• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಧಾನಸೌಧದಲ್ಲಿ 13 ಶಾಸಕರಿಂದ ಪ್ರಮಾಣವಚನ

|

ಬೆಂಗಳೂರು, ಡಿಸೆಂಬರ್ 22: ವಿಧಾನಸೌಧದಲ್ಲಿ 13 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೆಆರ್ ಪುರಂನ ಭೈರತಿ ಬಸವರಾಜ್, ಮಹಾಲಕ್ಷ್ಮೀ ಲೇಔಟ್‌ನ ಗೋಪಾಲಯ್ಯ, ಕೆಆರ್ ಪೇಟೆಯ ನಾರಾಯಣಗೌಡ, ಚಿಕ್ಕಬಳ್ಳಾಪುರ ಸುಧಾಕರ್ , ಹಿರೆಕೇರೂರು ಕ್ಷೇತ್ರದ ಬಿಸಿ ಪಾಟೀಲ್,ಕಾಗವಾಡ ಕ್ಷೇತ್ರದ ಶ್ರೀಮಂತ್ ಪಾಟೀಲ್, ಯಶವಂತಪುರದ ಎಸ್‌ಟಿ ಸೋಮಶೇಖರ್, ರಾಣೆಬೆನ್ನೂರು ಕ್ಷೇತ್ರದ ಅರುಣ್ ಕುಮಾರ್ , ಅಥಣಿಯ ಮಹೇಶ್ ಕುಮಟಳ್ಳಿ, ಹೊಸಕೋಟೆಯ ಶರತ್ ಬಚ್ಚೇಗೌಡ, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ವಿಜಯನಗರದ ಆನಂದ ಸಿಂಗ್, ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ, ಹುಣಸೂರಿನ ಮಂಜುನಾಥ್ ಇಂದು ಪ್ರಮಾಣವಚನ ಸ್ವೀಕರಿಸಿದರು.

ಕಾಂಗ್ರೆಸ್, ಜೆಡಿಎಸ್‌ ಶಾಸಕರಾಗಿ ಆಯ್ಕೆಯಾಗಿ ಒಂದು ವರ್ಷದಲ್ಲೇ ರಾಜೀನಾಮೆ ಕೊಟ್ಟವರ ಪೈಕಿ 11 ಮಂದಿ ಮರು ಆಯ್ಕೆಯಾಗಿದ್ದಾರೆ. ಒಂದೂವರೆ ವರ್ಷದಲ್ಲೇ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಅವರು ಪ್ರಮಾಣವಚನ ಬೋಧಿಸಿದರು. ಬಿಜೆಪಿ 12, ಕಾಂಗ್ರೆಸ್‌ನ 2 ಹಾಗೂ ಒಬ್ಬರು ಪಕ್ಷೇತರ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದ ನಂತರ ವಿಧಾನಸಭಾಧ್ಯಕ್ಷ ಕಾಗೇರಿ ಸಂವಿಧಾನ ಕುರಿತು ಪುಸ್ತಕ ಮತ್ತು ಹೂಗುಚ್ಚ ನೀಡಿ ಅಭಿನಂದಿಸಿದರು.

English summary
Thirteen New BJP MLAs have taken oath in the Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X