Vande Bharat Express: ಬೆಂಗಳೂರು - ಮಂಗಳೂರು ನಗರದ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು: ವಿ. ಸೋಮಣ್ಣ
ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಚಾರದಲ್ಲಿ ಬೆಂಗಳೂರಿಗೆ ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಬೆಂಗಳೂರು ಹಾಗೂ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿಸ್ತರಣೆ ಮಾಡಬೇಕು ಎನ್ನುವ ಮನವಿ ಇದೆ. ಇದೀಗ ಬೆಂಗಳೂರಿಗೆ ಹಾಗೂ ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಕೊಡುವ ಬಗ್ಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಗುಡ್‌ನ್ಯೂಸ್ ಕೊಟ್ಟಿದೆ.
ಬೆಂಗಳೂರಿನಿಂದ ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಸಂಪರ್ಕ ಹೆಚ್ಚಿಸಬೇಕು ಎನ್ನುವ ಬೇಡಿಕೆ ಜನರಿಂದ ಇದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ಗಳನ್ನು ನೀಡುತ್ತಿದೆ. ಇದೀಗ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಅಪ್ಡೇಟ್ಸ್ ಕೊಡಲಾಗಿದೆ.

ಬೆಂಗಳೂರು - ಮಂಗಳೂರು ವಂದೇ ಭಾರತ್ ಗುಡ್‌ನ್ಯೂಸ್
ಬೆಂಗಳೂರು ಹಾಗೂ ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಂಬಂಧಿಸಿದಂತೆ ಸಚಿವ ವಿ. ಸೋಮಣ್ಣ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಉದ್ಯಮಿ ಮೋಹನ್‌ದಾಸ್ ಪೈ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಮಾಡಿರುವ ಟ್ವೀಟ್‌ಗೆ ವಿ ಸೋಮಣ್ಣ ಅವರು ರಿಪ್ಲೈ ಕೊಟ್ಟಿದ್ದಾರೆ. ಉದ್ಯಮಿ ಮೋಹನ್‌ದಾಸ್ ಪೈ ಅವರು ಹೇಳಿದ್ದೇನು, ವಿ. ಸೋಮಣ್ಣ ಪ್ರತಿಕ್ರಿಯೆ ಏನು ಎನ್ನುವುದನ್ನು ನೋಡೋಣ.
ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ವಿ. ಸೋಮಣ್ಣ ಅವರು, ರೈಲ್ವೆ ಮೂಲಸೌಕರ್ಯವನ್ನು ವೃದ್ಧಿಗೊಳಿಸುವ ಮತ್ತು ಪ್ರಯಾಣಿಕರ ಅನುಕೂಲತೆಯನ್ನು ಹೆಚ್ಚಿಸುವ ಭಾಗವಾಗಿ, ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿಮೀ ಘಾಟ್ ವಿಭಾಗದ ರೈಲ್ವೆ ಮಾರ್ಗವನ್ನು ಯಶಸ್ವಿಯಾಗಿ ವಿದ್ಯುದೀಕರಣಗೊಳಿಸಲಾಗಿದೆ.
ಅತ್ಯಂತ ಸವಾಲಿನ ಭೂಪ್ರದೇಶದಲ್ಲಿ ಸಾಧಿಸಿದ ಈ ಮೈಲಿಗಲ್ಲು ಆಧುನಿಕ ಮತ್ತು ಶುದ್ಧ-ಶಕ್ತಿ ಮೂಲಸೌಕರ್ಯ ನಿರ್ಮಾಣದೆಡೆಗಿನ ಭಾರತೀಯ ರೈಲ್ವೆಯ ದೃಢ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಇದೀಗ, ಈ ರೈಲ್ವೆ ಮಾರ್ಗವು ವಿದ್ಯುತ್ ಚಾಲನೆಗೆ ಸಂಪೂರ್ಣವಾಗಿ ಸಿದ್ದಗೊಂಡಿದ್ದು, ಪರಿಣಾಮಕಾರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸುತ್ತದೆ ಮತ್ತು ಈ ಭಾಗದಲ್ಲಿ ಮತ್ತಷ್ಟು ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉದ್ಯಮಿ ಮೋಹನ್‌ದಾಸ್ ಪೈ ಅವರು, ಧನ್ಯವಾದಗಳು ಈಗ ಬೆಂಗಳೂರಿನಿಂದ ಮಂಗಳೂರಿಗೆ 3ರಿಂದ 4 ಗಂಟೆಗಳಲ್ಲಿ ಹೋಗುವುದಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪರಿಚಯಿಸಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ವಿ. ಸೋಮಣ್ಣ ಅವರು, ಧನ್ಯವಾದಗಳು. ಇದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರ ವಿಕಸಿತ ಭಾರತದ ಕನಸಿನ ಯಶಸ್ಸು ಹಾಗೂ ರೈಲ್ವೇ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಕಾರ್ಯಕ್ಷಮತೆಗೆ ಸಾಕ್ಷಿ. ಹಾಗೆಯೇ, ಮಂಗಳೂರು ಭಾಗದ ಜನರ ಬಹುಬೇಡಿಕೆಯಾಗಿರುವ ವಂದೇ ಭಾರತ್ ರೈಲು ಸಂಚಾರಿಸುವ ಕಾಲವೂ ಸನ್ನಿಹಿತವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರು - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕನಸು ನನಸಾಗಲಿದೆ ಎಂದು ಹೇಳಿದ್ದಾರೆ.
ಧನ್ಯವಾದಗಳು. ಇದು ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಜೀ ಅವರ ವಿಕಸಿತ ಭಾರತದ ಕನಸಿನ ಯಶಸ್ಸು ಹಾಗೂ ರೈಲ್ವೇ ಖಾತೆ ಸಚಿವರಾದ ಶ್ರೀ @AshwiniVaishnaw ಅವರ ಕಾರ್ಯಕ್ಷಮತೆಗೆ ಸಾಕ್ಷಿ.
— V. Somanna (@VSOMANNA_BJP) December 29, 2025
ಹಾಗೆಯೇ, ಮಂಗಳೂರು ಭಾಗದ ಜನರ ಬಹುಬೇಡಿಕೆಯಾಗಿರುವ ವಂದೇ ಭಾರತ್ ರೈಲು ಸಂಚಾರಿಸುವ ಕಾಲವೂ ಸನ್ನಿಹಿತವಾಗಿದೆ. https://t.co/VOfO75Y95g
ರಾಜ್ಯ ಸಚಿವರಿಂದ ಕೇಂದ್ರಕ್ಕೆ ಪತ್ರ
ಕರಾವಳಿ ಮತ್ತು ಬೆಂಗಳೂರು ನಡುವಿನ ಸಂಪರ್ಕಕ್ಕೆ ಹೊಸ ವೇಗ ನೀಡಲು ವಂದೇ ಭಾರತ್ ರೈಲು ಸೇವೆ ಒದಗಿಸುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವೀನ್ ವೈಷ್ಣವ್ ಅವರಿಗೆ ಮಂಗಳೂರು ಜನತೆಯ ಪರವಾಗಿ ಮನವಿ ಮಾಡಿ ಪತ್ರ ಬರೆದಿದ್ದೇನೆ ಎಂದು ಈಚೆಗೆ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದರು.
ಮಂಗಳೂರು ಮತ್ತು ಬೆಂಗಳೂರು ಕರ್ನಾಟಕದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳು. ಮಂಗಳೂರನ್ನು ಬೆಂಗಳೂರಿಗೆ ಪರ್ಯಾಯವಾದ ಅತ್ಯಾಧುನಿಕ ಉದ್ಯೋಗ ಮತ್ತು ಕೈಗಾರಿಕಾ ತಾಣವನ್ನಾಗಿ ರೂಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಆದರೆ, ಈ ಎರಡು ನಗರಗಳ ನಡುವಿನ ವೇಗದ ಸಾರಿಗೆ ಸಂಪರ್ಕದ ಕೊರತೆಯು ಈ ಬೆಳವಣಿಗೆಗೆ ದೊಡ್ಡ ಅಡ್ಡಿಯಾಗಿದೆ ಎಂದಯ ಅವರು ಹೇಳಿದ್ದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications