New Year 2026: ಮಧ್ಯರಾತ್ರಿ 1ರವರೆಗೆ ಹೊಸ ವರ್ಷಾಚರಣೆಗೆ ಅವಕಾಶ, ಪಬ್ಗಳಿಗೆ ವಿಶೇಷ ಮಾರ್ಗಸೂಚಿ
ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ಇನ್ನು ಮೂರೇ ದಿನ ಬಾಕಿ ಇದೆ. ಬೆಂಗಳೂರಿನೆಲ್ಲೆಡೆ ಹೊಸ ವರ್ಷಾಚರಣೆಯನ್ನು ಅದ್ಧೂರಿಯಾಗಿ ತಯಾರಿಗಳು ನಡೆಯುತ್ತಿವೆ. ಪ್ರಮುಖವಾಗಿ ಎಂ.ಜಿ.ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್ಗಳಲ್ಲಿ ಸಂಭ್ರಮಾಚರಣೆಗೆ ಹೆಚ್ಚು ಜನ ಸೇರಲಿರುವ ಹಿನ್ನೆಲೆ ಬೆಂಗಳೂರು ಪೊಲೀಸರು ಈಗಿನಿಂದಲೇ ನಿಗಾ ಇಟ್ಟಿದ್ದಾರೆ. ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 1ರವರೆಗೆ ಹೊಸ ವರ್ಷ ಆಚರಿಸಲು ಅನುಮತಿ ನೀಡಲಾಗಿದೆ.
ಹೊಸ ವರ್ಷದ ಆಚರಣೆಗೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆ ಬೆಂಗಳೂರು ನಗರದಾದ್ಯಂತ ಪೊಲೀಸ್ ಪಹರೆ ಹೆಚ್ಚಿಸಲಾಗಿದೆ. ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶ ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಕಾರ್ಯವು ಈಗಾಗಲೇ ಪ್ರಗತಿಯಲ್ಲಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಕೋರಮಂಗಲ ಪ್ರದೇಶದಲ್ಲಿ ಹೊಸ ವರ್ಷಾಚರಣೆಯ ಸಿದ್ಧತೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ್ದಾರೆ. ನಗರದಾದ್ಯಂತ ಶಾಂತಿಯುತ, ಸುರಕ್ಷಿತ ಮತ್ತು ಸುವ್ಯವಸ್ಥಿತ ಹೊಸ ವರ್ಷದ ಆಚರಣೆಗಳನ್ನು ಖಾತ್ರಿಪಡಿಸಲು ಬಂದೋಬಸ್ತ್ ಮಾಡಿರುವುದಾಗಿ ತಿಳಿಸಿದ್ದಾರೆ.

ತುರ್ತು ಸಹಾಯಕ್ಕೆ QR ಕೋಡ್
ಹೊಸ ವರ್ಷ 2026ರ ಆಚರಣೆಗಳು ಎಲ್ಲರಿಗೂ ಉತ್ಸಾಹಪೂರ್ಣ, ಸುರಕ್ಷಿತ ಮತ್ತು ಶಾಂತಿಯುತವಾಗಿರುವಂತೆ ಖಚಿತಪಡಿಸಿಕೊಳ್ಳುವ ಉದ್ದೇಶದೊಂದಿಗೆ ಬಾರ್, ಪಬ್ ಮತ್ತು ರೆಸ್ಟೊರೆಂಟ್ ಮಾಲೀಕರೊಂದಿಗೆ ಸಮನ್ವಯ ಸಭೆ ನಡೆಸಲಾಗಿದೆ. ಹೊಸ ವರ್ಷದ ಆಚರಣೆಗೆ ಸಂಬಂಧಿಸಿದ ಸಲಹೆಗಳು, ಸೂಚನೆಗಳು ಹಾಗೂ ಕಾರ್ಯಕ್ರಮದ ಮಾಹಿತಿಯನ್ನು ಆನ್ಲೈನ್ ವೆಬ್ಸೈಟ್ನಲ್ಲಿ ಒದಗಿಸಲಾಗಿದ್ದು, ವಿವಿಧ ಸ್ಥಳಗಳಲ್ಲಿ ಕ್ಯೂಆರ್ ಕೋಡ್ಗಳನ್ನು ಅಂಟಿಸಲಾಗಿದೆ.
ಹೊಸ ವರ್ಷದ ಬಂದೋಬಸ್ತ್ ಸಿದ್ಧತೆಗಳ ಭಾಗವಾಗಿ ಕೋರಮಂಗಲ ಪ್ರದೇಶದಲ್ಲಿ ಬೈಕ್ ರೈಡ್ ಮೂಲಕ ಪರಿಶೀಲನೆ ನಡೆಸಲಾಗಿದ್ದು, ತುರ್ತು ಸಂದರ್ಭಗಳಲ್ಲಿ ಉಪಯೋಗಿಸಬಹುದಾದ ಕ್ಯೂಆರ್ ಕೋಡ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ. ಮೋಜು-ಮಸ್ತಿ ಕೆಟ್ಟ ಪರಿಣಾಮಗಳೊಂದಿಗೆ ಬರಬಾರದು. ಮಾದಕ ದ್ರವ್ಯಗಳು ನೀವು ಭಾವಿಸಿದ್ದಕ್ಕಿಂತ ಹೆಚ್ಚು ನಿಮ್ಮಿಂದ ಕಸಿಯುತ್ತವೆ. ಎಚ್ಚರಿಕೆಯಿಂದಿರಿ, ಮಾದಕ ದ್ರವ್ಯ ಬಳಕೆಯಿಂದ ದೂರವಿರಿ ಮತ್ತು ಅನುಮಾನಾಸ್ಪದ ಚಟುವಟಿಕೆಗಳನ್ನು ತಪ್ಪದೇ 112ಕ್ಕೆ ವರದಿ ಮಾಡಿ ಎಂದು ಪೊಲೀಸರು ಹೇಳಿದ್ದಾರೆ.
ಪಬ್ ಮಾಲೀಕರಿಗೆ ಮಾರ್ಗಸೂಚಿ
ಹೊಸ ವರ್ಷಾಚರಣೆಯ ಹಿನ್ನೆಲೆ ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ವಿಶೇಷ ಮಾರ್ಗಸೂಚಿ ಪ್ರಕಟಿಸಲಾಗಿದೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸೂಚನೆಗಳನ್ನು ನೀಡಲಾಗಿದೆ.
* ಸ್ಥಳದ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಪ್ರವೇಶ ಟಿಕೆಟ್ ಹಾಗೂ ಪಾಸ್ ವಿತರಿಸಬೇಕು.
* ಅಪ್ರಾಪ್ತರಿಗೆ ಮದ್ಯ ಪೂರೈಸುವಂತಿಲ್ಲ.
* ತಪಾಸಣೆ ಬಿಗಿಗೊಳಿಸಬೇಕು.
* ಪಟಾಕಿ ಸಿಡಿಸುವಂತಿಲ್ಲ.
* ಕಾನೂನು ಬಾಹಿರ ಪಾರ್ಟಿಗಳಿಗೆ ಅವಕಾಶ ಇಲ್ಲ.
* ಪ್ರಚೋದನಕಾರಿ ಹಾಡು ಹಾಕಬಾರದು.
* ಸಂಶಯಾಸ್ಪದ ವಸ್ತುಗಳು ಹಾಗೂ ವ್ಯಕ್ತಿಗಳು ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು.
* ವಿದ್ಯುತ್ ಸಂಪರ್ಕ ಕಡಿತವಾದ ವೇಳೆ ಪರ್ಯಾಯ ವಿದ್ಯುತ್ ಸಂಪರ್ಕ ವ್ಯವಸ್ಥೆ ಹೊಂದಿರಬೇಕು.
* ಪಬ್, ಕ್ಲಬ್ ಹಾಗೂ ರೆಸ್ಟೋರೆಂಟ್ಗಳ ವ್ಯವಸ್ಥಾಪಕರು, ಸಿಬ್ಬಂದಿಗಳು ಮದ್ಯಪಾನ ಮಾಡಿರಬಾರದು.
* ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು.
* ಕಾರ್ಯಕ್ರಮದ ಸ್ಥಳದಲ್ಲಿ ಅಗ್ನಿ ನಿರೋಧಕ ಉಪಕರಣ ಅಳವಡಿಸಬೇಕು.
* ಅಗ್ನಿ ಅವಘಡಗಳು ಹಾಗೂ ಕಾಲ್ತುಳಿತ ಸಂಭವಿಸದಂತೆ ಎಚ್ಚರ ವಹಿಸಬೇಕು.
* ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳದಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು.
* ಪ್ರವೇಶ ದ್ವಾರ, ನಿರ್ಗಮನ ದ್ವಾರ, ವಾಹನ ನಿಲುಗಡೆ ಸ್ಥಳ ಹಾಗೂ ಕಾರ್ಯಕ್ರಮದ ಸ್ಥಳಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಎಚ್ಚರ ವಹಿಸಬೇಕು.
* ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ದೃಶ್ಯಾವಳಿಗಳನ್ನು ಕನಿಷ್ಠ 30 ದಿನಗಳವರೆಗೆ ಸಂಗ್ರಹಿಸುವ ವ್ಯವಸ್ಥೆ ಮಾಡಬೇಕು.
ತಡರಾತ್ರಿ 1ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಿಶೇಷ ಸಾಂದರ್ಭಿಕ ಅಬಕಾರಿ ಸನ್ನದುದಾರ-ರಿಗೆ (ಸಿಎಲ್-5) ಡಿಸೆಂಬರ್ 31ರಂದು ಬೆಳಿಗ್ಗೆ 6ರಿಂದ ತಡರಾತ್ರಿ 1ರವರೆಗೆ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅದೇಶ ಹೊರಡಿಸಿದ್ದಾರೆ. ಸಾಮಾನ್ಯ ದಿನಗಳಲ್ಲಿ ಬೆಳಿಗ್ಗೆ 10.30ರಿಂದ ರಾತ್ರಿ 12ರವರೆಗೆ ಮಾತ್ರ ಮದ್ಯದ ವಹಿವಾಟಿಗೆ ಅವಕಾಶವಿದೆ. ಆದರೆ ಹೊಸ ವರ್ಷಾಚರಣೆಗಾಗಿ ಬುಧವಾರ ಮದ್ಯದ ವಹಿವಾಟಿಗೆ ಸಮಯವನ್ನು ವಿಸ್ತರಣೆ ಮಾಡಲಾಗಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications