ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್‌ಗಳ ಜಪ್ತಿಗೆ ಆದೇಶ ನೀಡಿದ ರೆಡ್ಡಿ

ಬೆಂಗಳೂರು, ಅಕ್ಟೋಬರ್ 31 : ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್‌ಗಳ ವಿರುದ್ಧ ಸಾರಿಗೆ ಸಂಸ್ಥೆ ಸಮರ ಸಾರಿದೆ. ಬಿಎಂಟಿಸಿ ಬಸ್ಸುಗಳು ಸಂಚರಿಸುವ ಮಾರ್ಗಗಳಲ್ಲಿ ಕಾನೂನು ಬಾಹಿರವಾಗಿ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳನ್ನು ಜಪ್ತಿ ಮಾಡುವಂತೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ನೀಡಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, 'ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್‌ಗಳಿಂದಾಗಿ ಬಿಎಂಟಿಸಿಗೆ ನಷ್ಟವಾಗುತ್ತಿದೆ. ಬಸ್ಸಗಳು ಸಂಚಾರ ನಡೆಸುವ ಮಾರ್ಗದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವ ಇಂತಹ ವಾಹನಗಳನ್ನು ಜಪ್ತಿ ಮಾಡಲು ಸೂಚನೆ ನೀಡಲಾಗಿದೆ' ಎಂದರು. [ಗ್ಯಾಂಗ್ ರೇಪ್ ಗೆ ಬಳಸಿದ್ದ ಟಿಟಿ ಪೊಲೀಸರ ವಶಕ್ಕೆ]

ramalinga reddy

'ಬಿಎಂಟಿಸಿ ಬಸ್ಸುಗಳು ಸಂಚಾರ ನಡೆಸುವ ಮಾರ್ಗಗಳಲ್ಲಿ ಟಿಟಿ ವಾಹನ ಮತ್ತು ಮ್ಯಾಕ್ಸಿ ಕ್ಯಾಬ್‌ಗಳು ಪ್ರಯಾಣಿಕರನ್ನು ಕರೆದೊಯ್ಯಬಾರದು. ಇದಕ್ಕೆ ನಿರ್ಬಂಧ ಹೇರಲು ಹೊಸ ಮಾರ್ಗಸೂಚಿಯನ್ನು ರಚಿಸಲಾಗುತ್ತದೆ' ಎಂದು ಸಾರಿಗೆ ಸಚಿವರು ತಿಳಿಸಿದರು. [ಬೆಂಗಳೂರಿನ ರಸ್ತೆಗಳು ರಾತ್ರಿ ಸುರಕ್ಷಿತವೇ?]

'ಖಾಸಗಿ ಕಂಪನಿಗಳ ಸಿಬ್ಬಂದಿ ಪ್ರಯಾಣಿಸುವ ಮ್ಯಾಕ್ಸಿಕ್ಯಾಬ್‌ಗಳಿಗೆ ತೊಂದರೆ ಉಂಟು ಮಾಡುವುದಿಲ್ಲ. ಆನ್‌ಲೈನ್ ಮೂಲಕ ಬುಕ್ ಮಾಡುವ ಪಿಕ್ ಅಪ್ ವಾಹನಗಳಿಗೆ ಯಾವುದೇ ನಿರ್ಬಂಧವಿಲ್ಲ. ಹಾಗೆಯೇ ಸಂಚರಿಸುವ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ' ಎಂದರು.

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟಿಟಿ ವಾಹನದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ನಂತರದ ದಿನಗಳಲ್ಲಿ ನಗರದಲ್ಲಿ ಟಿಟಿ ಮತ್ತು ಮ್ಯಾಕ್ಸಿ ಕ್ಯಾಬ್ ವಾಹನಗಳಿಗೆ ಕಡಿವಾಣ ಹಾಕುವ ಕುರಿತು ಚರ್ಚೆ ನಡೆದಿತ್ತು. ಇದನ್ನು ಈಗ ಅಧಿಕೃತವಾಗಿ ಜಾರಿಗೆ ತರಲು ಇಲಾಖೆ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+