇಕು. ಇದೇ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಅವರು ಕೂಡ ಸಭೆ ಮಾಡಲಿದ್ದಾರೆ. ಅವರೊಂದಿಗೆ ಖುದ್ದಾಗಿ ನಾನು ಮಾತನಾಡುವೆ ಎಂದು ತಿಳಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿಗೆ ತರಲಾಗಿರುವ ಹೊಸ ಪಾರ್ಕಿಂಗ್ ನಿಯಮದಿಂದ ತೊಂದರೆಗೊಳಗಾಗಿರುವ ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಗಳು, ಸಾರಿಗೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಟ್ಯಾಕ್ಸಿ ಚಾಲಕರ ಸಂಘದ ಪ್ರತಿನಿಧಿಗಳೊಂದಿಗೆ… pic.twitter.com/1wRslOTzbS
— Dr Sudhakar K (@DrSudhakar_) January 6, 2026
ದೇವರಾಜ ಅರಸುರಿಗೆ ಹಾಲಿ ಸಿಎಂ ಹೋಲಿಕೆ ಸರಿಯಲ್ಲ
ಸುದೀರ್ಘ ಅವಧಿಯಿಂದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವ ಸಿದ್ದರಾಮಯ್ಯನವರಿಗೆ ನಾನು ಅಭಿನಂದನೆ ತಿಳಿಸುತ್ತೇನೆ. ಆದರೆ ದೇವರಾಜ ಅರಸು ಅವರಿಗೆ ಹೋಲಿಕೆ ಮಾಡಿಕೊಳ್ಳುವುದು ಸರಿಯಲ್ಲ. 2013 ರಲ್ಲಿ ಸಿಎಂ ಸಿದ್ದರಾಮಯ್ಯನವರು ಉತ್ತಮ ಆಡಳಿತ ನೀಡಿದ್ದರು. ಆದರೆ 2023 ರಿಂದ ನೀಡುತ್ತಿರುವ ಆಡಳಿತ ಜನರಿಗೆ ಸಾಕಾಗಿದೆ. ಸಿದ್ದರಾಮಯ್ಯನವರಿಗೆ ಇನ್ನೂ ಸಿಎಂ ಆಗಿರಬೇಕೆಂಬ ಬಯಕೆ ಇದೆ. ಆದರೆ ಈ ಸರ್ಕಾರ ಹೋಗಲಿ ಎಂದೇ ಜನರು ಬಯಸುತ್ತಿದ್ದಾರೆ.
ದೇವರಾಜು ಅರಸು ತಂದ ಸುಧಾರಣೆಗಳನ್ನು ಬೇರೆ ಯಾರೂ ತಂದಿಲ್ಲ. ಅವರ ದಾರಿಯಲ್ಲಿ ಸಿದ್ದರಾಮಯ್ಯನವರು ನಡೆದಿದ್ದರೆ ಚೆನ್ನಾಗಿರುತ್ತಿತ್ತು. ದೇವರಾಜು ಅರಸು ಅವರು ಜನರ ಬದುಕಿಗೆ ಊಟ ನೀಡಿದ್ದರು. ಒಂದು ಹಬ್ಬಕ್ಕೆ ನೀಡುವ ಊಟಕ್ಕೂ ಜೀವನಕ್ಕೆ ನೀಡುವ ಊಟಕ್ಕೂ ವ್ಯತ್ಯಾಸವಿದೆ ಎಂದು ಮಾರ್ಮಿಕವಾಗಿ ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications