ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವರ್ಗಾವಣೆ : ಸಿಎಟಿಗೆ ಅರ್ಜಿ ಸಲ್ಲಿಸಿದ ಅಲೋಕ್ ಕುಮಾರ್

|
Google Oneindia Kannada News

ಬೆಂಗಳೂರು, ಆಗಸ್ಟ್ 05 : ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ತಮ್ಮ ವರ್ಗಾವಣೆಯನ್ನು ಸಿಎಟಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಅವರನ್ನು ಸರ್ಕಾರ ಶುಕ್ರವಾರ ವರ್ಗಾವಣೆ ಮಾಡಿತ್ತು.

ಸೋಮವಾರ ಅಲೋಕ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಗೆ (ಸಿಎಟಿ)ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಆ.14ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ಅಲೋಕ್ ಕುಮಾರ್ ಗೆ ಚಾಲೆಂಜ್ ಹಾಕಿದ್ದ ರೇಣುಕಾಚಾರ್ಯಅಲೋಕ್ ಕುಮಾರ್ ಗೆ ಚಾಲೆಂಜ್ ಹಾಕಿದ್ದ ರೇಣುಕಾಚಾರ್ಯ

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ವರ್ಗಾವಣೆ ಮಾಡಿದ್ದ ಕರ್ನಾಟಕ ಸರ್ಕಾರ, ಭಾಸ್ಕರರಾವ್‌ರನ್ನು ಆಯುಕ್ತರಾಗಿ ನೇಮಿಸಿತ್ತು. ಅವರು ಶುಕ್ರವಾರ ಸಂಜೆಯೇ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ರದ್ದುಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ರದ್ದು

New Police Commissioner for Bengaluru Alok Kumar Moves CAT

ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಎಟಿ ಭಾಸ್ಕರ್ ರಾವ್ ನೇಮಕಾತಿ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ. ರಾಜ್ಯ, ಕೇಂದ್ರ ಸರ್ಕಾರ, ನೂತನ ಆಯುಕ್ತ ಭಾಸ್ಕರ್ ರಾವ್‌ಗೆ ನೋಟಿಸ್ ನೀಡಲಾಗಿದ್ದು, ವಿಚಾರಣೆಯನ್ನು ಮುಂದೂಡಿದೆ.

ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಗಾವಣೆಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಗಾವಣೆ

ಅಲೋಕ್ ಕುಮಾರ್‌ರನ್ನು ಬೆಂಗಳೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಿ ಸುಮಾರು 1 ತಿಂಗಳು ಕಳೆದಿತ್ತು. ಆಗ ರಾಜ್ಯದಲ್ಲಿ ಸರ್ಕಾರ ಬದಲಾವಣೆ ಆಯಿತು. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಅವರನ್ನು ವರ್ಗಾವಣೆ ಮಾಡಿ ಭಾಸ್ಕರರಾವ್ ನೇಮಕ ಮಾಡಲಾಯಿತು.

English summary
Bhaskar Rao took charge as new police commissioner of Bengaluru. Alok Kumar moved the Central administrative tribunal (CAT) and questioned his transfer by Karnataka government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X