BMTC: ಒಂದೇ ದಿನಕ್ಕೆ ಬಿಎಂಟಿಸಿಗೆ ಹರಿದುಬಂದ ಆದಾಯ ಎಷ್ಟು ಕೋಟಿ ಗೊತ್ತಾ?
BMTC: ಹೊಸ ವರ್ಷ ಹಿನ್ನೆಲೆ ಎಂಜಿ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚುವರಿ ಬಿಎಂಟಿಸಿ ಬಸ್‌ಗಳ ಸೇವೆಯನ್ನು ಕಲ್ಪಿಸಲಾಗಿತ್ತು. ಹಾಗಾದರೆ ನಿನ್ನೆ (ಜನವರಿ 1, 2025)ರ ರಾತ್ರಿ ಒಂದೇ ದಿನ ಬಿಎಂಟಿಸಿಗೆ ಹರಿದುಬಂದ ಆದಾಯ ಎಷ್ಟು ಕೋಟಿ ಎನ್ನುವ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.
ನಿನ್ನೆ ಹೊಸ ವರ್ಷಾಚರಣೆಯ ಸಂಭ್ರಮದ ವೇಳೆಯಲ್ಲಿ ಬಿಎಂಟಿಸಿಗೆ ಭರ್ಜರಿ ಆದಾಯವೇ ಹರಿದು ಬಂದಿದೆ. ನಿನ್ನೆ ಒಂದೇ ದಿನ 35 ಲಕ್ಷ ಜನರು ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದು, ಬರೋಬ್ಬರಿ 5 ಕೋಟಿ ಆದಾಯ ಬಂದಿದೆ.

ಬೆಂಗಳೂರಲ್ಲಿ ನಿನ್ನೆ ರಾತ್ರಿ 2025ರ ಹೊಸ ವರ್ಷಾಚರಣೆಯನ್ನು ಅದ್ಧೂರಿಯಾಗಿ ಸ್ವಾಗತಿಸಿ, ಸಂಭ್ರಮದಿಂದ ಆಚರಣೆ ಮಾಡಿದರು. ಈ ಸಂಭ್ರಮಾಚರಣೆಗೆ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ವಿವಿಧೆಡೆಯಲ್ಲೇ ಜನ ಸಾಗರವೇ ಸೇರಿತ್ತು. ನಗರದ ವಿವಿಧೆಡೆಗಳಿಂದ ಆಗಮಿಸಿದ್ದಂತ ಜನರು ಹೊಸ ವರ್ಷಾಚರಣೆಯನ್ನು ಆಚರಿಸಿ ಸಂಭ್ರಮಿಸಿದರು.
ಇನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆ ಕೂಡ ಮಾಡಲಾಗಿತ್ತು. ನಿನ್ನೆ ಒಂದೇ ದಿನ 35 ಲಕ್ಷ ಜನರು ಬಿಎಂಟಿಸಿ ಬಸಸ್‌ನಲ್ಲಿ ಪ್ರಯಾಣಿಸಿದ್ದಾರೆ. ಇದರಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಗೆ ಬರೋಬ್ಬರಿ 5,48,89,254 ಕೋಟಿ ರೂಪಾಯಿ ಆದಾಯ ಹರಿದುಬಂದಿರುವುದಾಗಿ ತಿಳಿದು ಬಂದಿದೆ.
ಪ್ರಯಾಣಿಕರ ಅನೂಕೂಲಕ್ಕೆ ತಕ್ಕಂತೆ ಡಿಸೆಂಬರ್ 31ರ ರಾತ್ರಿಯಿಂದ ಜನವರಿ 1, 2025ರ ಬೆಳಗ್ಗೆ 2 ಗಂಟೆಯವರೆಗೂ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚು ಬಸ್‌ಗಳು ಕಾರ್ಯನಿರ್ವಹಿಸಿವೆ. ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಜನರ ಅನುಕೂಲಕ್ಕಾಗಿ ಬಿಎಂಟಿಸಿ ಈ ಕ್ರಮ ಕೈಗೊಂಡಿತ್ತು.
ಬಸ್ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ?
* G-3 ಬ್ರಿಗೇಡ್ ರಸ್ತೆ ಎಲೆಕ್ಟ್ರಾನಿಕ್ಸ್ ಸಿಟಿ
* G-4 ಬ್ರಿಗೇಡ್ ರಸ್ತೆ ಜಿಗಣಿ G-2 ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಸರ್ಜಾಪುರ
* G-6 ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಕೆಂಗೇರಿ ಕೆ.ಹೆಚ್.ಬಿ.ಕ್ವಾರ್ಟರ್ಸ್
* G-7 ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಜನಪ್ರಿಯಟೌನ್ ಶಿಪ್
* G-8 ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ನೆಲಮಂಗಲ
* G-9 ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಯಲಹಂಕ ಉಪನಗರ 5ನೇ ಹಂತ
* G-10 ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಯಲಹಂಕ
* G-11 ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಬಾಗಲೂರು
* 317-G ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಹೊಸಕೋಟೆ
* SBS-13K ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಚನ್ನಸಂದ್ರ
೮ SBS-1K ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಕಾಡುಗೋಡಿ 13 ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಬನಶಂಕರಿ
ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ ಹಾಗೂ ಜಂಕ್ಷನ್‌ಗಳಿಂದಲೂ ಹೆಚ್ಚುವರಿ ಬಸ್ ಕಾರ್ಯನಿರ್ವಹಿಸಿವೆ. ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್ ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ಗಳಿಂದ ಪ್ರಯಾಣಿಕರ ದಟ್ಟಣೆಗನುಸಾರ ಬಸ್ ವ್ಯವಸ್ಥೆ ಮಾಡಲಾಗಿತ್ತು.












Click it and Unblock the Notifications