ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ 15 ಸಾವಿರ ಪೊಲೀಸರ ಪಹರೆ!

Recommended Video

      ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ : 15 ಸಾವಿರ ಪೋಲೀಸರ ಪಹರೆ | Oneindia Kannada

      ಬೆಂಗಳೂರು, ಡಿಸೆಂಬರ್ 28 : ಕಳೆದ ವರ್ಷ ವರ್ಷಾಚರಣೆ ವೇಳೆ ನಡೆದ ಕಹಿ ಘಟನೆಗಳಿಂದ ಎಚ್ಚೆತ್ತಿರುವ ಪೊಲೀಸರು ಈ ವರ್ಷ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ ಸ್ಟ್ರೀಟ್ ಗಳಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು ನಗರಾದ್ಯಂತ 15 ಸಾವಿರ ಪೊಲೀಸರನ್ನು ನಿಯೋಜಿಸಲು ತೀರ್ಮಾನಿಸಿದ್ದಾರೆ.

      ನಗರದಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆಚರಣೆ ನೆಪದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸಾರ್ವಜನಿಕರ ಜತೆ ಅನುಚಿತವಾಗಿ ವರ್ತಿಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ, ನಗರದ ಹೊಸ ವರ್ಷಾಚರಣೆಯ ಕೇಂದ್ರ ಬಿಂದುವಾದ ಬ್ರಿಗೇಡ್ ರಸ್ತೆಯಲ್ಲಿ ಸ್ಥಳಾವಕಾಸ ಲಭ್ಯತೆಗೆ ಅನುಸಾರವಾಗಿ ನಿರ್ಭಂದಗಳನ್ನು ಹೇರಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ತಿಳಿಸಿದ್ದಾರೆ.

      New year celebration: 15 thousand cops deployed in Bengaluru

      ಎಂಜಿ ರಸ್ತೆ ಬ್ರಿಗೇಡ್ ರಸ್ತೆಯಲ್ಲಿ2500 ಪೊಲೀಸ್: ನಗರದ ಹೊಸ ವರ್ಷಾಚರಣೆಯ ಕೇಂದ್ರ ಸ್ಥಳ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಗಳಲ್ಲಿ ಎರಡೂವರೆ ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಅದರಲ್ಲಿ ಮಫ್ತಿ ಪೊಲೀಸರು ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಯೂ ಇರಲಿದ್ದಾರೆ.

      ಪೊಲೀಸರ ನಿಯೋಜನೆ: ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು, ಡಿಸಿಪಿಗಳು, ಇನ್ಸ್ ಪೆಕ್ಟರ್ ಗಳು, ಸಬ್ ಇನ್ಸ್ ಪೆಕ್ಟರ್ ಗಳು, ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳು, ಗೃಹ ರಕ್ಷಕ ಸಿಬ್ಬಂದಿ, ಸಿವಿಲ್ ಡಿಫೆನ್ಸ್, ಹೆಚ್ಚುವರಿ ಸಿಸಿ ಕ್ಯಾಮರಾ ಅಳವಡಿಸಿಲಾಗುತ್ತಿದೆ.

      ಹೆಚ್ಚುವರಿ ತುಕಡಿಗಳ ನಿಯೋಜನೆ: ಗಡುರಾ ಫೋರ್ಸ್ ಜತೆಗೆ ಕೆಎಸ್ ಆರ್ ಪಿ 40 ತುಕಡಿಗಳು, ನಗರ ಸಶಸ್ತ್ರ ಮೀಸಲು ಪಡೆಯ 30 ತುಕಡಿಗಳನ್ನು ನಿಯೋಜಿಸಲಾಗುತ್ತಿದೆ. 500 ಹೊಯ್ಸಳ ವಾಹನಗಳಲ್ಲಿ ಹಾಗೂ 250 ಬೈಕ್ ಗಳಲ್ಲಿ ಸಿಬ್ಬಂದಿ ಗಸ್ತು ತಿರುಗಲಿದ್ದಾರೆ.

      New year celebration: 15 thousand cops deployed in Bengaluru

      ಕಾಮಗಾರಿ ಹಿನ್ನೆಲೆ ನಿರ್ಬಂಧ: ಡಿ.31 ರ ರಾತ್ರಿ ಎಂಜಿ ರಸ್ತೆ , ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ನಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗುತ್ತದೆ. ಚರ್ಚ್ ಸ್ಟ್ರೀಟ್ ನಲ್ಲಿ ಟೆಂಡರ್ ಶ್ಯೂರ್ ಕಾಮಗಾರಿ ನಡೆಯುತ್ತಿರುವ ಕಾರಣ ಸಿಮೆಂಟ್ ಸ್ಲ್ಯಾಬ್ ಮತ್ತು ಗುಂಡಿ ತೋಡಲಾಗಿದೆ. ಈ ರಸ್ತೆಗಳಲ್ಲಿ ಸ್ಥಳಾವಕಾಶ ಲಭ್ಯತೆ, ಆಗಮಿಸುವ ಜನರ ದಟ್ಟಣೆ ಆಧರಿಸಿ ರಸ್ತೆಗಳಲ್ಲಿ ಜನರನ್ನು ಬಿಡಲಾಗುತ್ತದೆ.

      ಬೆಳಕಿನ ವ್ಯವಸ್ಥೆ: ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ನಲ್ಲಿ ವಿಶೇಷವಾಗಿ ಹೆಚ್ಚಿನ ವಿದ್ಯುತ್ ದೀಪಗಳ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಮೂಲಕ ಕಿಡಿಗೇಡಿಗಳು ಕಾನೂನು ಬಾಹಿರವಾಗಿ ಚಟುವಟಿಕೆಗಳಲ್ಲಿ ತೊಡಗಿದರೆ ಕ್ಯಾಮರಾದಲ್ಲಿ ಸೆರೆಯಾಗಲಿದೆ. ಈ ಮೂಲಕ ಆರೋಪಿಗಳ ಬಂಧನಕ್ಕೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+