New Year: ಹೊಸ ವರ್ಷ 2025 ಸಂಭ್ರಮಾಚರಣೆ; ಪೊಲೀಸರಿಗೆ ರಜೆ ಶಾಕ್!
ಹೊಸ ವರ್ಷಾಚರಣೆಯ ಸಂದರ್ಭದಲ್ಲೇ ಪೊಲೀಸರಿಗೆ ಸಣ್ಣ ಶಾಕ್ ನೀಡಲಾಗಿದೆ. ಹೊಸ ವರ್ಷಕ್ಕೆ ಇನ್ನೊಂದು ವಾರ ಮಾತ್ರ ಬಾಕಿ ಇದೆ. ಈ ರೀತಿ ಇರುವಾಗಲೇ ಹೊಸ ವರ್ಷಕ್ಕೆ ಪೊಲೀಸರ ಸಿದ್ಧತೆ ಹಾಗೂ ಭದ್ರತೆ ಜೋರಾಗಿದೆ. ಬೆಂಗಳೂರಿನಲ್ಲಿ ಹೊಸ ವರ್ಷ ಹಿನ್ನೆಲೆಯಲ್ಲಿ ಹಲವು ಪ್ರಮುಖ ರಸ್ತೆಗಳು ರಂಗು ರಂಗಾಗಿ ಸಿಂಗಾರಗೊಂಡಿವೆ. ನಾಳೆ ಕ್ರಿಸ್ಮಸ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿದ್ಧತೆ ಜೋರಾಗಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ರಾಜ್ಯ ಸರ್ಕಾರವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ, ಇದೇ ಸಂದರ್ಭದಲ್ಲಿ ಪೊಲೀಸರಿಗೆ ರಜೆ ಕಟ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಭದ್ರತೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ರಜೆ ಕೊಡುವುದು ಬೇಡ. ತೀರ ಅಗತ್ಯತೆ ಅಥವಾ ಅನಿವಾರ್ಯತೆ ಇದ್ದರಷ್ಟೇ ರಜೆ ಕೊಡಿ, ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಣೆ ವೇಳೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ನಿರ್ದೇಶನ ನೀಡಿದ್ದಾರೆ.

ವರ್ಷಾಂತ್ಯ ಹಾಗೂ ಹೊಸ ವರ್ಷದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಒಂದೊಮ್ಮೆ ಯಾವುದಾದರೂ ತಪ್ಪುಗಳು ನಡೆದರೆ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ಬೆಂಗಳೂರು ವಿಶ್ವವ ಕೇಂದ್ರಿತ ಪ್ರದೇಶವಾಗಿದೆ ಅಲ್ಲದೆ ಈ ಸಂದರ್ಭದಲ್ಲಿ ಈ ಭಾಗದಲ್ಲಿ ಸಾವಿರಾರು ಜನ ಸೇರುತ್ತಾರೆ ಹೀಗಾಗಿ, ಇಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಪೊಲೀಸ್ ಹಿರಿಯ ಅಧಿಕಾರಿಗಳು ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು. ಈ ಸಂದರ್ಭದಲ್ಲಿ ಮಹಿಳಾ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಬೇಕು. ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಆದರೆ, ಹೊಸ ವರ್ಷಾಚರಣೆ ಮಾಡುವುದಕ್ಕೆ ಯಾವುದೇ ರೀತಿಯ ಅಡ್ಡಿಪಡಿಸಬೇಡಿ. ಹೊಸ ವರ್ಷಾಚರಣೆ ಮಾಡುವವರಿಗೆ ಸುರಕ್ಷತೆ ಕೊಡಿ. ತೊಂದರೆ ಕೊಡುವವರ ಮೇಲೆ ಕಣ್ಣಿಡಿ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ನಿರ್ಬಂಧವಿಲ್ಲ: ಬೆಂಗಳೂರಿನಲ್ಲಿ ವರ್ಷಾಂತ್ಯದಲ್ಲಿ ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಹೊಸವರ್ಷ ಆಚರಣೆ ಸೆಂಟರ್ ಆಫ್ ಅಟ್ರಾಕ್ಷನ್ ಆಗಿರುತ್ತದೆ. ಸಂಭ್ರಮಾಚರಣೆ ಈ ಭಾಗದಲ್ಲಿ ಜೋರಾಗಿ ಇರುತ್ತದೆ. ಹೀಗಾಗಿ, ಇಲ್ಲಿ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ. ಆದರೆ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.
ಬೆಂಗಳೂರಲ್ಲಿ ಸೇರಲಿದ್ದಾರೆ 7 ಲಕ್ಷ ಜನ: ಇನ್ನು ಬೆಂಗಳೂರಲ್ಲಿ 7 ಲಕ್ಷ ಜನ ವರ್ಷಾಂತ್ಯ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸೇರುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ಸಂಭವಿಸಿತ್ತು. ಕೆಲವು ಮಹಿಳೆಯರಿಗೆ ಪುಂಡರು ಕಿರುಕುಳ ಕೊಟ್ಟಿದ್ದಾರೆ ಎನ್ನುವುದು ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಬಾರಿ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ. ಎಲ್ಲಾ ರೀತಿಯ ಭದ್ರತೆ ತೆಗೆದುಕೊಳ್ಳಬೇಕು ಒಂದೊಮ್ಮೆ ಯಾವುದಾದರೂ ತಪ್ಪು ಘಟನೆಗಳು ಇಲ್ಲಿ ನಡೆದರೆ ಆಯಾ ವಲಯದ ಡಿಸಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.












Click it and Unblock the Notifications