Get Updates
Get notified of breaking news, exclusive insights, and must-see stories!

ಹೊಸ ವರ್ಷ 2023: ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನ ಕಾತುರದಿಂದ ಕಾಯುತ್ತಿದ್ದಾರೆ. ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಬ್ರಿಗೇಡ್ ರಸ್ತೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ. ಶಾಪಿಂಗ್ ಮಳಿಗೆಗಳು ಗ್ರಾಹಕರನ್ನು ಸೆಳೆಯಲಯ ಲೈಟಿಂಗ್ಸ್, ಸ್ಟಾರ್‌, ಬೃಹತ್ ಗೊಂಬೆಗಳ ಮೂಲಕ ಸಜ್ಜಾಗಿವೆ. ಹೀಗಾಗಿ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಕಟ್ಟುನಿಟ್ಟಿನ ಮುನ್ನೆಚ್ಚರಿಕೆಯನ್ನು ವಹಿಸಲಾಗಿದ್ದು ಪೊಲೀಸರು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಬೆಂಗಳೂರು ಪೊಲೀಸರು ಎಲ್ಲಾ ಖಾಸಗಿ ವಾಹನಗಳನ್ನು 31ನೇ ರಾತ್ರಿ 8 ಗಂಟೆಯಿಂದ 2023 ರ ಜನವರಿ 1 ರ ಮಧ್ಯರಾತ್ರಿ 1 ಗಂಟೆಯವರೆಗೆ ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ನಿಷೇಧಿಸಿದ್ದಾರೆ. ಪೊಲೀಸ್ ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಖಾಸಗಿ ವಾಹನಗಳನ್ನು ಈ ರಸ್ತೆಗಳಲ್ಲಿ ನಿಷೇಧಿಸಲಾಗಿದೆ.

ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರು ಮೂರು ಪ್ರಮುಖ ಪ್ರದೇಶಗಳ ಸ್ಥಳ ಪರಿಶೀಲನೆ ಮಾಡುವ ಮೂಲಕ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ಮಾರ್ಗಸೂಚಿ ಪ್ರಕಾರ ಎಲ್ಲಾ ಖಾಸಗಿ ವಾಹನಗಳನ್ನು ನಾಡಿದ್ದು 31ರಂದು ರಾತ್ರಿ 8 ಗಂಟೆಯಿಂದ ಜನವರಿ 1ರ ಮಧ್ಯರಾತ್ರಿ 1 ಗಂಟೆಯವರೆಗೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಹೊಸ ವರ್ಷವನ್ನು ಸಂಭ್ರಮಿಸಲು ಎಂ ಜಿ ರಸ್ತೆ, ಚರ್ಚ್ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಅಧಿಕ ಜನ ಸೇರುತ್ತಾರೆ. ಈ ರಸ್ತೆಗಳಲ್ಲಿ ಪೊಲೀಸ್ ಜೀಪು ಮತ್ತು ಇತರ ಪೊಲೀಸ್ ವಾಹನ ಹಾಗೂ ಅಗತ್ಯ ತುರ್ತು ಸೇವೆಯ ವಾಹನಗಳನ್ನು ಹೊರತುಪಡಿಸಿ ಬೇರೆ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

New Year 2023: No vehicular traffic on MG Road, Church Street and Brigade Road

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೈಂಟ್ ಮಾರ್ಕ್ಸ್ ರೋಡ್, ಚರ್ಚ್ ಸ್ಟ್ರೀಟ್ ಗಳಲ್ಲಿ ಬೃಹತ್ ಸಂಖ್ಯೆಯಲ್ಲಿ ಜನ ಸೇರುವುದು ಸಾಮಾನ್ಯ. ಸಾರ್ವಜನಿಕರ ಭದ್ರತೆ ಹಿತದೃಷ್ಟಿಯಿಂದ ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

1. ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ: ಅನಿಲ್ ಕುಂಬ್ಳೆ ವೃತ್ತದಿಂದ ಮೇಯೋ ಹಾಲ್ ನ ಹತ್ತಿರ ರೆಸಿಡೆನ್ಸಿ ರಸ್ತೆಯವರೆಗೆ ಎಂ ಜಿ ರಸ್ತೆಯಲ್ಲಿ.

2. ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಒಪೆರಾ ಜಂಕ್ಷನ್ ವರೆಗೆ ಬ್ರಿಗೇಡ್ ರಸ್ತೆ

3. ಮ್ಯೂಸಿಯಂ ರಸ್ತೆಯವರೆಗೆ ಬ್ರಿಗೇಡ್ ರಸ್ತೆಯಲ್ಲಿ ಚರ್ಚ್ ಸ್ಟ್ರೀಟ್,

4. ಎಂ ಜಿ ರಸ್ತೆಯಿಂದ ಹಳೆ ಮದ್ರಾಸ್ ರಸ್ತೆಯವರೆಗೆ ಮ್ಯೂಸಿಯಂ ರೋಡ್,

5. ಮ್ಯೂಸಿಯಂ ರಸ್ತೆ ಬ್ರಿಗೇಡ್ ರಸ್ತೆಯಲ್ಲಿ ರೆಸ್ಟ್ ಹೌಸ್ ರಸ್ತೆಯಲ್ಲಿ

6. ರೆಸಿಡೆನ್ಸಿ ರಸ್ತೆಯಿಂದ ಎಂ ಜಿ ರಸ್ತೆಯವರೆಗೆ ರೆಸಿಡೆನ್ಸಿ ಕ್ರಾಸ್ ರಸ್ತೆಯವರೆಗೆ ಸಂಚಾರ ನಿರ್ಬಂಧ

New Year 2023: No vehicular traffic on MG Road, Church Street and Brigade Road

ಪೊಲೀಸ್ ಮತ್ತು ಅಗತ್ಯ ಸೇವೆ ವಾಹನಗಳನ್ನು ಹೊರತುಪಡಿಸಿ ಬೇರೆಲ್ಲಾ ವಾಹನಗಳ ನಿಲುಗಡೆಗೆ ಸಹ ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿಂದ ಜನವರಿ 1ರ ಬೆಳಗಿನ ಜಾವ 7 ಗಂಟೆಯವರೆಗೆ ನಿರ್ಬಂಧ ವಿಧಿಸಲಾಗಿದೆ. ಅದು ಎಲ್ಲೆಲ್ಲವೆಂದರೆ

-ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ಸರ್ಕಲ್ ವರೆಗೆ ಎಂ ಜಿ ರಸ್ತೆಯಲ್ಲಿ

-ಆರ್ಟ್ ಅಂಡ್ ಕ್ರಾಫ್ಟ್ ಜಂಕ್ಷನ್ ನಿಂದ ಒಪೆರಾ ಜಂಕ್ಷನ್ ವರೆಗೆ ಬ್ರಿಗೇಡ್ ರಸ್ತೆಯಲ್ಲಿ

-ಸೈಂಟ್ ಮಾರ್ಕ್ಸ್ ರೋಡ್ ವರೆಗೆ ಚರ್ಚ್ ಸ್ಟ್ರೀಟ್ ನಲ್ಲಿ

-ಮ್ಯೂಸಿಯಂ ರಸ್ತೆಯವರೆಗೆ ರೆಸ್ಟ್ ಹೌಸ್ ರಸ್ತೆಯಲ್ಲಿ

-ಹಳೆ ಮದ್ರಾಸ್ ರಸ್ತೆಯವರೆಗೆ ಮ್ಯೂಸಿಯಂ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ನಿರ್ಬಂಧ ಹೇರಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+