'New Year 2026: ಹೊಸ ವರ್ಷಾಚರಣೆ ಭದ್ರತೆಗೆ 20,000 ಖಾಕಿ ಕಣ್ಗಾವಲು, ಮೊದಲ ಬಾರಿಗೆ ಹೀಟ್ ಮ್ಯಾಪ್'
ಬೆಂಗಳೂರು: ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಪೊಲೀಸರಿಗೆ ಅಗತ್ಯ ಸೂಚನೆ ನೀಡಲಾಗಿದೆ. ಇದೇ ವರ್ಷ ಮೊದಲ ಬಾರಿಗೆ 'ಹೀಟ್ ಮ್ಯಾಪ್' ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಏನಿದು 'ಹೀಟ್ ಮ್ಯಾಪ್'?
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಸಚಿವರು ಭಾನುವಾರ ನಡೆಸಿದರು. 2026ರ ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಬಿಗಿ ಭದ್ರತೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಿದರು. ನಗರದಲ್ಲಿ 20,000 ಪೊಲೀಸರನ್ನು ನಿಯೋಜಿಸಲಾಗಿದೆ ಎಂದರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಏನಿದು ಹೀಟ್ ಮ್ಯಾಪ್?
ಹೊಸ ವರ್ಷಾಚರಣೆ ಸಂಭ್ರಮದ ಸಂದರ್ಭದಲ್ಲ ಆಂಬುಲೆನ್ಸ್, ವಾಹನಗಳು, ಟ್ರಾಫಿಕ್ ಸಮಸ್ಯೆ ಸೇರಿದಂತೆ ಜನಗಳಿಗೆ ಮಾಹಿತಿ ಸಿಗಲು ಕ್ಯೂಆರ್ ಕೋಡ್ ಪರಿಚಯಿಸಲಾಗಿದೆ. ಕ್ಯೂಆರ್ ಕೋಡ್ ಮೂಲಕ ಮಾಹಿತಿ ಪಡೆಯಬಹುದು. ಇದೇ ಮೊದಲ ಬಾರಿಗೆ 'ಹೀಟ್ ಮ್ಯಾಪ್' ಮಾಡಲಾಗಿದೆ. ಅತೀ ಹೆಚ್ಚು ಜನ ಸೇರಿರುವ ಸ್ಥಳಗಳನ್ನು ಕೆಂಪು ಬಣ್ಣದಿಂದ ಗುರುತಿಸಲಾಗುತ್ತದೆ. ಹಳದಿ ಬಣ್ಣದಿಂದ ಗುರುತಿಸುವ ಸ್ಥಳಗಳನ್ನು ಹೆಚ್ಚಿನ ಜನ ಸೇರುತ್ತಿರುವುದನ್ನು ಸೂಚಿಸುತ್ತದೆ.
ಇನ್ನೂ ಹಸಿರು ಬಣ್ಣ ಇರುವುದು ಕಡಿಮೆ ಜನ ಇರುವುದನ್ನು ಗುರುತಿಸಬಹುದು. ಇದನ್ನು ಕಮಾಂಡ್ ಸೆಂಟರ್‌ನಿಂದ ನಿಗಾವಹಿಸಲಾಗುತ್ತದೆ. ಇದನ್ನು ಆಧರಿಸಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಜನರ ದಟ್ಟಣೆ ನಿಯಂತ್ರಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನಾದ್ಯಂತ 20 ಸಾವಿರ ಖಾಕಿ ನಿಯೋಜನೆ
ನಗರದಲ್ಲಿ ಹೊಸ ಸಂಭ್ರಮಾಚರಣೆಯ ಕರ್ತವ್ಯಕ್ಕೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ 14 ಸಾವಿರ ಪೊಲೀಸರು, 2500 ಟ್ರಾಫಿಕ್ ಪೊಲೀಸರು, 88 ಕೆಎಸ್ಆರ್‌ಪಿ ಪ್ಲಟೂನ್ಸ್, 21 ಸಿಎಆರ್, 266 ಹೋಯ್ಸಳ ವಾಹನ, 250 ಕೋಬ್ರ ವಾಹನಗಳನ್ನು ನಿಯೋಜಿಸಲಾಗುತ್ತಿದೆ. 400 ಟ್ರಾಫಿಕ್ ವಾರ್ಡನ್‌ಗಳನ್ನು ನಿಯೋಜಿಸಲಾಗಿದೆ. ಜನ ದಟ್ಟಣೆ ನಿಯಂತ್ರಿಸಲು ವಾಟರ್ ಜೆಟ್ಸ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಸಿವಿಲ್ ಡಿಫೆನ್ಸ್, ಹೋಮ್ ಗಾರ್ಡ್ಸ್ ಸೇರಿದಂತೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಅವರು ಹೇಳಿದರು.

ಹೊಸ ವರ್ಷದ ಆಚರಣೆಯಲ್ಲಿ ಹೆಚ್ಚಿನ ಜನ ಭಾಗವಹಿಸುತ್ತಿದ್ದಾರೆ. ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯನ್ನು ಹೆಚ್ಚು ಜನ ಸೇರುವ ಸ್ಥಳಗಳೆಂದು ಗುರುತಿಸಲಾಗಿದೆ. ಕಳೆದ ವರ್ಷ 8 ಲಕ್ಷಕ್ಕು ಹೆಚ್ಚು ಜನರು ಹೊಸ ವರ್ಷವನ್ನು ಸ್ವಾಗತಿಸಿ ಆಚರಣೆಗಳಲ್ಲಿ ಪಾಲ್ಗೊಂಡಿದ್ದರು. ಹಿಂದಿನ ವರ್ಷದ ಅನುಭವದ ಮೇಲೆ ಈ ಸ್ಥಳಗಳನ್ನು ಗುರುತಿಸಲಾಗಿದೆ. ಹಿಂದಿನ ವರ್ಷಕ್ಕಿಂತ ಹೆಚ್ಚು ಜನ ಸೇರಬಹುದು ಎಂದು ಅಂದಾಜಿಸಲಾಗಿದ್ದು, ಸುಮಾರು 10 ಲಕ್ಷಕ್ಕು ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.
ಭದ್ರತೆ, ಸುರಕ್ಷೆತೆಗೆ ಏನೆಲ್ಲ ಕ್ರಮವಹಿಸಲಾಗಿದೆ?
ಜನರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು ಅನುವು ಮಾಡಿಕೊಡಲಾಗುವುದು. ಬಾರ್ ಆ್ಯಂಡ್ ರೆಸ್ಟೋರೆಂಟ್, ಮೆಟ್ರೋ ಕಾರಿಡಾರ್, ಮನರಂಜನಾ ಸ್ಥಳಗಳಲ್ಲಿ ಹೆಚ್ಚಿನ ರೀತಿಯಲ್ಲಿ ಯುವಕ-ಯುವತಿಯರು ಸೇರಲಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅವಶ್ಯಕತೆ ಇರುವ ಸ್ಥಳಗಳಲ್ಲಿ ವಾಚ್ ಟವರ್, 180 ಕಡೆ ಫೋಕಸ್ ಲೈಟ್‌ಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ಪೊಲೀಸ್ ಆ್ಯಕ್ಸಿಸ್ ಕಂಟ್ರೋಲ್, ವಾಹನ ತಪಾಸಣೆ ವ್ಯವಸ್ಥೆ ಮಾಡಲಾಗಿದೆ. ಟ್ಯಾಕ್ಸಿಗಳು ಸಿಗುವುದಿಲ್ಲ. ಅಂತವರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು 8 ಕಡೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಗುರುತಿಸಲಾದ ಸಂಭ್ರಮಾಚರಣೆ ನಡೆಯುವ ಸ್ಥಳಗಳಲ್ಲಿ 250 ಕಡೆ ತಾತ್ಕಲಿಕವಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಸೇಫ್ಟಿ ಶೆಲ್ಟರ್‌ಗಳು, ಆಂಬುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದೆ. ಜನದಟ್ಟಣೆಯ ಮೇಲೆ ಡ್ರೋನ್ ಕ್ಯಾಮೆರಾಗಳಿಂದ ಪೊಲೀಸರು ನಿಗಾವಹಿಸಲಿದ್ದಾರೆ ಎಂದರು.
ಮಹಿಳಾ ಸುರಕ್ಷತೆ ಮತ್ತು ಜನಸಂದಣಿ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಲಾಗುವುದು. ಈಗಾಗಲೇ ಬಾರ್, ರೆಸ್ಟೋರೆಂಟ್, ಮಾಲ್‌ಗಳ ಮಾಲೀಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಡಿಜಿಪಿ ಅವರು 15 ಅಂಶಗಳ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಟೆರರಿಸ್ಟ್ ದೃಷ್ಟಿಯಿಂದಲೂ ಹೆಚ್ಚಿನ ಭದ್ರೆತೆಗೆ ಒತ್ತು ನೀಡಲಾದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿ, ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಮೇಲೆ ಗಮನ ಹರಿಸಿದ್ದಾರೆ.
ಪಾನಮತ್ತ ಚಾಲನೆ ಮಾಡಿದರೆ ಹುಷಾರ್!
ಮುಖಚರ್ಯೆ ಗುರುತಿಸುವ ಆಧುನಿಕ ಎಐ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಅಪರಾಧ ಚಟುವಟಿಕೆ ಹಿನ್ನೆಲೆಯುಳ್ಳವರ ಮಾಹಿತಿ ಫೇಸ್ ರೆಕಾಗ್ನೈಸೇಷನ್ ಎಐ ಕ್ಯಾಮೆರಾದಿಂದ ಗೊತ್ತಾಗಲಿದೆ. ಅಂಥವರು ಕಂಡು ಬಂದರೆ ಕೂಡಲೇ ಎಚ್ಚರಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಅನುಕೂಲವಾಗುತ್ತದೆ. ಕಳೆದ ಐದು ದಿನದಿಂದ ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. 2854 ಸವಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಮಾಹಿತಿ ಕೊಟ್ಟರು.
ಹೊಸ ವರ್ಷವನ್ನು ಜವಾಬ್ದಾರಿಯಿಂದ ಸಂಭ್ರಮಾಚರಣೆ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ನಿಮ್ಮ ಮನೆಯ ಯುವಕರು, ಮನೆಯಿಂದ ಹೊರ ಹೋದ ಬಳಿಕ ವಾಪಸ್ ಮನೆಗೆ ಬರುವವರೆಗೂ ಅವರ ಬಗ್ಗೆ ನಿಗಾ ವಹಿಸಬೇಕೆಂದು ಸಚಿವರು ಸಾರ್ವಜನಿಕರಲ್ಲಿ ಕೋರಿದ್ದಾರೆ.
58 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ ಸತ್ಯಕ್ಕೆ ದೂರ
ಹೊಸ ವರ್ಷ ಸಮೀಪಿಸುತ್ತಿರುವುದರಿಂದ ಡ್ರಗ್ಸ್ ದಂಧೆಯ ವಿರುದ್ಧ ಅಕ್ಟೋಬರ್, ನವೆಂಬರ್ ತಿಂಗಳಿಂದ ಪೊಲೀಸರು ರಾಜ್ಯದಾದ್ಯಂತ ಹೆಚ್ಚಿನ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಇದೇ ವೇಳೆ
58 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡೆಸಿಕೊಂಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾಹಿತಿ. ಪತ್ತೆಯಾಗಿರುವ ಡ್ರಗ್ಸ್ ಕೆಮಿಕಲ್ ಮೌಲ್ಯ 1 ಕೆಜಿಗೆ 30 ಲಕ್ಷ ರೂ. ಬೆಲೆ ಬಾಳುತ್ತದೆ. ಒಟ್ಟು 4 ಕೆಜಿಗೆ 1.20 ಕೋಟಿ ರೂ. ಮೌಲ್ಯವಾಗುತ್ತದೆ ಎಂದ ಅವರು ಹೇಳಿದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications