Vande Bharat Express: ಬೆಂಗಳೂರು - ಉತ್ತರ ಕರ್ನಾಟಕದ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು: ವಿ. ಸೋಮಣ್ಣ
Vande Bharat Express: ಬೆಂಗಳೂರು ಹಾಗೂ ಕರ್ನಾಟಕದ ಜನರಿಗೆ ಕೇಂದ್ರ ಸರ್ಕಾರವು ಮತ್ತೊಂದು ಭರ್ಜರಿ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ನಡುವೆ ರೈಲಿನಲ್ಲಿ ಇತ್ತೀಚಿನ ದಿನಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಭಾಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಕಲ್ಪಿಸಬೇಕು ಎನ್ನುವ ಬೇಡಿಕೆ ಇತ್ತು. ಇದೀಗ ಈ ಬೇಡಿಕೆಗೆ ಕೇಂದ್ರ ಸರ್ಕಾರವು ಸ್ಪಂದಿಸಿದ್ದು. ಕನ್ನಡಿಗರಿಗೆ ಬಂಪರ್ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ರೈಲು ಸಂಚಾರದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗುತ್ತಿರುವ ಬಗ್ಗೆ ಪದೇ ಪದೇ ವರದಿಯಾಗುತ್ತಿದೆ. ಬೆಂಗಳೂರು - ಉತ್ತರ ಕರ್ನಾಟಕದ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಭಾಗದಲ್ಲಿ ಹೊಸ ರೈಲು ಸೇವೆ ನೀಡಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇದೆ. ಇದೀಗ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಿಂದ ಈ ಬೇಡಿಕೆ ಈಡೇರುತ್ತಿದೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಬೆಳಗಾವಿ ನಡುವೆ ಹೊಸ ವಂದೇ ಭಾರತ್ ರೈಲಿಗೆ ಸಂಬಂಧಿಸಿದಂತೆ ಭರ್ಜರಿ ಅಪ್ಡೇಟ್‌ವೊಂದನ್ನು ನೀಡಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಮತ್ತೊಂದು ರೈಲು ಸೇವೆ ಸಿಕ್ಕಂತಾಗಿದೆ. ವಂದೇ ಭಾರತ್ ರೈಲಿಗೆ ಕರ್ನಾಟಕದಲ್ಲಿ ಹೆಚ್ಚಿನ ಬೇಡಿಕೆ ಇದೆ. ಇದೀಗ ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕೇಂದ್ರ ಸಚಿವ ವಿ. ಸೋಮಣ್ಣ ಅವರು, ಬೆಂಗಳೂರು - ಉತ್ತರ ಕರ್ನಾಟಕದ ಮಾರ್ಗವಾಗಿ ಹೊಸ ವಂದೇ ಭಾರತ್ ರೈಲು ಸೇವೆಯನ್ನು ಪರಿಚಯಿಸಲಾಗುತ್ತಿದೆ. ಇದರಿಂದಾಗಿ ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಬೇಕೆಂದು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಇದೀಗ ಈ ಮನವಿಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಈ ಭಾಗದ ಜನದಟ್ಟಣೆಯನ್ನು ಅರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಮುಂದುವರಿದು ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ಹಾಗೂ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ರೈಲಿನ ನಿಖರ ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ಘೋಷಿಸಲಾಗುವುದು. ಈ ರೈಲು ಸೇವೆಯಿಂದಾಗಿ ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.












Click it and Unblock the Notifications