New Year celebration 2024: ಬೆಂಗಳೂರಿನಲ್ಲಿ ಹೊಸವರ್ಷಕ್ಕೆ ಮಾರ್ಗಸೂಚಿಗಳು, ಯಾವಾಗಿನಿಂದ ಅನ್ವಯ?
ಬೆಂಗಳೂರು, ಡಿಸೆಂಬರ್, 17: ಇನ್ನೂ 15 ದಿನಗಳಲ್ಲಿ 2023ರ ವರ್ಷ ಮುಗಿಯಲಿದ್ದು, 2024ಕ್ಕೆ ದಾಪುಗಲಿಡಲಿದ್ದೇವೆ. ಹೊಸವರ್ಷಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇದ್ದು, ಡಿಸೆಂಬರ್ 31ರ ಮಧ್ಯರಾತ್ರಿಯಂದು ಯುವಕ, ಯುವತಿಯರು ಬೆಂಗಳೂರಿನಲ್ಲಿ ಕುಣಿದು ಕುಪ್ಪಳಿಸಲು ತುದಿಗಾಲಲ್ಲಿ ನಿಂತಿದ್ದಾರೆ.
ಇನ್ನು ಈ ಸಮಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿವೆ. ಇಲ್ಲಿವೆ ನೋಡಿ ವಿವರ.
ಬೆಂಗಳೂರಿನಲ್ಲಿ ಡಿಸೆಂಬರ್ 31ರ ರಾತ್ರಿಯಿಂದ ಸಂಭ್ರಮಾಚರಣೆ ಆರಂಭವಾಗಲಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ಕನ್ನಡ ನ್ಯೂಸ್ ವರದಿ ಮಾಡಿದೆ. ಹಾಗಾದರೆ ಮಾರ್ಗಸೂಚಿಯಲ್ಲಿ ಯಾವೆಲ್ಲ ಅಂಶಗಳಿವೆ ಎಂದು ಇಲ್ಲಿ ಗಮನಿಸಿ.
ಮಾರ್ಗಸೂಚಿಗಳಲ್ಲಿ ಏನಿದೆ?
1. ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
2. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ ನೀಡಲಾಗುತ್ತದೆ.
3. ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್‌ಗಳು ಬಂದ್ ಆಗಲಿದೆ.
4. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ. ಇದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಬಹುದು.

5. ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಲಿದೆ.
6. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ. ಇದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಬಹುದು.
7. ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಲಿವೆ.
8. ಸಂಭ್ರಮಾಚರಣೆಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಇರಲಿದೆ.
9. ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ ಮಾಡಲಾಗುತ್ತದೆ.
10. ಬಾರ್, ಪಬ್‌ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್‌ಗೆ ಸೂಚನೆ ನೀಡಿದೆ.
11. ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯವಾಗಲಿದೆ.
12. ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ ಹೇರಲಾಗಿದೆ.
13. ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ ಇದ್ದು, ಇದರಿಂದ ಮನೆಗೆ ಹೋಗಲು ಅನುಕೂಲ ಆಗುತ್ತದೆ.
14. ಕಳೆದ ಬಾರಿಯಂತೆ ಈ ಬಾರಿಯೂ ರಾತ್ರಿ 1 ಗಂಟೆವರೆಗೂ ನಮ್ಮ ಮೆಟ್ರೋ ಸಂಚಾರ ವ್ಯವಸ್ಥೆ ಇದೆ.












Click it and Unblock the Notifications