Get Updates
Get notified of breaking news, exclusive insights, and must-see stories!

New Year 2026: ಮಧ್ಯರಾತ್ರಿ 1ರವರೆಗೆ ಹೊಸ ವರ್ಷಾಚರಣೆಗೆ ಅವಕಾಶ, ಪಬ್‌ಗಳಿಗೆ ವಿಶೇಷ ಮಾರ್ಗಸೂಚಿ

ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ಇನ್ನು ಮೂರೇ ದಿನ ಬಾಕಿ ಇದೆ. ಬೆಂಗಳೂರಿನೆಲ್ಲೆಡೆ ಹೊಸ ವರ್ಷಾಚರಣೆಯನ್ನು ಅದ್ಧೂರಿಯಾಗಿ ತಯಾರಿಗಳು ನಡೆಯುತ್ತಿವೆ. ಪ್ರಮುಖವಾಗಿ ಎಂ.ಜಿ.ರಸ್ತೆ, ಚರ್ಚ್‌ ಸ್ಟ್ರೀಟ್‌, ಬ್ರಿಗೇಡ್‌ ರೋಡ್‌ಗಳಲ್ಲಿ ಸಂಭ್ರಮಾಚರಣೆಗೆ ಹೆಚ್ಚು ಜನ ಸೇರಲಿರುವ ಹಿನ್ನೆಲೆ ಬೆಂಗಳೂರು ಪೊಲೀಸರು ಈಗಿನಿಂದಲೇ ನಿಗಾ ಇಟ್ಟಿದ್ದಾರೆ. ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್‌ 31ರ ರಾತ್ರಿ 1ರವರೆಗೆ ಹೊಸ ವರ್ಷ ಆಚರಿಸಲು ಅನುಮತಿ ನೀಡಲಾಗಿದೆ.

ಹೊಸ ವರ್ಷದ ಆಚರಣೆಗೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆ ಬೆಂಗಳೂರು ನಗರದಾದ್ಯಂತ ಪೊಲೀಸ್‌ ಪಹರೆ ಹೆಚ್ಚಿಸಲಾಗಿದೆ. ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶ ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಕಾರ್ಯವು ಈಗಾಗಲೇ ಪ್ರಗತಿಯಲ್ಲಿದೆ.

New Year 2026 Bengaluru Allows Celebrations Till 1 AM Special Guidelines For Pubs

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಕೋರಮಂಗಲ ಪ್ರದೇಶದಲ್ಲಿ ಹೊಸ ವರ್ಷಾಚರಣೆಯ ಸಿದ್ಧತೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ್ದಾರೆ. ನಗರದಾದ್ಯಂತ ಶಾಂತಿಯುತ, ಸುರಕ್ಷಿತ ಮತ್ತು ಸುವ್ಯವಸ್ಥಿತ ಹೊಸ ವರ್ಷದ ಆಚರಣೆಗಳನ್ನು ಖಾತ್ರಿಪಡಿಸಲು ಬಂದೋಬಸ್ತ್ ಮಾಡಿರುವುದಾಗಿ ತಿಳಿಸಿದ್ದಾರೆ.

New Year 2026 Bengaluru Allows Celebrations Till 1 AM Special Guidelines For Pubs

ತುರ್ತು ಸಹಾಯಕ್ಕೆ QR ಕೋಡ್‌

ಹೊಸ ವರ್ಷ 2026ರ ಆಚರಣೆಗಳು ಎಲ್ಲರಿಗೂ ಉತ್ಸಾಹಪೂರ್ಣ, ಸುರಕ್ಷಿತ ಮತ್ತು ಶಾಂತಿಯುತವಾಗಿರುವಂತೆ ಖಚಿತಪಡಿಸಿಕೊಳ್ಳುವ ಉದ್ದೇಶದೊಂದಿಗೆ ಬಾರ್, ಪಬ್ ಮತ್ತು ರೆಸ್ಟೊರೆಂಟ್ ಮಾಲೀಕರೊಂದಿಗೆ ಸಮನ್ವಯ ಸಭೆ ನಡೆಸಲಾಗಿದೆ. ಹೊಸ ವರ್ಷದ ಆಚರಣೆಗೆ ಸಂಬಂಧಿಸಿದ ಸಲಹೆಗಳು, ಸೂಚನೆಗಳು ಹಾಗೂ ಕಾರ್ಯಕ್ರಮದ ಮಾಹಿತಿಯನ್ನು ಆನ್‌ಲೈನ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದ್ದು, ವಿವಿಧ ಸ್ಥಳಗಳಲ್ಲಿ ಕ್ಯೂಆರ್ ಕೋಡ್‌ಗಳನ್ನು ಅಂಟಿಸಲಾಗಿದೆ.

ಹೊಸ ವರ್ಷದ ಬಂದೋಬಸ್ತ್ ಸಿದ್ಧತೆಗಳ ಭಾಗವಾಗಿ ಕೋರಮಂಗಲ ಪ್ರದೇಶದಲ್ಲಿ ಬೈಕ್ ರೈಡ್ ಮೂಲಕ ಪರಿಶೀಲನೆ ನಡೆಸಲಾಗಿದ್ದು, ತುರ್ತು ಸಂದರ್ಭಗಳಲ್ಲಿ ಉಪಯೋಗಿಸಬಹುದಾದ ಕ್ಯೂಆರ್ ಕೋಡ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ. ಮೋಜು-ಮಸ್ತಿ ಕೆಟ್ಟ ಪರಿಣಾಮಗಳೊಂದಿಗೆ ಬರಬಾರದು. ಮಾದಕ ದ್ರವ್ಯಗಳು ನೀವು ಭಾವಿಸಿದ್ದಕ್ಕಿಂತ ಹೆಚ್ಚು ನಿಮ್ಮಿಂದ ಕಸಿಯುತ್ತವೆ. ಎಚ್ಚರಿಕೆಯಿಂದಿರಿ, ಮಾದಕ ದ್ರವ್ಯ ಬಳಕೆಯಿಂದ ದೂರವಿರಿ ಮತ್ತು ಅನುಮಾನಾಸ್ಪದ ಚಟುವಟಿಕೆಗಳನ್ನು ತಪ್ಪದೇ 112ಕ್ಕೆ ವರದಿ ಮಾಡಿ ಎಂದು ಪೊಲೀಸರು ಹೇಳಿದ್ದಾರೆ.

ಪಬ್‌ ಮಾಲೀಕರಿಗೆ ಮಾರ್ಗಸೂಚಿ

ಹೊಸ ವರ್ಷಾಚರಣೆಯ ಹಿನ್ನೆಲೆ ಪಬ್‌ ಮಾಲೀಕರಿಗೆ ಪೊಲೀಸ್‌ ಇಲಾಖೆಯಿಂದ ವಿಶೇಷ ಮಾರ್ಗಸೂಚಿ ಪ್ರಕಟಿಸಲಾಗಿದೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸೂಚನೆಗಳನ್ನು ನೀಡಲಾಗಿದೆ.

* ಸ್ಥಳದ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಪ್ರವೇಶ ಟಿಕೆಟ್ ಹಾಗೂ ಪಾಸ್ ವಿತರಿಸಬೇಕು.

* ಅಪ್ರಾಪ್ತರಿಗೆ ಮದ್ಯ ಪೂರೈಸುವಂತಿಲ್ಲ.

* ತಪಾಸಣೆ ಬಿಗಿಗೊಳಿಸಬೇಕು.

* ಪಟಾಕಿ ಸಿಡಿಸುವಂತಿಲ್ಲ.

* ಕಾನೂನು ಬಾಹಿರ ಪಾರ್ಟಿಗಳಿಗೆ ಅವಕಾಶ ಇಲ್ಲ.

* ಪ್ರಚೋದನಕಾರಿ ಹಾಡು ಹಾಕಬಾರದು.

* ಸಂಶಯಾಸ್ಪದ ವಸ್ತುಗಳು ಹಾಗೂ ವ್ಯಕ್ತಿಗಳು ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು.

* ವಿದ್ಯುತ್ ಸಂಪರ್ಕ ಕಡಿತವಾದ ವೇಳೆ ಪರ್ಯಾಯ ವಿದ್ಯುತ್ ಸಂಪರ್ಕ ವ್ಯವಸ್ಥೆ ಹೊಂದಿರಬೇಕು.

* ಪಬ್, ಕ್ಲಬ್ ಹಾಗೂ ರೆಸ್ಟೋರೆಂಟ್‌ಗಳ ವ್ಯವಸ್ಥಾಪಕರು, ಸಿಬ್ಬಂದಿಗಳು ಮದ್ಯಪಾನ ಮಾಡಿರಬಾರದು.

* ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು.

* ಕಾರ್ಯಕ್ರಮದ ಸ್ಥಳದಲ್ಲಿ ಅಗ್ನಿ ನಿರೋಧಕ ಉಪಕರಣ ಅಳವಡಿಸಬೇಕು.

* ಅಗ್ನಿ ಅವಘಡಗಳು ಹಾಗೂ ಕಾಲ್ತುಳಿತ ಸಂಭವಿಸದಂತೆ ಎಚ್ಚರ ವಹಿಸಬೇಕು.

* ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳದಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು.

* ಪ್ರವೇಶ ದ್ವಾರ, ನಿರ್ಗಮನ ದ್ವಾರ, ವಾಹನ ನಿಲುಗಡೆ ಸ್ಥಳ ಹಾಗೂ ಕಾರ್ಯಕ್ರಮದ ಸ್ಥಳಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಎಚ್ಚರ ವಹಿಸಬೇಕು.

* ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ದೃಶ್ಯಾವಳಿಗಳನ್ನು ಕನಿಷ್ಠ 30 ದಿನಗಳವರೆಗೆ ಸಂಗ್ರಹಿಸುವ ವ್ಯವಸ್ಥೆ ಮಾಡಬೇಕು.

ತಡರಾತ್ರಿ 1ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಿಶೇಷ ಸಾಂದರ್ಭಿಕ ಅಬಕಾರಿ ಸನ್ನದುದಾರ-ರಿಗೆ (ಸಿಎಲ್-5) ಡಿಸೆಂಬರ್‌ 31ರಂದು ಬೆಳಿಗ್ಗೆ 6ರಿಂದ ತಡರಾತ್ರಿ 1ರವರೆಗೆ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ ಕುಮಾರ್ ಸಿಂಗ್ ಅದೇಶ ಹೊರಡಿಸಿದ್ದಾರೆ. ಸಾಮಾನ್ಯ ದಿನಗಳಲ್ಲಿ ಬೆಳಿಗ್ಗೆ 10.30ರಿಂದ ರಾತ್ರಿ 12ರವರೆಗೆ ಮಾತ್ರ ಮದ್ಯದ ವಹಿವಾಟಿಗೆ ಅವಕಾಶವಿದೆ. ಆದರೆ ಹೊಸ ವರ್ಷಾಚರಣೆಗಾಗಿ ಬುಧವಾರ ಮದ್ಯದ ವಹಿವಾಟಿಗೆ ಸಮಯವನ್ನು ವಿಸ್ತರಣೆ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+