ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು-ಹುಬ್ಬಳ್ಳಿ ನಡುವೆ ಹೊಸ ರೈಲು; 5 ಗಂಟೆಯಲ್ಲಿ ಪ್ರಯಾಣ

|
Google Oneindia Kannada News

ಬೆಂಗಳೂರು, ನವೆಂಬರ್ 04 : ಬೆಂಗಳೂರು- ಹುಬ್ಬಳ್ಳಿ ನಡುವೆ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಸುಮಾರು 400 ಕಿ. ಮೀ. ದೂರವನ್ನು ರೈಲು 5 ಗಂಟೆಗಳಲ್ಲಿ ಕ್ರಮಿಸಲಿದೆ.

ಬೆಳಗಾವಿಯ ಬಿಜೆಪಿ ಸಂಸದ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಈ ಕುರಿತು ಮಾಹಿತಿ ನೀಡಿದರು. "ಪ್ರಯಾಣಿಕರ ಬಹುಕಾಲದ ಬೇಡಿಕೆಯಂತೆ ಬೆಂಗಳೂರು-ಹುಬ್ಬಳ್ಳಿ ನಡುವೆ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಓಡಿಸುವ ಕುರಿತು ಚಿಂತನೆ ನಡೆದಿದೆ" ಎಂದರು.

ವಿಜಯಪುರ-ಬೆಂಗಳೂರು ರೈಲಿಗೆ ಚಾಲನೆ, ನಿಲ್ದಾಣಗಳು ವಿಜಯಪುರ-ಬೆಂಗಳೂರು ರೈಲಿಗೆ ಚಾಲನೆ, ನಿಲ್ದಾಣಗಳು

"ಬೆಂಗಳೂರು-ಹುಬ್ಬಳ್ಳಿ ನಡುವೆ ಗಂಟೆಗೆ 130 ಕಿ. ಮೀ. ವೇಗದಲ್ಲಿ ಸಂಚಾರ ನಡೆಸುವ ರೈಲನ್ನು ಆರಂಭಿಸಲಾಗುತ್ತದೆ. ಬೆಳಗಾವಿ-ಪುಣೆ ಮಾರ್ಗದಲ್ಲಿಯೂ ಇಂತಹ ರೈಲನ್ನು ಪರಿಚಯಿಸಲಾಗುತ್ತದೆ" ಎಂದು ಸಚಿವರು ಹೇಳಿದರು.

ವಿಜಯಪುರ-ಮಂಗಳೂರು ನಡುವೆ ಹೊಸ ರೈಲು ಸೇವೆ ವಿಜಯಪುರ-ಮಂಗಳೂರು ನಡುವೆ ಹೊಸ ರೈಲು ಸೇವೆ

New Train Between Bengaluru And Hubballi

ಬೆಂಗಳೂರು-ಹುಬ್ಬಳ್ಳಿ ನಡುವಿನ ಪ್ರಯಾಣದ ಅವಧಿಯನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ರೈಲ್ವೆ ಪ್ರಯಾಣಿಕರು ಬಹಳ ವರ್ಷಗಳಿಂದ ಬೇಡಿಕೆ ಇಡುತ್ತಿದ್ದಾರೆ. ರೈಲ್ವೆ ಇಲಾಖೆ ಈ ಕುರಿತು ಈಗ ಚಿಂತನೆ ಆರಂಭಿಸಿದೆ.

ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗಕ್ಕಾಗಿ ಕೇಂದ್ರ ಸಚಿವರಿಗೆ ಪತ್ರಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗಕ್ಕಾಗಿ ಕೇಂದ್ರ ಸಚಿವರಿಗೆ ಪತ್ರ

ರೈಲು ಸಂಚಾರ ಯಾವಾಗ ಆರಂಭವಾಗಲಿದೆ? ಎಂಬ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಸುರೇಶ್ ಅಂಗಡಿ ರೈಲ್ವೆ ಸಚಿವರಾದ ಬಳಿಕ ರಾಜ್ಯದ ರೈಲ್ವೆ ಯೋಜನೆಗಳು ವೇಗ ಪಡೆದುಕೊಳ್ಳುತ್ತಿದೆ. ಶೀಘ್ರದಲ್ಲಿಯೇ ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರವೂ ಆರಂಭವಾಗುವ ನಿರೀಕ್ಷೆ ಇದೆ.

ಬೆಂಗಳೂರು-ಹುಬ್ಬಳ್ಳಿ ನಡುವೆ ಸೂಪರ್ ಫಾಸ್ಟ್ ರೈಲು ಆರಂಭವಾದರೆ ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಯ ಜನರಿಗೂ ಅನುಕೂಲವಾಗಲಿದೆ.

English summary
South Western railway will introduce new train between Bengaluru-Hubballi which will run in 5 hours. Bengaluru-Hubballi distance around 400 km.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X