ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಲಮನ್ನಾ ಯೋಜನೆಗೆ ತಂತ್ರಜ್ಞಾನದ ಕಾವಲಿಡಲು ಮುಂದಾದ ಸಿಎಂ

|
Google Oneindia Kannada News

ಬೆಂಗಳೂರು, ನವೆಂಬರ್ 5:ಸಾಲಮನ್ನಾ ಯೋಜನೆಯ ಅನುಷ್ಠಾನದ ಮೇಲೆ ನಿಗಾ ಇಡಲು ತಂತ್ರಾಂಶವನ್ನು ರೂಪಿಸಲಾಗಿದ್ದು ಸೇಡಂ ಮತ್ತು ದೊಡ್ಡ ಬಳ್ಳಾಪುರದಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾಲ ಮನ್ನಾ ಯೋಜನೆಯ ಅನುಷ್ಠಾನದ ಪ್ರಗತಿಯನ್ನು ನಿರಂತರವಾಗಿ ಖುದ್ದು ಪರಿಶೀಲಿಸುತ್ತಿದ್ದು, ಅಧಿಕಾರಿಗಳ ತಂಡ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಯೋಜನೆಯ ವ್ಯಾಪ್ತಿಗೆ ಬರುವ ರೈತರು ಆತಂಕ ಪಡುವೆ ಅಗತ್ಯವಿಲ್ಲ ಎಂದರು.

ಬೆಳಗಾವಿ ರೈತರ ವಿರುದ್ಧ ಬಂಧನ ವಾರೆಂಟ್, ಸಿಎಂ ಅಭಯಬೆಳಗಾವಿ ರೈತರ ವಿರುದ್ಧ ಬಂಧನ ವಾರೆಂಟ್, ಸಿಎಂ ಅಭಯ

ಭೂದಾಖಲೆಗಳು ಮತ್ತು ಸರ್ವೇಕ್ಷಣಾ ಇಲಾಖೆಯ ಆಯುಕ್ತ ಮುನೀಶ್ ಮೌದ್ಗಿಲ್ ನೇತೃತ್ವದ ತಂಡವು ಸಾಲಮನ್ನಾ ಯೋಜನೆಗಾಗಿ ವಿಶೇಷ ತಂತ್ರಾಂಶ ರೂಪಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸಲು ಕ್ರಮ ವಹಿಸಲಾಗುತ್ತಿದೆ. ಸಾಲಮನ್ನಾ ಯೋಜನೆಗೆ ಅರ್ಹತೆ ಪಡೆದ ರೈತರು ಯಾರೂ ಗಾಬರಿಯಾಗಬೇಕಾಗಿಲ್ಲ ಎಂದು ಹೇಳಿದರು.

New website to track farmers waive off program

ಪ್ರಸ್ತುತ ರಾಷ್ಟ್ರೀಕೃತ ಬ್ಯಾಂಕುಗಳು ಕೃಷಿ ಸಾಲ ಪಡೆದ ರೈತರ ಮಾಹಿತಿ ಒದಗಿಸಿದ್ದು, ಈ ಮಾಹಿತಿಯನ್ನು ಸರ್ಕಾರ ಅಭಿವೃದ್ಧಿ ಪಡಿಸಿದ ತಂತ್ರಾಂಶದಲ್ಲಿ ಅಳವಡಿಸಿ, ಪರಿಶೀಲನೆ ನಡೆಸಲಾಗುತ್ತಿದೆ.

ದೀಪಾವಳಿ ವಿಶೇಷ ಪುರವಣಿ

ಮೊದಲಿಗೆ ಸೇಡಂ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕುಗಳಲ್ಲಿ ನವೆಂಬರ್ 5 ರಿಂದ ಪ್ರಾಯೋಗಿಕವಾಗಿ ಸಾಲ ಮನ್ನಾ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಈ ತಾಲ್ಲೂಕುಗಳ ಬ್ಯಾಂಕುಗಳ ಶಾಖೆಗಳು ಮಾಹಿತಿ ಪರಿಶೀಲನೆ ಪೂರ್ಣಗೊಳಿಸಿದ ನಂತರ ನವೆಂಬರ್ 12 ರಿಂದ ರೈತರು ತಾವು ಸಾಲ ಪಡೆದ ಬ್ಯಾಂಕಿಗೆ ಭೇಟಿ ನೀಡಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಅವರು ಹೊಂದಿರುವ ಕೃಷಿ ಭೂಮಿಯ ಮಾಹಿತಿ ಒದಗಿಸುವಂತೆ ಸೂಚಿಸಲಾಗುವುದು. ನಂತರ ಇತರ ತಾಲ್ಲೂಕುಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಾಲಮನ್ನಾಕ್ಕೆ ಬ್ಯಾಂಕುಗಳು ಸಹಕರಿಸದಿದ್ದರೆ ನೇರ ರೈತರ ಖಾತೆಗೆ ಹಣ: ರೇವಣ್ಣ ಸಾಲಮನ್ನಾಕ್ಕೆ ಬ್ಯಾಂಕುಗಳು ಸಹಕರಿಸದಿದ್ದರೆ ನೇರ ರೈತರ ಖಾತೆಗೆ ಹಣ: ರೇವಣ್ಣ

ಸಹಕಾರಿ ಬ್ಯಾಂಕುಗಳಲ್ಲಿ ಈಗಾಗಲೇ ಮಾಹಿತಿ ಪರಿಶೀಲನಾ ಪ್ರಕ್ರಿಯೆ ಆರಂಭವಾಗಿದ್ದು, ನವೆಂಬರ್ ಅಂತ್ಯದೊಳಗೆ 6000 ಶಾಖೆಗಳ 20 ಲಕ್ಷ ರೈತರ ಮಾಹಿತಿ ಪರಿಶೀಲನೆ ನಡೆಸಲಾಗುವುದು.

 ಎಚ್ಡಿಕೆ ಸಾಲಮನ್ನಾ ಕನಸಿಗೆ ಕೈ ಜೋಡಿಸಿದ ದೊಡ್ಡ ಬ್ಯಾಂಕ್ ಗಳು ಎಚ್ಡಿಕೆ ಸಾಲಮನ್ನಾ ಕನಸಿಗೆ ಕೈ ಜೋಡಿಸಿದ ದೊಡ್ಡ ಬ್ಯಾಂಕ್ ಗಳು

ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಈ ಯೋಜನೆಯ ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳಾಗಿರುತ್ತಾರೆ. ಈ ಯೋಜನೆ ಕುರಿತು ರೈತರ ಸಂದೇಹಗಳನ್ನು ಬಗೆಹರಿಸಲು ಶೀಘ್ರವೇ ಸಹಾಯವಾಣಿ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

English summary
Chief minister HD Kumaraswamy announced that senior officials are tracking down the real time information regarding farmers loan waive through website.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X