ಹೊಸ ವರ್ಷ ಹಿನ್ನೆಲೆ ಈ ದಿನ ಬೆಂಗಳೂರಿನಲ್ಲಿ ಉದ್ಯಾನವನಗಳು ಸೇರಿದಂತೆ ಪ್ರೇಕ್ಷಣೀಯ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
New Year 2026: ಇನ್ನೆರಡು ದಿನಗಳಲ್ಲಿ 2025 ಮುಗಿಯಲಿದ್ದು, 2026ರ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಜನರು ಕಾತರದಿಂದ ಕಾದಿದ್ದಾರೆ. ಹೊಸ ವರ್ಷ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉದ್ಯಾನವನಗಳು, ಕೆರೆಗಳು ಸೇರಿದಂತೆ ಪ್ರೇಕ್ಷಣೀಯ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ. ಹಾಗಾದ್ರೆ ದಿನಾಂಕ ಹಾಗೂ ಸಮಯಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಹೊಸ ವರ್ಷ ಬಂತೆಂದರೆ ಸಾಕು ನಗರದಲ್ಲಿ ಉದ್ಯಾನವನಗಳು, ಪ್ರೇಕ್ಷಣಿಕ ಸ್ಥಳಗಳಿಗೆ ಸಾರ್ವಜನಿಕರ ದಂಡೇ ಹರಿದುಬರುತ್ತದೆ. ಅದರಲ್ಲೂ ಡಿಸೆಂಬರ್ 31ರ ರಾತ್ರಿ ಭೇಟಿ ನೀಡುವವರೇ ಹೆಚ್ಚಿದ್ದು, ಈ ವೇಳೆ ಅಹಿತಕರ ಘಟನೆಗಳು ಹಾಗೂ ಸಾರ್ವಜನಿಕ ಶಾಂತಿ ಭಂಗವಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಈ ಮಹತ್ವದ ನಿರ್ಧಾರವನ್ನು ಪಾಲಿಕೆ ತೆಗೆದುಕೊಂಡಿದೆ.

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ 2025ರ ಡಿಸೆಂಬರ್ 31ರ ರಾತ್ರಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಟ್ಟಾಗಿ ಸೇರುವ ಸಾಧ್ಯತೆ ಇರುತ್ತದೆ. ಇದರಿಂದಾಗಿ ಯಾವುದೇ ಅಹಿತಕರ ಘಟನೆಗಳು ಹಾಗೂ ಸಾರ್ವಜನಿಕ ಶಾಂತಿ ಭಂಗವಾಗುವ ಸಂಭವವಿರುವುದರಿಂದ, ಸಾರ್ವಜನಿಕ ಸುರಕ್ಷಯಿಂದಾಗಿ ಉದ್ಯಾನವನಗಳು ಮತ್ತು ಕೆರೆಗಳಿಗೆ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.
ಪ್ರವೇಶ ನಿರ್ಬಂಧ: ಡಿಸೆಂಬರ್ 31, 2025ರ ಸಂಜೆ 6 ಗಂಟೆಯ ಬಳಿಕ ಪಾಲಿಕೆಗೆ ಸೇರಿದ ಎಲ್ಲಾ ಉದ್ಯಾನವನಗಳು ಮತ್ತು ಕೆರೆಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಿ, ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ ಎಂದು ಅಪರ ಆಯುಕ್ತ ಅವರ ಕಚೇರಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪೊಲೀಸ್ ಆಯುಕ್ತರು ಹೇಳಿದ್ದೇನು?: ಈ ನಡುವೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಶುಕ್ರವಾರ ನಗರದಾದ್ಯಂತ ಕಾರ್ಯಕ್ರಮ ನಡೆಯುವ ಸ್ಥಳಗಳ ಮಾಲೀಕರೊಂದಿಗೆ ಸಮನ್ವಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದವರಲ್ಲಿ ಪಬ್‌ಗಳು, ಬಾರ್‌ಗಳು, ಕ್ಲಬ್‌ಗಳು, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಮಾಲೀಕರು ಸೇರಿದ್ದರು. ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 31ರಂದು ಆಚರಣೆಯ ಸಮಯದಲ್ಲಿ ಸಾರ್ವಜನಿಕ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಚರ್ಚೆ ನಡೆಸಿದರು.
ಸಂಘಟಕರಿಗೆ ಪ್ರಮುಖ ಸೂಚನೆಗಳು: ಎಲ್ಲಾ ಸಂಘಟಕರು ಸಂಬಂಧಪಟ್ಟ ಅಧಿಕಾರಿಗಳಿಂದ ಕಡ್ಡಾಯ ಅನುಮತಿಗಳನ್ನು ಪಡೆಯಬೇಕು ಮತ್ತು ನಿಗದಿಪಡಿಸಿದ ಷರತ್ತುಗಳನ್ನು ಪಾಲಿಸಬೇಕು ಎಂದು ಆಯುಕ್ತರು ಒತ್ತಿ ಹೇಳಿದರು. ಹೊಸ ವರ್ಷದ ಕಾರ್ಯಕ್ರಮಗಳಿಗೆ ನಿಗದಿತ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಶಬ್ದ ವ್ಯವಸ್ಥೆಗಳ ಬಳಕೆಗೆ ಪ್ರತ್ಯೇಕ ಅನುಮತಿ ಅಗತ್ಯವಿದೆ. ಶಬ್ದದ ಮಟ್ಟಗಳು ಮಿತಿಗಳನ್ನು ಮೀರಬಾರದು ಎಂದು ತಿಳಿಸಲಾಗಿದೆ.
ಸ್ಥಳದ ಮಾಲೀಕರಿಗೆ ಅನುಮೋದಿತ ಸಾಮರ್ಥ್ಯದ ಪ್ರಕಾರ, ಪ್ರವೇಶ ಟಿಕೆಟ್‌ಗಳನ್ನು ಕಟ್ಟುನಿಟ್ಟಾಗಿ ನೀಡುವಂತೆ ಮತ್ತು ಯಾವುದೇ ಸಂದರ್ಭಗಳಲ್ಲಿ ಅಪ್ರಾಪ್ತ ವಯಸ್ಕರಿಗೆ ಮದ್ಯವನ್ನು ನೀಡದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಭದ್ರತೆಗಾಗಿ, ಎಲ್ಲಾ ಪ್ರವೇಶದಾರರ ಸಂಪೂರ್ಣ ತಪಾಸಣೆಯನ್ನು ಕಡ್ಡಾಯಗೊಳಿಸಲಾಯಿತು. ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ವಸ್ತುಗಳನ್ನು ತಕ್ಷಣ ಪೊಲೀಸರಿಗೆ ವರದಿ ಮಾಡಲು ನಿರ್ದೇಶನಗಳನ್ನು ನೀಡಲಾಯಿತು.
ಕಾಲ್ತುಳಿತ ತಡೆಗಟ್ಟುವ ಕ್ರಮಗಳ ಜೊತೆಗೆ ಅಗ್ನಿಶಾಮಕ ಸುರಕ್ಷತಾ ಸಾಧನಗಳನ್ನು ತಪ್ಪದೆ ಅಳವಡಿಸಬೇಕು.
ಕಾರ್ಯಕ್ರಮಗಳ ಸಮಯದಲ್ಲಿ ಯಾವುದೇ ವಿದ್ಯುತ್ ಕಡಿತವನ್ನು ನಿರ್ವಹಿಸಲು ಸಾಕಷ್ಟು ಬ್ಯಾಕಪ್ ವಿದ್ಯುತ್ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಸಂಘಟಕರಿಗೆ ತಿಳಿಸಲಾಯಿತು. ಹೀಗೆ ಹೊಸ ವರ್ಷದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications