New MSIL: ಮೊದಲ 'ಸರ್ಕಾರಿ ಪ್ರೀಮಿಯಂ ಲಿಕ್ಕರ್ ಔಟ್‌ಲೆಟ್' ಆರಂಭ, ಎಲ್ಲಿ? ಇಲ್ಲಿದೆ ಮಾಹಿತಿ, ವಿವರ
ಬೆಂಗಳೂರು, ಜನವರಿ 01: ಹೊಸ ವರ್ಷವನ್ನು ಮದ್ಯದೊಂದಿಗೆ ಸ್ವಾಗತಿಸುವುದು ಸಾಮಾನ್ಯವಾಗಿದೆ. ಇದೀಗ ಮದ್ಯಪ್ರೀಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ಹೊಸದಾಗಿ 'ಸರ್ಕಾರಿ ಪ್ರೀಮಿಯಂ ಮದ್ಯ ಮಾರಾಟ ಮಳಿಗೆ'ಯನ್ನು ಆರಂಭಿಸಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ನೂತನ ವರ್ಷಾರಂಭದ ದಿನ ಸೋಮವಾರವೇ ನೂತನ ಮಳಿಗೆ ಉದ್ಘಾಟಿಸಿದರು. ಏನಿದರೆ ವಿಶೇಷತೆ, ಎಲ್ಲಿ ಸ್ಥಾಪನೆ ಎಂಬ ಮಾಹಿತಿ ಇಲ್ಲಿ ತಿಳಿಯಿರಿ.
ಹೊಸ ವರ್ಷಾಚರಣಗೆ ಬೆಂಗಳೂರಿನ ಮದ್ಯ ಪ್ರಿಯರಿಗೆ ಎಂಎಸ್‌ಐಎಲ್ ವ್ಯಾಪ್ತಿಯಲ್ಲಿ ಹೊಸ 'ಸರ್ಕಾರಿ ಪ್ರೀಮಿಯಂ ಮದ್ಯ ಮಾರಾಟ ಮಳಿಗೆ' ಆರಂಭವಾಗಿದೆ. ಇದು ಬೆಂಗಳೂರಿನ ಬಸವೇಶ್ವರ ನಗರದ ತಿಮ್ಮಯ್ಯ ರಸ್ತೆಯಲ್ಲಿ ಆರಂಭಗೊಂಡಿದೆ.

ಮಳಿಗೆ ಉದ್ಘಾಟಿಸಿದ ಮನೋಜ್ ಕುಮಾರ್ ಅವರು ಮಾತನಾಡಿ, ಮಧ್ಯಮ ವರ್ಗದಿಂದ ಹಿಡಿದು ಸಮಾಜದ ಪ್ರತಿಯೊಂದು ವರ್ಗದ ಗ್ರಾಹಕರನ್ನೂ ಸೆಳೆಯುವುದು ಎಂಎಸ್ಐಎಲ್ ನ ಗುರಿಯಾಗಿದೆ. ಇದರಂತೆ, ಹೊಸ ರೂಪ ಪಡೆದಿರುವ ಈ ಬೋಟಿಕ್ ನಲ್ಲಿ ಸಾಮಾನ್ಯ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ಬ್ರಾಂಡೆಡ್ ಮದ್ಯದ ಉತ್ಪನ್ನಗಳು ಸುಲಭವಾಗಿ ಸಿಗಲಿದೆ. ಚಿತ್ತಾಕರ್ಷಕ ಒಳಾಂಗಣ ವಿನ್ಯಾಸ ಮತ್ತು ಗ್ರಾಹಕರಿಗೆ ಹಿತಕರ ಅನುಭವ ಸಿಗುವಂತೆ ಮಾಡಲು ಇಲ್ಲಿ ಆದ್ಯತೆ ಕೊಡಲಾಗಿದ್ದು, ಜಾಗತಿಕ ಗುಣಮಟ್ಟದ ಮಾಲ್ ರೀತಿಯಲ್ಲಿ ಈ ಪ್ರೀಮಿಯಂ ಬೋಟಿಕ್ ಇದೆ ಎಂದರು.
ಎಂಎಸ್ಐಎಲ್ ಅಧ್ಯಕ್ಷರೂ ಆದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಸಲಹೆ ಮೇರೆಗೆ ಹಾಲಿ ಇರುವ ಮದ್ಯ ಮಾರಾಟ ಮಳಿಗೆಗಳನ್ನು ಹೈಟೆಕ್ ರೀತಿಯಲ್ಲಿ ವಿನ್ಯಾಸ ಮಾಡಲು ಆರಂಭಿಸಿದ್ದು ಹಂತಹಂತವಾಗಿ ಎಲ್ಲವನ್ನೂ ಬದಲಿಸಲಾಗುವುದು ಎಂದರು.

ಕರ್ನಾಟಕದಲ್ಲಿ MSIL ಮಳಿಗೆಗಳ ಸಂಖ್ಯೆ
ಎಂಎಸ್ಐಎಲ್ ರಾಜ್ಯದಲ್ಲಿ ಒಟ್ಟು 1,029 ಮದ್ಯ ಮಾರಾಟ ಮಳಿಗೆಗಳನ್ನು ನಡೆಸುತ್ತಿದೆ. ಈ ಪೈಕಿ 200 ಮಳಿಗೆಗಳನ್ನು ಬೋಟಿಕ್ ಆಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಇದರಲ್ಲಿ 20 ಮಳಿಗೆಗಳು ಬೆಂಗಳೂರಿನಲ್ಲೇ ಇರಲಿವೆ. ಇನ್ನು ಕೆಲವೇ ದಿನಗಳಲ್ಲಿ ಡಾ.ರಾಜಕುಮಾರ್ ರಸ್ತೆ, ಆರ್ ಪಿಸಿ ಬಡಾವಣೆ ಮತ್ತು ವಿಜಯನಗರದಲ್ಲಿ ಇಂತಹ ಬೋಟಿಕ್ ಮದ್ಯಪ್ರಿಯರಿಗೆ ಮುಕ್ತವಾಗಲಿವೆ ಎಂದು ಅವರು ಹೇಳಿದರು.
ಮೇಲ್ದರ್ಜೆಗೆ ಏರಿಸುವ ಕೆಲಸ ಪ್ರಗತಿಯಲ್ಲಿದೆ
ಇನ್ನೂ ಬೆಂಗಳೂರಿನ ಶಿವಾನಂದ ವೃತ್ತ, ವರ್ತೂರು, ಕೆಂಗೇರಿ ಉಪನಗರ, ಮಾರುತಿ ಸೇವಾ ನಗರ, ಹನುಮಂತ ನಗರ ಮತ್ತು ಸರ್ಜಾಪುರ ರಸ್ತೆಯಲ್ಲಿರುವ ದೊಡ್ಡಕನ್ನಹಳ್ಳಿಯಲ್ಲಿ ಇರುವ ಎಂಎಸ್ಐಎಲ್ ಮಳಿಗೆಗಳನ್ನು ಬೋಟಿಕ್ ಗಳಾಗಿ ರೂಪಾಂತರಿಸುವ ಕೆಲಸ ಪ್ರಗತಿಯಲ್ಲಿದೆ. ಈ ಎಲ್ಲ ಮಳಿಗೆಗಳಲ್ಲೂ ಚಿಲ್ಲರೆ ಮಾರಾಟ ದರದಲ್ಲಿ ಅತ್ಯುತ್ಕೃಷ್ಟ ಮದ್ಯಗಳು ಲಭ್ಯವಾಗಲಿವೆ ಎಂದು ಅವರು ಮಾಹಿತಿ ನೀಡಿದರು.
ಎಂಎಸ್ಐಎಲ್ ರಾಜ್ಯದಲ್ಲಿರುವ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಇಂತಹ ತಲಾ 2 ಬೋಟಿಕ್ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಇಂತಹ ಬೋಟಿಕ್ ತೆರೆಯಲಿದೆ. ಇವೆಲ್ಲವೂ ಇನ್ನು ಮೂರ್ನಾಲ್ಕು ತಿಂಗಳುಗಳಲ್ಲಿ ಹಂತಹಂತವಾಗಿ ಆರಂಭವಾಗಲಿವೆ. ಮದ್ಯಪ್ರಿಯರು ಯಾವುದೇ ತೊಂದರೆ ಇಲ್ಲದೆ, ತಮಗೆ ಬೇಕಾದ ದರ್ಜೆಯ ಮದ್ಯದ ಉತ್ಪನ್ನಗಳನ್ನು ಇಲ್ಲಿ ಖರೀದಿಸಬಹುದು ಎಂದು ಮನೋಜ್ ಕುಮಾರ್ ಮಾಹಿತಿ ನೀಡಿದರು.
ವಹಿವಾಟು ಏರಿಕೆ ನಿರೀಕ್ಷೆ
ಇಂತಹ ಬೋಟಿಕ್ ಗಳಿಂದ ಸಂಸ್ಥೆಯ ವಹಿವಾಟು ಶೇಕಡ 30ರಿಂದ 40ರಷ್ಟು ಏರಿಕೆಯಾಗಲಿದೆ. ಇಲ್ಲಿ ಸಿಗುವ ಬ್ರಾಂಡೆಡ್ ಮದ್ಯದ ಬಗೆಗಳಿಗೆ ಗುಣಮಟ್ಟದ ಖಾತ್ರಿ ಇರಲಿದೆ. ಈ ಮೂಲಕ ಸಂಸ್ಥೆಯು ಹೊಸ ಹೆಜ್ಜೆ ಇಡುತ್ತಿದೆ. ಸಂಸ್ಥೆಯು ವಹಿವಾಟನ್ನು 4 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ.
ಈ ನಿಟ್ಟಿನಲ್ಲಿ ವಾರ್ಷಿಕ 10 ಸಾವಿರ ಕೋಟಿ ರೂ. ಮೊತ್ತದ ಚಿಟ್ ಫಂಡ್ ವ್ಯವಹಾರ, ಲೇಖನ ಸಾಮಗ್ರಿಗಳ ಮಾರಾಟಕ್ಕೆ ಫ್ರಾಂಚೈಸಿಗಳ ಆರಂಭ, 10 ಮೆಗಾ ಮೆಡಿಕಲ್ ಶಾಪ್ ಆರಂಭ ಮುಂತಾದ ಉಪಕ್ರಮಗಳನ್ನು ಕೈಗೊಳ್ಳಲಿದೆ. ಜೊತೆಗೆ ಪ್ರತಿಯೊಂದು ವಹಿವಾಟಿನಲ್ಲೂ ಕಾರ್ಪೊರೇಟ್ ಸ್ಪರ್ಶ ನೀಡಲಾಗುವುದು ಎಂದು ತಿಳಿಸಿದರು.
ಎಂಎಸ್ಐಎಲ್ ನಿರ್ದೇಶಕ ಎ.ಎಂ.ಚಂದ್ರಪ್ಪ, ಪ್ರಧಾನ ವ್ಯವಸ್ಥಾಪಕ (ಮೂಲಸೌಕರ್ಯ) ಕೆ.ರವಿಕುಮಾರ್ , ಪ್ರಧಾನ ವ್ಯವಸ್ಥಾಪಕ ರಾದ ಬಸವರಾಜ, ಚಂದ್ರಶೇಖರ, ಸಿಎಫ್ಒ ಅವಿನಾಶ ಉಪಸ್ಥಿತರಿದ್ದರು.
ಉದ್ದೇಶದಂತೆ ಆದಷ್ಟು ಶೀಘ್ರವೇ ಸರ್ಕಾರ ಕರ್ನಾಟಕದ 200 ಲಿಕ್ಕರ್ ಮಾರಾಟ ಮಳಿಗೆಗಳನ್ನು ಮೇಲ್ದರ್ಜೆಗೆ ಏರಿಸಲಿದ್ದು, ಇದರಲ್ಲಿ ಬೆಂಗಳೂರಿನಲ್ಲಿ ಒಟ್ಟು 20 ಶಾಪ್‌ಗಳು ನವೀಕರಣಗೊಳ್ಳಲಿವೆ. ಇದು ಮದ್ಯ ಪ್ರೀಯರಲ್ಲಿ ಸಂತಸ ಹೆಚ್ಚಳಕ್ಕೆ ಕಾರಣವಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications