• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೊಸ ನಮ್ಮ ಮೆಟ್ರೋ ಮಾರ್ಗದಿಂದ ನಿತ್ಯ 75 ಸಾವಿರ ಮಂದಿಗೆ ಉಪಯೋಗ

|

ಬೆಂಗಳೂರು, ಜನವರಿ 13: ಹೊಸ ನಮ್ಮ ಮೆಟ್ರೋ ಮಾರ್ಗದಿಂದ 75 ಸಾವಿರ ಮಂದಿಗೆ ಅನುಕೂಲವಾಗಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಕೆಲ ದಿನಗಳ ಹಿಂದೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ರೈಲು ಸಂಚಾರ ಸೇವೆ ಆರಂಭಿಸಿ ಕೇಂದ್ರ ಸರ್ಕಾರ ಜನತೆಗೆ ಸಹಾಯ ಮಾಡಿತ್ತು. ಕಡಿಮೆ ದರದಲ್ಲಿ, ಸುಲಭವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪುವುದು ಸಾಕಾರವಾಗಿದೆ.

ಸಂಕ್ರಾಂತಿ ಹಬ್ಬದಂದು ಯಲಚೇನಹಳ್ಳಿ ಮೆಟ್ರೋಗೆ ಹಸಿರು ನಿಶಾನೆ

ಈ ಮೆಟ್ರೋ ಮಾರ್ಗದಿಂದಾಗಿ ನಿತ್ಯ 75 ಸಾವಿರಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ಮಾರ್ಗದಲ್ಲಿ ಒಟ್ಟು ಐದು ಮಾರ್ಗಗಳು ಬರಲಿವೆ. ಇದೀಗ ನಗರದ ಸಂಚಾರಿಗಳಿಗೆ ಮತ್ತೊಂದು ಅಂತಹದ್ದೇ ರೀತಿಯ ಸೇವೆ ನೀಡುತ್ತಿರುವ ಸರ್ಕಾರದಿಂದ ಯೆಲಚೇನಹಳ್ಳಿಯಿಂದ ಸಿಲ್ಕ್ ಇನ್ಸ್ ಟಿಟ್ಯೂಟ್ ಗೆ ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೊ ಸಂಚಾರ ಆರಂಭವಾಗಲಿದೆ.

ಈ ಮಾರ್ಗದಲ್ಲಿ ನಮ್ಮ ಮೆಟ್ರೊ ಸಂಚಾರಕ್ಕೆ ನಾಳೆ ಸಂಕ್ರಾಂತಿ ದಿನ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್ ಸಿಂಗ್ ಪುರಿ ಈ ಮಾರ್ಗವನ್ನು ಉದ್ಘಾಟನೆ ಮಾಡಲಿದ್ದಾರೆ.

   Yediyurappaಗೆ Vishwanth class ತಗೊಂಡ ಪರಿ ಇದು!! | Oneindia Kannada

   6.29 ಕಿಲೋ ಮೀಟರ್ ಉದ್ದದ ಮೆಟ್ರೊ ರೈಲು ಸಂಚಾರ ಮಾರ್ಗ ಇದಾಗಿದ್ದು, ಕೋಣನಕುಂಟೆ ಕ್ರಾಸ್, ದೊಡಕಲ್ಲಸಂದ್ರ, ವಜ್ರಹಳ್ಳಿ, ತಲಘಟ್ಟಪುರ ಮತ್ತು ಅಂಜನಾಪುರ ಸೇರಿ ಒಟ್ಟು 5 ಎಲಿವೇಟೆಡ್ ಮೆಟ್ರೋ ನಿಲ್ದಾಣ ಹೊಂದಿದೆ. ಜನವರಿ 15ರಿಂದ ರೈಲು ಸಂಚಾರ ಅಧಿಕೃತವಾಗಿ ಆರಂಭಗೊಳ್ಳಲಿದೆ.

   English summary
   Bengaluru Metro Rail Corporation LTD, which is gearing up to open the first strech of 72 km Phase 2, corridor on January 14.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X