ಸ್ಮಾರ್ಟ್ ಸಿಟಿ ಯೋಜನೆ ನೇರ ವೀಕ್ಷಣೆಗೆ ಶೀಘ್ರ ವೆಬ್‌ಸೈಟ್
ಬೆಂಗಳೂರು, ಜು.19: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ ಸಿಟಿ ಯೋಜನೆಯ ರೂಪುರೇಷೆಗಳು ಹಾಗೂ ಯೋಜನೆಯು ಯಾವ ಹಂತದಲ್ಲಿದೆ ಎನ್ನುವುದನ್ನು ಅಧಿಕಾರಿಗಳು ಮಾತ್ರವಲ್ಲದೆ ಸಾರ್ವಜನಿಕರು ಕೂಡ ವೀಕ್ಷಿಸಲು ಅನುವು ಮಾಡಿಕೊಡಲಾಗುತ್ತಿದೆ.
ಹಾಗಾಗಿ ನೂತನವಾಗಿ ಅದಕ್ಕೊಂದು ವೆಬ್‌ಸೈಟ್ ತೆರೆಯಲಾಗುತ್ತದೆ. ಯೋಜನೆಗೆ ಕಳೆದ ಸಾಲಿನಲ್ಲಿ ಏಳು ನಗರಗಳು ಆಯ್ಕೆಯಾಗಿದ್ದು, ಈ ಬಾರಿ ಬೆಂಗಳೂರು ಕೂಡ ಸೇರ್ಪಡೆಯಾಗಿದೆ. ಯೋಜನೆ ಅನುಷ್ಠಾನಕ್ಕಾಗಿ ಸ್ಥಳೀಯ ಕಾರ್ಪೊರೇಟರ್ ಆರು ಆರು ಸದಸ್ಯರು ಸೇರಿದಂತೆ ಅಲ್ಲಿನ ಅಧಿಕಾರಿಗಳನ್ನೊಳಗೊಂಡ ಸಮಿತಿಯೊಂದನ್ನು ರಚಿಸಲಾಗಿದೆ.
ಸಮಿತಿಯು ಪ್ರತಿ ತಿಂಗಳಿಗೊಮ್ಮೆ ಸಭೆ ನಡೆಸಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಇಲಾಖೆಯ ಕಾರ್ಯದರ್ಶಿಗೆ ಆಯಾ ತಿಂಗಳು ವರದಿ ಸಲ್ಲಿಸಬೇಕು. ತಪ್ಪಿದರೆ ಸಮಿತಿ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗವುದು ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ದೇಶದಲ್ಲೇ ಮೊದಲ ಬಾರಿಗೆ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ರಾಜ್ಯದ ನಗರಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನೇರವಾಗಿ ಸಾರ್ವಜನಿಕರು ವೀಕ್ಷಿಸಬಹುದು. ಯೋಜನೆ ಅನುಷ್ಠಾನಗೊಳಿಸಲು ಪ್ರತಿ ಸ್ಮಾರ್ಟ್ ಸಿಟಿಗೊಬ್ಬರಂತೆ ವ್ಯವಸ್ಥಾಪಕ ನಿರ್ದೇಶಕರನ್ನು ನಿಯೋಜಿಸಲಾಗುತ್ತದೆ. ಒಟ್ಟು 14,798 ಕೋಟಿ ವೆಚ್ಚದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications