ಹೊಸ ವರ್ಷ 2026: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಈ ಭಾಗದ ಅಧಿಕಾರಿ, ಸಿಬ್ಬಂದಿಗೆ ರಜೆ ಇಲ್ಲ
ಬೆಂಗಳೂರು: ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಈಗಾಗಲೇ ಸಕಲ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದೆ. ಬೆಂಗಳೂರು ಪೊಲೀಸರು ಕಳೆದ ವರ್ಷ ಆಗಿದ್ದ ಕೆಲವೊಂದು ನ್ಯೂನ್ಯತೆ ಅಥವಾ ಸಮಸ್ಯೆ ಆಗಿದ್ದ ಪ್ರದೇಶಗಳಲ್ಲಿ ಈ ವರ್ಷ ಇನ್ನಷ್ಟು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದಾರೆ. ಈ ಬಾರಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹ ಕೈ ಜೋಡಿಸಿದ್ದಾರೆ. ಇದರಿಂದ ಪ್ರಮುಖ ಭಾಗಗಳಲ್ಲಿ ಜಿಬಿಎಗೆ ಸಿಬ್ಬಂದಿಗೆ ಹೊಸ ವರ್ಷದಂದು ರಜೆ ಇರುವುದಿಲ್ಲ. ಅದರ ವಿವರ ಇಲ್ಲಿದೆ.
ಬೆಂಗಳೂರಿನ ಎಂ.ಜಿ ರಸ್ತೆ, ಇಂದಿರಾ ನಗರ ಹಾಗೂ ಕೋರಮಂಗಲ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಇಂದು ರಾತ್ರಿ (ಡಿಸೆಂಬರ್ 31) ಭರ್ಜರಿ ಸಂಭ್ರಮಾಚರಣೆ ನಡೆಯಲಿದೆ. ಹೀಗಾಗಿ, ಬೆಂಗಳೂರು ಪೊಲೀಸರೊಂದಿಗೆ ಈ ಬಾರಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವೂ ಎಂದಿನಂತೆ ಕೈಜೋಡಿಸಿದೆ. ಈ ಬಾರಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಹಾಗೂ ಆ್ಯಂಬುಲೆನ್ಸ್ ಸೇವೆ ಸೇರಿದಂತೆ ಹಲವು ಸೇವೆಗಳನ್ನು ಕಲ್ಪಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದಲೂ ಸಹಕಾರ
ಬೆಂಗಳೂರಿನ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಇಂದಿರಾನಗರ ಸೇರಿದಂತೆ ಅತೀ ಮುಖ್ಯ ಪುದೇಶದ ರಸ್ತೆಗಳಲ್ಲಿ 2026ನೇ ಸಾಲಿನ ಹೊಸ ವರ್ಷದ ಆಚರಣೆಯ ಅಂಗವಾಗಿ ಮುನ್ನೇಚ್ಚರಿಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ತಿಳಿಸಿದೆ. ಶಾಂತಿನಗರ, ಸಿ. ವಿ. ರಾಮನ್ನಗರ ವಿಭಾಗದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ ಸೇರಿದಂತೆ ಅತೀ ಮುಖ್ಯ ಪ್ರದೇಶದ ರಸ್ತೆಗಳಲ್ಲಿ 2026ನೇ ಸಾಲಿನ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಪಬ್, ಕ್ಲಬ್, ಮನೋರಂಜನಾ ಸ್ಥಳಗಳಲ್ಲಿ ಅತೀ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸಾಧ್ಯತೆ ಇರುವುದರಿಂದ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ, ಪೊಲೀಸ್ ಇಲಾಖೆಯವರು ಸೂಚಿಸಿರುವ ಸ್ಥಳಗಳಲ್ಲಿ ಅವಶ್ಯಕ ಬ್ಯಾರೀಕೆಡ್ ಮತ್ತು ಹೆಚ್ಚಿನ ಸಂಖ್ಯೆಗಳಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ ಹಾಗೂ ಇತರೆ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಜಿಬಿಎ ಸಿಬ್ಬಂದಿಗೆ ರಜೆ ಇಲ್ಲ
ಇನ್ನು ಈ ಸಂದರ್ಭದಲ್ಲಿ ಯಾವುದೇ ಲೋಪ - ದೋಷ ಆಗದಂತೆ, ಸುರಕ್ಷತೆ ದೃಷ್ಟಿಯಿಂದ ಪೊಲೀಸ್ ಅಧಿಕಾರಿಗಳು ಕೋರುವ ಅಗತ್ಯ ಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸುವಂತೆ ಸೂಚಿಸಲಾಗಿದೆ. ಡಿಸೆಂಬರ್ 31ರ ರಾತ್ರಿ ಸಹಾಯಕ ಕಾರ್ಯಪಾಲಕ , ಸಹಾಯಕ ಹಾಗೂ ಕಿರಿಯ ಎಂಜಿನಿಯರರು ಖುದ್ದು ಹಾಜರಿರಲು ಹಾಗೂ ಈ ದಿನ ನಿಮ್ಮ ಅಧೀನದ ಸಿಬ್ಬಂದಿ ರಜೆ ನೀಡದಿರಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಚಾಲಕರು ಮತ್ತು ಆ್ಯಂಬುಲೆನ್ಸ್ ಸೇವೆ
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಪತ್ರದ ಮೇರೆಗೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಆ್ಯಂಬುಲೆನ್ಸ್ ಸೇವೆ ನೀಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ 31-12-2025ರ ಸಂಜೆಯಿಂದ 01-01-2026ರ ಮುಂಜಾನೆಯ ವರೆಗೆ ನೂತನ ವರ್ಷಾರಂಭ ಆಚರಣೆ ಪ್ರಯುಕ್ತ ಹೆಚ್ಚಿನ ಸಾರ್ವಜನಿಕರು ಆಗಮಿಸುವ ಸಂಭವವಿರುವುದರಿಂದ ತುರ್ತು ವೈದ್ಯಕೀಯ ಚಿಕಿತ್ಸೆಯ ಮುಂಜಾಗ್ರತಾ ಕ್ರಮವಾಗಿ ಚಾಲಕರು ಮತ್ತು ಆ್ಯಂಬುಲೆನ್ಸ್ ಗಳನ್ನು ನಿಯೋಜಿಸಿ ಆದೇಶಿಸಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications