ಬೆಂಗಳೂರು ಖಾಸಗಿ ಶಾಲೆಯಿಂದ ಪೋಷಕರಿಗೆ ಹೊಸ ಶಾಕ್!
ಬೆಂಗಳೂರಿನ ಖಾಸಗಿ ಶಾಲೆಗಳು ಪೋಷಕರಿಗೆ ಹೊಸ ಶಾಕ್‌ವೊಂದನ್ನು ಕೊಟ್ಟಿದೆ. ಖಾಸಗಿ ಶಾಲೆಗಳು ಶಾಲಾ ಶುಲ್ಕದ ಬಿಸಿ ಮುಟ್ಟಿಸಿವೆ. ಬೆಂಗಳೂರಿನಲ್ಲಿ ಮಕ್ಕಳ ಸ್ಕೂಲ್ ಫೀಸ್‌ನ ಬಗ್ಗೆ ಪದೇ ಪದೇ ಚರ್ಚೆಯಾಗುವುದು ಇದೆ. ಇದೀಗ ಇನ್ನೇನು 2025- 26ರ ಶೈಕ್ಷಣಿಕ ಸಾಲಿನ ಪ್ರವೇಶ ಹಾಗೂ ಶಾಲಾ ಶುಲ್ಕದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಗುತ್ತಿದೆ. ಈಗಾಗಲೇ ಬೆಂಗಳೂರಿನ ಕೆಲವು ಖಾಸಗಿ ಶಾಲೆಗಳು ಶುಲ್ಕವನ್ನು ಸಹ ಕಟ್ಟಿಸಿಕೊಳ್ಳುವುದಕ್ಕೆ ಶುರು ಮಾಡಿವೆ. ಈ ನಡುವೆ ಮೂರನೇ ತರಗತಿಯ ವಿದ್ಯಾರ್ಥಿಗೆ ಲಕ್ಷ.. ಲಕ್ಷ ಫೀಸ್ ನಿಗದಿ ಮಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಶಾಲಾ ಶುಲ್ಕದ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ಪೋಷಕರು ಕಂಗಾಲಾಗಿದ್ದಾರೆ.
ಬೆಂಗಳೂರಿನಲ್ಲಿ ಶಾಲಾ ಶುಲ್ಕದ ಬಗ್ಗೆ ಚರ್ಚೆಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೆಂಗಳೂರಿನಲ್ಲಿ ದುಬಾರಿ ಶಾಲಾ ಶುಲ್ಕ ನಿಗದಿಯಾಗಿರುವ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಆದರೆ ಖಾಸಾಗಿ ಶಾಲೆಗಳ ಶಾಲಾ ಶುಲ್ಕ ಮಾಫಿಯಾವನ್ನು ತಡೆಯುವಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದು ಬೆಂಗಳೂರಿನಲ್ಲಿ ಶಾಲಾ ಶುಲ್ಕ ಹೆಚ್ಚಳವಾಗುವುದಕ್ಕೆ ಕಾರಣವಾಗಿದೆ.

ಇದೀಗ ಸೋಷಿಯಲ್ ಮೀಡಿಯಾದಲ್ಲಿ ಜನ ಈ ಹೊಸ ಶಾಲಾ ಶುಲ್ಕವನ್ನು ನೋಡಿ ಶಾಕ್ ಆಗಿದ್ದಾರೆ. ಇನ್ನೂ ಕೆಲವರು ಮಕ್ಕಳನ್ನು ಈ ರೀತಿ ಶುಲ್ಕ ವಿಧಿಸುವ ಶಾಲೆಗಳಿಗೆ ಯಾಕೆ ಕಳುಹಿಸಬೇಕು ಅಂತಲೂ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳ ವಿದ್ಯಾಭ್ಯಾಸಕ್ಕೆ ಲಕ್ಷ ಲಕ್ಷ ಫೀಸ್ ಕಟ್ಟಿಸಿಕೊಳ್ಳುತ್ತಿರುವ ಬಗ್ಗೆಯೂ ಈ ಹಿಂದಿನಿಂದಲೂ ಚರ್ಚೆಗಳು ನಡೆದಿವೆ. ಇನ್ನು ಇದೀಗ ಖಾಸಗಿ ಶಾಲೆಯೊಂದರ ಸ್ಕೂಲ್ ಫೀಸ್ ಬಗ್ಗೆ ಭಾರೀ ಚರ್ಚೆ ನಡೆದಿದೆ.
3ನೇ ತರಗತಿ ವಿದ್ಯಾರ್ಥಿಗೆ 2.1 ಲಕ್ಷ ಸ್ಕೂಲ್ ಫೀಸ್!
ಬೆಂಗಳೂರಿನ ಖಾಸಗಿ ಶಾಲೆಯೊಂದರ 3ನೇ ತರಗತಿಯ ವಿದ್ಯಾರ್ಥಿಗೆ 2.1 ಲಕ್ಷ ಶಾಲಾ ಶುಲ್ಕ ವಿಧಿಸಿರುವುದು ಇದೀಗ ಭಾರೀ ಚರ್ಚಗೆ ಕಾರಣವಾಗಿದೆ. ಯಾವ ಖಾಸಗಿ ಶಾಲೆಯಿಂದ ಈ ರೀತಿ ಶುಲ್ಕ ವಿಧಿಸಲಾಗಿದೆ ಎನ್ನುವ ವಿವರ ಅದರಲ್ಲಿ ಇಲ್ಲ. ಆದರೆ, ಇದನ್ನು ವಾಯ್ಸ್ ಆಫ್ ಪೇರೆಂಟ್ಸ್ ಅಸೋಸಿಯೇಷನ್ ಎನ್ನುವ ಟ್ವಿಟ್ಟರ್ ಖಾತೆಯಿಂದ ಹಂಚಿಕೊಳ್ಳಲಾಗಿದೆ. ಶಿಕ್ಷಣ ಹಾಗೂ ಶಾಲೆಯ ಹೆಸರಿನಲ್ಲಿ ನಡೆಯುವಂತಹ ವ್ಯಾಪಾರಕ್ಕಿಂತಲೂ ಮತ್ತೊಂದು ವ್ಯಾಪಾರ ಭಾರತದಲ್ಲಿ ಇಲ್ಲ ಎಂದು ಹೇಳಿದೆ.

ದೇಶದಲ್ಲಿ ಎಷ್ಟೇ ಹಣದುಬ್ಬರ ಇದ್ದರೂ ಇಷ್ಟೊಂದು ಶಾಲಾ ಶುಲ್ಕವನ್ನು ವಿಧಿಸುವುದನ್ನು ಒಪ್ಪಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಸರ್ಕಾರಗಳು ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ನಿಯಂತ್ರಿಸಬಹುದು. ಆದರೆ ಶಾಲಾ ಶುಲ್ಕದ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳುವ ಧೈರ್ಯವನ್ನು ಮಾಡುವುದಿಲ್ಲ. ಈ ಖಾಸಗಿ ಶಾಲೆಗಳು ಅಷ್ಟರ ಮಟ್ಟಿಗಿನ ಭಯವನ್ನು ಸೃಷ್ಟಿ ಮಾಡಿವೆ. ಶಾಲೆಗಳ ಹೆಸರಿನಲ್ಲಿ ನಡೆಯುತ್ತಿರುವ ವ್ಯಾಪಾರದಂತಹ ವ್ಯಾಪಾರ ಮತ್ತೊಂದು ಇಲ್ಲವೇ ಇಲ್ಲ ಎಂದು ವಾಯ್ಸ್ ಆಫ್ ಪೇರೆಂಟ್ಸ್ ಅಸೋಸಿಯೇಷನ್ ಟ್ವೀಟ್ ಮಾಡಿದೆ. ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.
5 ಸ್ಟಾರ್ ಸ್ಕೂಲ್: ಇನ್ನು ಈ ಶಾಲಾ ಶುಲ್ಕದ ವೈೆರಲ್ ಟ್ವೀಟ್‌ಗೆ ರಿಯಾಕ್ಟ್ ಮಾಡಿರುವ ಹಲವರು ಇದು 5 ಸ್ಟಾರ್ ಸ್ಕೂಲ್ ಅಂತ ಹೇಳಿದ್ದಾರೆ. ಈ ರೀತಿಯ ದುಬಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕಿಂತ ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಿ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications