New Year 2023: ಡಿಸೆಂಬರ್ 31ರ ಮಧ್ಯರಾತ್ರಿ 2 ಗಂಟೆಯವರೆಗೆ ಸಿಗಲಿದೆ ಮೆಟ್ರೋ ಸೇವೆ

ಬೆಂಗಳೂರು, ಡಿ. 29: ಹೊಸವರ್ಷದ ಸಂಭ್ರಮಾಚರಣೆಯಲ್ಲಿ ತೊಡಗುವವರನ್ನು ಗಮನದಲ್ಲಿಟ್ಟುಕೊಂಡು ಬೆಂಘಳೂರಿನ ನಮ್ಮ ಮೆಟ್ರೋ ತನ್ನ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ.

ಹೊಸ ವರ್ಷದ ಸಂಭ್ರಮಾಚರಣೆ ನಡೆಯಲಿರುವ ಡಿಸೆಂಬರ್ 31ರ ಮಧ್ಯರಾತ್ರಿಯಿಂದ ಬೆಳಗ್ಗೆ 2 ಗಂಟೆಯವರೆಗೆ ನಗರದಲ್ಲಿ ಮೆಟ್ರೋ ಕಾರ್ಯಾಚರಣೆ ನಡೆಸಲಿದ್ದು, ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಬಿಎಂಆರ್‌ಸಿಎಲ್ ಹೇಳಿದೆ.

'ಬೆಂಗಳೂರು ಮೆಟ್ರೋ ಸೇವೆಗಳು ಡಿಸೆಂಬರ್ 31 ರಂದು 2 ಗಂಟೆಯವರೆಗೆ ಲಭ್ಯವಿರುತ್ತವೆ' ಎಂದು ಬಿಎಂಆರ್‌ಸಿಎಲ್ ಗುರುವಾರ ಪ್ರಕಟಣೆ ಹೊರಡಿಸಿದೆ.

New Year 2023: Bengaluru Metro services will be available till 2 am on December 31

ಬಿಎಂಆರ್‌ಸಿಎಲ್‌ನ ಎಂಡಿ ಅಂಜುಮ್ ಪರ್ವೇಜ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೊನೆಯ ರೈಲು ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 1.15 ರ ಸುಮಾರಿಗೆ ಹೊರಟು 2 ಗಂಟೆಗೆ ಆಯಾ ಗಮ್ಯಸ್ಥಾನಗಳನ್ನು ತಲುಪುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಇದು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗುವವರಿಗೆ ಸುಲಭವಾದ ಪ್ರಯಾಣಕ್ಕೆ ಅನುಕೂಲವಾಗುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಇನ್ನು, ಹೊಸ ವರ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುವವರ ಸುರಕ್ಷತೆಗಾಗಿ ಮಹಾತ್ಮಾ ಗಾಂಧಿ ರಸ್ತೆ (ಎಂಜಿ ರಸ್ತೆ), ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು 500ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

New Year 2023: Bengaluru Metro services will be available till 2 am on December 31

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳ ಜೊತೆಗೆ ದುಷ್ಕೃತ್ಯಗಳನ್ನು ತಡೆಯಲು ಡ್ರೋನ್ ಕ್ಯಾಮೆರಾಗಳನ್ನು ನಿಯೋಜಿಸಲಾಗುವುದು. ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆಯನ್ನು ಒದಗಿಸುವುದು ಪೊಲೀಸರ ಮೊದಲ ಆದ್ಯತೆಯಾಗಿದೆ. ಅದಕ್ಕೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಪೊಲೀಸ್ ಕಮಿಷನರ್ ಸಿಎಚ್ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

ಇತ್ತ, ಕುಡಿದು ಟೈಟಾಗಿ ರಸ್ತೆಯಲ್ಲೇ ಬಿದ್ದವರಿಗೆ ಬೆಂಗಳೂರು ಪೊಲೀಸರು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಿದ್ದಾರೆ. ಆದರೆ, ಈ ವ್ಯವಸ್ಥೆ ಡಿಸೆಂಬರ್ 31ರ ರಾತ್ರಿ ಮಾತ್ರ ಇರಲಿದೆ.

ಬೆಂಗಳೂರು ಆಗ್ನೇಯ ವಿಭಾಗದಲ್ಲಿ 108 ಪಬ್, ರೆಸ್ಟೋರೆಂಟ್​ಗಳಿವೆ. ಹೀಗಾಗಿ ಕೋರಮಂಗಲ, ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಹೆಚ್​ಎಸ್​ಆರ್ ಲೇಔಟ್ ನಲ್ಲಿ ಸಂಪೂರ್ಣ ಭದ್ರತೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೊಸ ವರ್ಷದ ರಾತ್ರಿ ಕುಡಿದು ಟೈಟಾಗಿ ಪ್ರಜ್ಞೆ ತಪ್ಪಿ ಬೀಳುವವರಿಗೆ, ಬಿದ್ದು ಗಾಯ ಮಾಡಿಕೊಂಡವರಿಗೆ, ಆರೋಗ್ಯ ಸಮಸ್ಯೆ ಉಂಟಾದರೇ ಅಂಥವರಿಗಾಗಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+