ಬೆಂಗಳೂರಲ್ಲಿ ಹೊಸ ವರ್ಷಾಚರಣೆ; ಗೃಹ ಸಚಿವರ ಸಭೆ
ಬೆಂಗಳೂರು, ನವೆಂಬರ್ 25 : ಕೋವಿಡ್ ಮಾರ್ಗಸೂಚಿಗಳ ಪ್ರಕಾರ 200ಕ್ಕೂ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆ ಹೇಗೆ? ಎಂಬ ಬಗ್ಗೆ ಪ್ರಶ್ನೆ ಎದ್ದಿದೆ.
ಬುಧವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೋವಿಡ್ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಸಂಬಂಧ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸಿದರು.
ಕರ್ನಾಟಕ; 1630 ಹೊಸ ಕೋವಿಡ್ ಪ್ರಕರಣಗಳು ದಾಖಲು
ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು ಪೊಲೀಸರ ಮುಂಜಾಗ್ರತೆ: ಶಾಂತವಾಗಿ ಶುರುವಾಯ್ತು ಹೊಸವರ್ಷ
ಕಳೆದ ವಾರ ಮಾತನಾಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ, "ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಗೆ ಅನುಮತಿ ನೀಡಬೇಕೆ? ಎಂದು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದರು.
ಕೊರೊನಾ ನಿಯಮ ಪಾಲಿಸದ 7 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್
ಪ್ರತಿ ವರ್ಷ ಬೆಂಗಳೂರು ನಗರದ ಎಂ. ಜಿ. ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆಗೆ ನಡೆಸಲಾಗತ್ತದೆ. ಸಾವಿರಾರು ಜನರು ಆಗಮಿಸುತ್ತಾರೆ. ಪೊಲೀಸರು ಸಹ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿರುತ್ತಾರೆ.
ಆದರೆ, ಈ ಬಾರಿ ಕೋವಿಡ್ ಕಾರಣದಿಂದಾಗಿ 200ಕ್ಕೂ ಅಧಿಕ ಜನರು ಸೇರುವಂತಿಲ್ಲ. ಹೀಗಾಗಿ ಗೃಹ ಸಚಿವರು ಸಭೆ ನಡೆಸಿ ಹೊಸ ವರ್ಷಾಚರಣೆಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಸರ್ಕಾರ ಹೊಸ ವರ್ಷಾಚರಣೆಗೆ ಮಾಡಲು ಅನುಮತಿ ನೀಡಲಿದೆಯೇ? ಕಾದು ನೋಡಬೇಕು.
ಕರ್ನಾಟಕದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವ ನಗರ ಬೆಂಗಳೂರು. ಬುಧವಾರ ನಗರದಲ್ಲಿ 916 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3,66.233. ಒಟ್ಟು ಸಕ್ರಿಯ ಪ್ರಕರಣಗಳು 18,360.